ಗೃಹಜ್ಯೋತಿ; ಬಾಡಿಗೆದಾರರ ಗೊಂದಲ, ಇಂಧನ ಇಲಾಖೆ ಸ್ಪಷ್ಟನೆಗಳು

ಬೆಂಗಳೂರು, ಜೂನ್ 16; ಕರ್ನಾಟಕದ ಕಾಂಗ್ರೆಸ್ ಸರ್ಕಾರ ವಿಧಾನಸಭೆ ಚುನಾವಣೆ ಸಮಯದಲ್ಲಿ ನೀಡಿದ್ದ 5 ಗ್ಯಾರಂಟಿಗಳಲ್ಲಿ 'ಗೃಹಜ್ಯೋತಿ' ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಆಗಸ್ಟ್‌ನಲ್ಲಿ ಯೋಜನೆ ಜಾರಿಗೆ ಬರಲಿದ್ದು, ಯೋಜನೆ ಫಲಾನುಭವಿಯಾಗಲು ಜೂನ್ 18ರಿಂದ ಅರ್ಜಿ ಸಲ್ಲಿಸಬಹುದು.

ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ಇದಾಗಿದೆ. ಆದರೆ 'ಗೃಹಜ್ಯೋತಿ' ಯೋಜನೆ ಬಗ್ಗೆ ಬಾಡಿಗೆ ಮನೆಯಲ್ಲಿ ವಾಸಿಸುವ ಜನರಿಗೆ ಹಲವಾರು ಗೊಂದಲಗಳಿವೆ. ಇದಕ್ಕೆ ಇಂಧನ ಇಲಾಖೆ ಸ್ಪಷ್ಟೀಕರಣ ನೀಡಿದೆ.

Gruha Jyoti Scheme Rented House Confusion And Clarification

ವಿನೋದ್‌ ಕುಮಾರ್ ಡಿ. ಎಂ. ಸರ್ಕಾರದ ಅಧೀನ ಕಾರ್ಯದರ್ಶಿ, ಇಂಧನ ಇಲಾಖೆ ಬಾಡಿಗೆ ಮನೆಯಲ್ಲಿ ವಾಸಿಸುವ ಜನರ ಸಾಮಾನ್ಯ ಗೊಂದಲಗಳನ್ನು ಪರಿಹರಿಸಿದ್ದಾರೆ. ಈ ಕುರಿತು ಪ್ರಕಟಣೆ ಮೂಲಕ ಅವರು ಮಾಹಿತಿ ನೀಡಿದ್ದಾರೆ.

ಗೊಂದಲಗಳು, ಪರಿಹಾರ; ಈ ಯೋಜನೆಯು ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಗೃಹ ವಿದ್ಯುತ್ ಬಳಕೆದಾರಿಗೂ ಅನ್ವಯವಾಗಲಿದೆಯೇ? ಎಂಬುದು ಸಾಮಾನ್ಯ ಪ್ರಶ್ನೆಯಾಗಿತ್ತು.

ಗೃಹ ವಿದ್ಯುತ್ ಬಳಕೆದಾರರು ಬಾಡಿಗೆದಾರರಾಗಿದ್ದಲ್ಲಿ, ವಾಸದ ಮನೆಯ ವಿಳಾಸಕ್ಕೆ ಸಂಬಂಧಿಸಿದಂತೆ ಆಧಾರ್ ಸಂಖ್ಯೆಯನ್ನು ಸೇವಾ ಸಿಂಧು ಪೋರ್ಟಲ್‌ನಲ್ಲಿ ಜೋಡಣೆ ಮಾಡಿ ನೋಂದಾಯಿಸುವ ಮೂಲಕ ಸದರಿ ಸೌಲಭ್ಯವನ್ನು ಪಡೆಯುವುದು.

ಗೃಹ ಬಳಕೆದಾರರು/ ಫಲಾನುಭವಿಗಳು ಯಾವುದಾದರೂ ತಿಂಗಳಿನಲ್ಲಿ 200 ಯುನಿಟ್‌ಗಳ ಬಳಕೆಯ ಮಿತಿಯನ್ನು ಮೀರಿದಲ್ಲಿ, ಯೋಜನೆಯಲ್ಲಿ ಮುಂದುವರೆಯುವರೇ?.

ಹೌದು, 200 ಯುನಿಟ್‌ಗಳ ಬಳಕೆಯ ಮಿತಿಯನ್ನು ಯಾವುದಾದರೂ ತಿಂಗಳು ಮೀರಿದಲ್ಲಿ, ಆ ತಿಂಗಳ ಪೂರ್ಣ ವಿದ್ಯುತ್ ಯುನಿಟ್ ಬಿಲ್‌ ಪಾವತಿ ಮಾಡಿ, ಸದರಿ ಯೋಜನೆಯಲ್ಲಿ ಮುಂದುವರಿಯುವುದು.

