Gruha Lakshmi: ಗೃಹಲಕ್ಷ್ಮಿ ಎರಡು ಕಂತಿನ ಹಣ ಇದೇ ದಿನ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್
Gruha Lakshmi: ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಾಕಿ ಉಳಿದಿದ್ದು. ಈ ಬಾಕಿ ಮೊತ್ತ ಹಣ ಬಿಡುಗಡೆಯಾಗಿ ಮಹಿಳೆಯರು ಕಾಯುತ್ತಿದ್ದಾರೆ. ಪ್ರತಿ ತಿಂಗಳೂ ಸಹ ಗೃಹಲಕ್ಷ್ಮಿ ಹಣ ಸಕಾಲದಲ್ಲಿ ಬಿಡುಗಡೆ ಆಗುತ್ತಿಲ್ಲ. ಇನ್ನೂ ಇಲ್ಲಿಯ ವರೆಗೆ 2 ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆಯಾಗಿಲ್ಲ. ಇದೀಗ ಈ ಎರಡು ಕಂತಿನ ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಕಂತಿಯ ಹಣ ಯಾವಾಗ ಮಹಿಳೆಯರ ಖಾತೆಗೆ ಜಮೆ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಪ್ಡೇಟ್ ಕೊಟ್ಟಿದ್ದಾರೆ. ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಭಾನುವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ನಮ್ಮ ಸರ್ಕಾರವು ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ನಾವು 2 ಸಾವಿರ ರೂಪಾಯಿ ಹೆಚ್ಚಿಸಿದ್ದೇವೆ. ಇದಾದ ಮೇಲೆ ಇಲ್ಲಿಯ ವರೆಗೆ ಯಾವುದೇ ಸರ್ಕಾರಗಳೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಲಿಲ್ಲ.

ಇನ್ನು ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂಪಾಯಿ ಹಾಗೂ ಸಹಾಯಕಿಯರ ಗೌರವಧನವನ್ನು 750 ರೂಪಾಯಿ ಹೆಚ್ಚಳ ಮಾಡುವುದಾಗಿ ಹೇಳಲಾಗಿದೆ. ಇದನ್ನು ಸಹ ನಾವು ಮುಂದಿನ ದಿನಗಳಲ್ಲಿ ಜಾರಿಗೆ ತರುಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಯಾವಾಗ ಬರಲಿದೆ ಗೃಹಲಕ್ಷ್ಮಿ ಹಣ ?
ಇನ್ನು ರಾಜ್ಯದಲ್ಲಿ ಗೃಹಲಕ್ಷ್ಮಿ ಹಣದ ಬಾಕಿ ಎರಡು ಕಂತಿನ ಹಣ ಯಾವಾಗ ಬಿಡುಗಡೆ ಆಗಲಿದೆ ಎನ್ನುವ ಮಾಹಿತಿಯನ್ನು ಅವರು ಇದೇ ಸಂದರ್ಭದಲ್ಲಿ ನೀಡಿದ್ದಾರೆ. ಮಾರ್ಚ್ 31ರ ನಂತರ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಹನಿಟ್ರ್ಯಾಪ್ ಬಗ್ಗೆ ಹೇಳಿದ್ದೇನು: ಇನ್ನು ರಾಜ್ಯದಲ್ಲಿ ನಡೆಯುತ್ತಿರುವ ಹನಿಟ್ರ್ಯಾಪ್ ಪ್ರಕರಣದ ಬಗ್ಗೆಯೂ ಅವರು ಮಾತನಾಡಿದ್ದಾರೆ. ಸಚಿವ ಕೆ.ಎನ್.ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ ಎನ್ನುವ ಬಗ್ಗೆ ರಿಯಾಕ್ಟ್ ಮಾಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಪ್ರಯತ್ನ ಮಾಡಿರುವುದು ದುರದೃಷ್ಟಕರ ಸಂಗತಿ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ರಾಜಣ್ಣ ಅವರು ತಮಗೆ ಆಗಿರುವ ಅನುಭವವನ್ನು ಸದನದಲ್ಲಿ ಹೇಳಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ಈಗಾಗಲೇ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅವರು ಈ ವಿಷಯದ ಬಗ್ಗೆ ನೋಡಿಕೊಳ್ಳಲಿದ್ದಾರೆ. ಈ ವಿಚಾರವಾಗಿ ನಾನೇನೂ ಮಾತನಾಡಲ್ಲ ಎಂದಿದ್ದಾರೆ.
ಇನ್ನು ಘರ್ಜಿಸುವ ಹುಲಿಗಳನ್ನೇ ನೋಡಿಕೊಂಡು ಈಗ ಟಾರ್ಗೆಟ್ ಮಾಡಿ ಹೆದರಿಸಲಾಗುತ್ತಿದೆ ಎನ್ನುವ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಹೇಳಿಕೆಗೆ ರಿಯಾಕ್ಟ್ ಮಾಡುವುದಕ್ಕೂ ಅವರು ನೋ ಅಂತ ಹೇಳಿದ್ದು. ಇದನ್ನು ನೀವು ಅವರ ಬಳಿಯೇ ಕೇಳಿ ಅಂತ ಉತ್ತರಿಸಿದ್ದಾರೆ.
ಎರಡು ಕಂತಿನ ಹಣ ಒಂದೇ ದಿನ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಒಂದೇ ದಿನ ಬಿಡುಗಡೆಯಾಗಲಿದೆ ಎಂದು ಹೇಳಲಾಗಿದೆ. ಯುಗಾದಿ ಹಬ್ಬದ ಸಮಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಜಮೆಯಾಗುವ ಸಾಧ್ಯತೆ ಇದೆ.












Click it and Unblock the Notifications