Karnataka Budget 2023: ಗೃಹಲಕ್ಷ್ಮಿ ಗ್ಯಾರಂಟಿ: ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆ- ತಲುಗುವ ವೆಚ್ಚ, ವಿವರ

ಬೆಂಗಳೂರು, ಜುಲೈ 07: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14 ನೇ ಬಜೆಟ್‌ ( Karnataka Budget 2023 ) ಮಂಡಿಸುವ ಮೂಲಕ ದಾಖಲೆ ಮಾಡಿದ್ದಾರೆ. ಐತಿಹಾಸಿಕ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಗೆ ಭರಪೂರ ಅನುಧಾನವನ್ನು ಘೋಷಿಸಿದ್ದಾರೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅತಿ ಹೆಚ್ಚು ಹಣ ನೀಡುವ ಮೂಲಕ ತಮ್ಮದು ಮಹಿಳಾ ಕೇಂದ್ರಿತ ಸರ್ಕಾರವೆಂದು ಬಿಂಬಿಸಲು ಪ್ರಯತ್ನಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ

ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ನೆರವಿನ ನೇರ ವರ್ಗಾವಣೆಯನ್ನು ಮಾಡುವುದಾಗಿ ಕಾಂಗ್ರೆಸ್‌ ಘೋಷಣೆ ಮಾಡಿತ್ತು.

Gruha Lakshmi: Indias Biggest Financial Security program by Govt: Know the total Scheme cost

ಈ ಹಿನ್ನೆಲೆಯಲ್ಲಿ ಈ ಯೋಜನೆಗೆ ವಾರ್ಷಿಕ ಅಂದಾಜು 30,000 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದ್ದು, ಇದು ದೇಶದಲ್ಲಿಯೇ ಅತಿ ದೊಡ್ಡ ಆರ್ಥಿಕ ಭದ್ರತಾ ಯೋಜನೆಯಾಗಿದೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಯೋಜನೆಯು ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸಹಕಾರಿ ಆಗಲಿದೆ. ಬೆಲೆಯೇರಿಕೆಯಿಂದ ತತ್ತರಿಸಿರುವ ಕುಟುಂಬಗಳಿಗೆ ನೆಮ್ಮದಿ ನೀಡಲಿದೆ. ಸುಮಾರು 1.30 ಕೋಟಿ ಮಹಿಳೆಯರಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ಜೂನ್ 16ರಂದು ಅರ್ಜಿ ಸ್ವೀಕಾರ

ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ ರೂ 2,000 ಮಾಸಿಕ ಭತ್ಯೆ ನೀಡುವ ಅರ್ಜಿಗಳನ್ನು ಶುಕ್ರವಾರದಿಂದ (ಜೂನ್ 16) ಸ್ವೀಕರಿಸಲಾಗುವುದು ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ.

Gruha Lakshmi: Indias Biggest Financial Security program by Govt: Know the total Scheme cost

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ವಿಷಯ ತಿಳಿಸಿದರು. ಫಲಾನುಭವಿಗಳು ನಾಳೆಯಿಂದ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅವರು ಹೇಳಿದರು.

'ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವವರು ಅರ್ಜಿಗಳನ್ನು ಸಲ್ಲಿಸಬಹುದು. ಅವರು ಸೇವಾ ಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದು' ಎಂದು ಮಾಹಿತಿ ನೀಡಿದರು.

ಅರ್ಜಿದಾರರು ತಮ್ಮ ಮತ್ತು ಪತಿಯ ಆಧಾರ್ ಕಾರ್ಡ್ ಅನ್ನು ಒದಗಿಸಬೇಕು. ಯಾವುದೇ ಅನುಮಾನಗಳಿದ್ದಲ್ಲಿ, ಅವರು 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

Gruha Lakshmi: Indias Biggest Financial Security program by Govt: Know the total Scheme cost

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕವಿಲ್ಲ. ಅರ್ಜಿಗಳನ್ನು ಸ್ವೀಕರಿಸುವ ಪ್ರಕ್ರಿಯೆಯು ವರ್ಷಪೂರ್ತಿ ಇರುತ್ತದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಭವನದಲ್ಲಿ ಸೇವಾ ಸಿಂಧು ಪೋರ್ಟಲ್‌ಗೆ ಚಾಲನೆ ನೀಡಲಿದ್ದು, ಫಲಾನುಭವಿಗಳು ಮಧ್ಯಾಹ್ನ 1.30 ರಿಂದ ಅರ್ಜಿಗಳನ್ನು ಸಲ್ಲಿಸಬಹುದು ಎಂದು ತಿಳಿಸಿದರು.

ಈ ಯೋಜನೆಯಿಂದ ಸರಕಾರಕ್ಕೆ ವಾರ್ಷಿಕ 30,000 ಕೋಟಿ ರೂಪಾಯಿ ವೆಚ್ಚವಾಗುವ ನಿರೀಕ್ಷೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿವರಿಸಿದರು. ಆಗಸ್ಟ್ 18 ರಂದು ಸಿದ್ದರಾಮಯ್ಯ ಅವರು ಹುಬ್ಬಳ್ಳಿ ಅಥವಾ ಬೆಳಗಾವಿ ನಗರಗಳಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ.

ತೆರಿಗೆದಾರರ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಮತ್ತು ವಾಸ್ತವವನ್ನು ಮರೆಮಾಚಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಕಾಂಗ್ರೆಸ್ ಸರ್ಕಾರ ಈಗಾಗಲೇ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. 200 ಯೂನಿಟ್ ಉಚಿತ ವಿದ್ಯುತ್ ಈಗಾಗಲೇ ಜಾರಿಯಲ್ಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+