Nikhil Kumaraswamy: ಚುನಾವಣೆ 2 ದಿನ ಇದ್ದಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ: ನಿಖಿಲ್ ಕಿಡಿ
ರಾಮನಗರ, ನವೆಂಬರ್ 25: ಚುನಾವಣೆ ಎರಡು ದಿನ ಇರುವಾಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಹಾಕ್ತಾರೆ. ಇದನ್ನ ಚುನಾವಣಾ ಆಯೋಗ ಗಮನಿಸಬೇಕು. ಸರ್ಕಾರದ ಹಣ ಕನ್ನಡಿಗರ ತೆರಿಗೆ ಹಣವನ್ನು ಚುನಾವಣೆ ವೇಳೆ ಹಾಕ್ತಾರೆ.ನಾವು ಹೋರಾಟ ಈ ವಿಚಾರದಲ್ಲಿ ಮಾಡಲ್ಲ ಹೋರಾಟ ಮಾಡಲು ಸರ್ಕಾರದ ಸಾಕಷ್ಟುವೈಫಲ್ಯಗಳಿವೆ, ಹಲವು ವಿಚಾರಗಳಿವೆ. ಮುಂದೆ ನಾವು ಹೋರಾಟ ಮಾಡ್ತೇವೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ನಾನು ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲಿಯೇ ಹುಡುಕುತ್ತೇನೆ. ಇಲ್ಲಿಯೇ ಮುಂದಿನ ರಾಜಕೀಯ ಮುಂದುವರೆಸುತ್ತೇನೆ. ಕ್ಷೇತ್ರದಲ್ಲಿ ನಮ್ಮ ಪಕ್ಷದ ಮೇಲೆ ದೊಡ್ಡ ಮಟ್ಟದ ಅಭಿಮಾನ ಇದೆ.ಪಕ್ಷದ ಕಾರ್ಯಕರ್ತರ ಜೊತೆಗೆ ನಾವು ಸದಾ ಇರುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಮುಸ್ಲಿಂ ಮತಗಳು ಬಂದಿಲ್ಲ ಎಂಬ ಮಾಧ್ಯಮದವರು ಪ್ರಶ್ನೆಗೆ ಪ್ರತಿಕ್ರಿಯಿಸಿ ಅವರು , ಈ ಚುನಾವಣೆಯಲ್ಲಿ ಹೆಚ್ಚಿನ ಮತ ಬಂದಿದೆ. ಆದರೆ ಒಂದು ಸಮುದಾಯದ ಮತಗಳು ಬಂದಿಲ್ಲ. ದೇವೇಗೌಡರ ಕೊಡುಗೆಯನ್ನ ನೆನಪಿಸಿಕೊಂಡಿಲ್ಲ. ನಮ್ಮ ಅವಶ್ಯಕತೆ ಅವರಿಗೆ ಇಲ್ಲ ಅನಿಸುತ್ತೆ. ಹಾಗಾಗಿ ನಾವು ಸಹ ಅವರನ್ನ ಬಿಟ್ಟು ಸ್ಟ್ರಾಟರ್ಜಿ ಮಾಡಬೇಕಾಗುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
DK Shivakumar: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆಲುವಿಗೆ ಇದೇ ಕಾರಣ: ಡಿ ಕೆ ಶಿವಕುಮಾರ್
ನಾವು ಕಾಂಗ್ರೆಸ್‌ನವರ ಬಳಿ ಹೋಗಿರಲಿಲ್ಲ. ಅವರೇ ನಮ್ಮ ಬಳಿ ಬಂದರು ಸರ್ಕಾರ ಮಾಡಿದ್ದೆವು.ಆದರೆ ಅವರು ನಮಗೆ ಅನ್ಯಾಯ ಮಾಡಿದ್ದಕ್ಕೆ ನಾವು ಬಿಜೆಪಿಗೆ ಹೋಗಿದ್ದೇವೆ. ನನ್ನ ಸೋಲಿನ ಅಂತರ ನೋಡಿದಾಗ ಆದರ ಹಳವನ್ನು ಯಾರು ಹುಡುಕುತಿಲ್ಲ, ಆ ಸಮುದಾಯದ ವನ್ನು ಬದಿಗಿಟ್ಟು ಮಾತಾಡಿದರೆ. ನಾವು ಸಮಬಲ ಹೋರಾಟ ಮಾಡಿದ್ದೇನೆ ಹಳ್ಳಿಗಳಲ್ಲಿ ನಮ್ಮ ನಿರೀಕ್ಷಿಗೂ ಮೀರಿ ಜನ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದರು.
ನಾನು ಸೋತಿದ್ದೇನೆ ಎಂದು ನಾನು ಮನೆಯಲ್ಲಿ ಕುರುವು ಜಾಯಮಾನ ನಂದಲ್ಲ. ಈ ಹೋರಾಟ ಹೊಸದೇನು ಅಲ್ಲ ನಮ್ಮ ಪಕ್ಷಕ್ಕೆ ನಾನು ಹೋರಾಟದ ಕಿಚ್ಚನ್ನು ನಾನು ರೂಡಿಸಿಕೊಂಡಿದ್ದೇನೆ. ಕಾಂಗ್ರೆಸ್ ನಡವಳಿಕೆ ಸರ್ಕಾರದ ವೈಫಲ್ಯಗಳ ಬಗ್ಗೆ ಜನಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಾನು ಹೋರಾಟ ಮಾಡುತ್ತೇನೆ ಎಂದು ತಿಳಿಸಿದರು.












Click it and Unblock the Notifications