Get Updates
Get notified of breaking news, exclusive insights, and must-see stories!

Gruha Jyothi Scheme: ಗೃಹಜ್ಯೋತಿ ಯೋಜನೆ ಕುರಿತು ಹೊಸ ಅಪ್‌ಡೇಟ್‌ ಕೊಟ್ಟ ಕೆ ಜೆ ಜಾರ್ಜ್‌

ಬೆಂಗಳೂರು, ಫೆಬ್ರವರಿ 25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಈ ಬಗ್ಗೆ ವಿವರಣೆ ನೀಡಿದರು. ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಸ್ಪಷ್ಟಪಡಿಸಿದ್ದಾರೆ.

Gruha Jyothi subsidy paid in advance by government to ESCOMS KJ George

ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,"ಎಂದು ಅವರು ವಿವರ ನೀಡಿದರು.

ಕೆಇಆರ್‌ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್‌ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ," ಎಂದು ಸ್ಪಷ್ಟಪಡಿಸಿದರು.

"ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ಹೆಚ್.ಬಿ.ಆರ್. ಲೇಔಟ್ ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಪಕ್ಕದಲ್ಲಿ ಅಂದಾಜು 4.65 ಕೋಟಿ ರೂ. ವೆಚ್ಚದಲ್ಲಿ ಥೀಮ್ ಪಾರ್ಕ್ ಅಭಿವೃದ್ದಿ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ತರಬೇತಿ ಕೇಂದ್ರ ಹಾಗೂ ಗ್ರಾಮೀಣ ಆಟಗಳನ್ನು ಪ್ರೋತ್ಸಾಹಿಸುವ ಕೇಂದ್ರ ಇರಲಿದ್ದು, ಬಯಲು ರಂಗಮಂದಿರ, ವಾಕಿಂಗ್ ಪಾಥ್ ಹಾಗೂ ಓಪನ್ ಜಿಮ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕ, ಶೌಚಾಲಯ ವ್ಯವಸ್ಥೆ ಇರಲಿದೆ ಎಂದು ಹೇಳಿದರು. ಅಲ್ಲದೆ, ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ನಿರ್ದೇಶನ ನೀಡಿದರು.

ಜೀವ ವೈವಿದ್ಯ ಉದ್ಯಾನದದಲ್ಲಿ ವಿಶೇಷ ಪ್ರಬೇಧದ ಸಸ್ಯಗಳನ್ನು ಬೆಳೆಸಿ, ವೈಜ್ಞಾನಿಕ ಹೆಸರನ್ನು ಪ್ರದರ್ಶಿಸಬೇಕು. ಉತ್ತಮ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಹಾಗೂ ವಾಯು ವಿಹಾರಿಗಳಿಗೆ ನಡಿಗೆ ಪಥ ನಿರ್ಮಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜೀವ ವೈವಿಧ್ಯ ಉದ್ಯಾನಕ್ಕೆ 2.75 ಕೋಟಿ ವೆಚ್ಚದಲ್ಲಿ ಕಾಯಕಲ್ಪ ನೀಡಲಾಗುತ್ತಿದ್ದು, ಅರಣ್ಯ ಇಲಾಖೆ 2 ಕೋಟಿ ನೀಡಲಿದೆ. ಇದೇ ವೇಳೆ ಸಚಿವ ಕೆ.ಜೆ.ಜಾರ್ಜ್ ಅವರು, ಯೋಜನೆಗೆ ಸಿಎಸ್ಆರ್ ಅನುದಾನದಡಿ 75 ಲಕ್ಷ ರೂ. ಒದಗಿಸುವುದಾಗಿ ಘೋಷಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+