ಹೊಸ ಗೃಹ ಬಳಕೆ ಸಂಪರ್ಕ; ಸರ್ಕಾರದ ಆದೇಶದ ನಂತರ ಹೊಸದಾಗಿ ಗೃಹಬಳಕೆಗಾಗಿ ವಿದ್ಯುತ್‌ ಸಂಪರ್ಕ ಪಡೆದ ಗ್ರಾಹಕರಿಗೆ/ ಬಳಕೆದಾರರಿಗೆ ಈ ಯೋಜನೆ ಅನ್ವಯವಾಗುತ್ತದೆಯೇ?

ಹೌದು, ಹೊಸ ಸಂಪರ್ಕ ಪಡೆದ ಗ್ರಾಹಕರಿಗೆ ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹ ಬಳಕೆದಾರರ ಸರಾಸರಿ ಬಳಕೆ ಮಾಸಿಕ 53 ಯುನಿಟ್ ಆಗಿರುವುದರಿಂದ 53 ಯುನಿಟ್‌ಗಳನ್ನೇ ನಿರ್ಧರಿಸಿ ಈ ಯೋಜನೆ ಸೌಲಭ್ಯವನ್ನು ವಿಸ್ತರಿಸುವುದು ಎಂದು ಸ್ಪಷ್ಟನೆ ನೀಡಲಾಗಿದೆ.

2022-23ರಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯ ಬಳಕೆ ದಾಖಲಾಗಿದ್ದಲ್ಲಿ ಅಂತಹ ಮನೆಗಳ ಕಡಿಮೆ ಅವಧಿಯ ಸರಾಸರಿ ಪರಿಗಣಿಸುವ ವಿಧಾನ ಹೇಗೆ?.

ಬಳಕೆ ಇತಿಹಾಸ ಇಲ್ಲದಿರುವುದರಿಂದ ರಾಜ್ಯದ ಗೃಹಬಳಕೆದಾರರ ಸರಾಸರಿ ಬಳಕೆಯು ಮಾಸಿಕ 53 ಯುನಿಟ್‌ಗಳಾಗಿರುವುದರಿಂದ 53 ಯುನಿಟ್‌ಗಳನ್ನೇ ನಿರ್ಧರಿಸಿ ಈ ಯೋಜನೆ ಸೌಲಭ್ಯವನ್ನು ವಿಸ್ತರಿಸುವುದು.

Multi Stored Apartmentಗಳಿಗೆ ಈ ಯೋಜನೆ ಹೇಗೆ ಅನ್ವಯವಾಗುತ್ತದೆ?. ಯಾವ ಮನೆಗಳಿಗೆ ಪ್ರತ್ಯೇಕ ಮೀಟರ್ ಇದೆಯೋ ಹಾಗೂ ಮೀಟರ್ ರೀಡಿಂಗ್ ಮಾಡಲಾಗುತ್ತದೆಯೋ ಅಂತಹ ಎಲ್ಲಾ ಮನೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ.

ಜೂನ್‌ 18ರಿಂದ ಅರ್ಜಿ ಸಲ್ಲಿಕೆ; ಇಂಧನ ಇಲಾಖೆ ಈಗಾಗಲೇ 'ಗೃಹಜ್ಯೋತಿ' ಯೋಜನೆಯಡಿ ಫಲಾನುಭವಿಗಳ ನೋಂದಣಿ ಜೂನ್ 18ರಿಂದ ಪ್ರಾರಂಭಿಸಲಾಗುವುದು ಎಂದು ಹೇಳಿದೆ. ಫಲಾನುಭವಿಗಳು ಸೇವಾ ಸಿಂಧು ರ್ಪೋಟಲ್‌ನಲ್ಲಿ (https://sevasindhugs.karnataka.gov.in) ಮೂಲಕ ನೋಂದಣಿ ಮಾಡಿಕೊಳ್ಳಬೇಕು.

'ಗೃಹ ಜ್ಯೋತಿ' ಯೋಜನೆಯಡಿ ಉಚಿತ ವಿದ್ಯುತ್‌ ಪಡೆಯಲು ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ID ಗಳ ಮಾಹಿತಿಗಳನ್ನು (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕಾಗುತ್ತದೆ. ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರ ಅಥವಾ ಯಾವುದೇ ವಿದ್ಯುತ್ ಕಛೇರಿಗಳಲ್ಲಿಯೂ ಸಹ ಅರ್ಜಿ ಸಲ್ಲಿಕೆ ಮಾಡಲು ಅವಕಾಶವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+