ರಾಜ್ಯದ ಗೃಹ ಲಕ್ಷ್ಮೀ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ!
ಬೆಂಗಳೂರು, ನವೆಂಬರ್ 11: ಕರ್ನಾಟಕ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರವು ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘದ ಕುರಿತು ಮಾಹಿತಿ ನೀಡಿದ್ದು, ಇದೀಗ ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತವನ್ನು ಸಹಕಾರ ಇಲಾಖೆಯಲ್ಲಿ ನೋಂದಾಯಿಸಿ, ಸಹಕಾರ ಸಂಘಗಳ ಅಪರ ನಿಬಂಧಕರಿಂದ ನೋಂದಣಿ ಪ್ರಮಾಣಪತ್ರವನ್ನು ಪಡೆಯಲಾಗಿದೆ.
ಗೃಹಲಕ್ಷ್ಮಿ ಸಂಘದ ಪ್ರಮಾಣ ಪತ್ರ ಹಸ್ತಾಂತರ
ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ವಿಧಾನಸೌಧದ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ. ನವೆಂಬರ್ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.
ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ. ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.
ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಸನ್ಮಾನಿಸಲಾಯಿತು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications