Get Updates
Get notified of breaking news, exclusive insights, and must-see stories!

Gruha Lakshmi Scheme: ಮಹಿಳೆಯರಿಗೆ ಗುಡ್ ನ್ಯೂಸ್: ಎರಡು ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ

ಬೆಂಗಳೂರು, ಮಾರ್ಚ್‌ 15: ಕಾಂಗ್ರೆಸ್ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಶೀಘ್ರವೇ ಗುಡ್‌ ನ್ಯೂಸ್‌ ಸಿಗಲಿದೆ. ಈಗಾಗಲೇ 16 ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದೆ. ಬಾಕಿ ಇರುವ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆದಿದ್ದು, ಜನವರಿ ಹಾಗೂ ಫೆಬ್ರವರಿ ಗೃಹ ಲಕ್ಷ್ಮಿ ಹಣ ಬಿಡುಗಡೆ ಕುರಿತು ಸಚಿವರು ಸದನದಲ್ಲಿ ಉತ್ತರಿಸಿದ್ದಾರೆ.

ಗೃಹಲಕ್ಷ್ಮಿ ಹಣ ಬಾಕಿ ಇರುವ ಬಗ್ಗೆ, ವಿಧಾನಸಭೆಯಲ್ಲಿ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ಪ್ರಶ್ನಿಸಿ, ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ದೂರಿದ್ದಾರೆ. ಅವರ ಪ್ರಶ್ನೆಗೆ ಸಚಿವ ಲಕ್ಷ್ಮಿ ಹೆಬ್ಬಾಳ್ಳರ್ ಅವರ ಪರವಾಗಿ ಸಂತೋಷ ಲಾಡ್ ಉತ್ತರ ನೀಡಿ, ಸಂಪನ್ಮೂಲ ಸಂಗ್ರಹವನ್ನು ಆಧರಿಸಿ ಸರ್ಕಾರ ಹಣ ಬಿಡುಗಡೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಖಜಾನೆಯಲ್ಲಿ ಸಮಸ್ಯೆಗಳ ಕಾರಣದಿಂದ ಎರಡು ತಿಂಗಳ ಹಣ ಬಿಡುಗಡೆಯಾಗಿಲ್ಲ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಪುಸಕ್ತ ವರ್ಷದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆ ಬಾಕಿ ಇದ್ದು, ಶೀಘ್ರದಲ್ಲಿಯೇ ಬಾಕಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದ್ದಾರೆ

Gruha Lakshmi Money For January And February Will Be Released soon Santhosh Lad

ಭೂ ಮಾಲೀಕರುಗಳಿಗೆ ಪರಿಹಾರ ವಿತರಿಸಲು ಕ್ರಮ: ಎಂ.ಬಿ.ಪಾಟೀಲ್

ನೆಲಮಂಗಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನೆಲಮಂಗಲ ತಾಲ್ಲೂಕಿನಾದ್ಯಂತ ಕೆ.ಐ.ಎ.ಡಿ.ಬಿ ಹಾಗೂ ವಿವಿಧ ಸರ್ಕಾರದ ಯೋಜನೆಗಳಿಗಾಗಿ ರೈತರ ಜಮೀನುಗಳನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು, ಭೂ ಮಾಲೀಕರುಗಳಿಗೆ ಪರಿಹಾರ ವಿತರಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ಶುಕ್ರವಾರ ವಿಧಾನಸಭೆಯ ಕಲಾಪದ ವೇಳೆ ಸದಸ್ಯ ಎನ್ ಶ್ರೀನಿವಾಸ್ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ನೆಲಮಂಗಲ ತಾಲ್ಲೂಕಿನಾದ್ಯಂತ ಕೆ.ಐ.ಎ.ಡಿ.ಬಿ ಹಾಗೂ ವಿವಿಧ ಸರ್ಕಾರದ ಯೋಜನೆಗಳಿಗಾಗಿ ರೈತರ ಜಮೀನುಗಳನ್ನು ಭೂಸ್ವಾಧೀನ ಪಡಿಸಿಕೊಂಡಿದ್ದು, ಅದರಲ್ಲಿ ಸರ್ಕಾರಿ ಗೋಮಾಳ ಜಮೀನುಗಳಲ್ಲಿ ಭೂ ರಹಿತ ರೈತರು ನಮೂನೆ-59, ನಮೂನೆ-57 ಅರ್ಜಿ ಸಲ್ಲಿಸಿಕೊಂಡು ಸುಮಾರು 30-40 ವರ್ಷಗಳಿಂದ ಉಳುಮೆ ಮಾಡಿಕೊಂಡು ಜೀವನ ನಡೆಸುತ್ತಿರುತ್ತಾರೆ. ಅವರ ಅರ್ಜಿಗಳು ಭೂ-ಮಂಜೂರಾತಿ ಸಮಿತಿಯ ಮುಂದೆ ಬಾಕಿಯಿದ್ದು, ಅಂತಹ ರೈತರ ಜಮೀನುಗಳನ್ನು ಸಹ ಈ ಕೆ.ಐ.ಎ.ಡಿ.ಬಿ ಹಾಗೂ ವಿವಿಧ ಸರ್ಕಾರದ ಯೋಜನೆಗಳಿಗಾಗಿ ಭೂ-ಸ್ವಾಧೀನಪಡಿಸಿಕೊಂಡಿರುವ ಕಾರಣ ಅವರಿಗೆ ಯಾವುದೇ ಪರಿಹಾರ ಕೊಡದೇ ಅವರನ್ನು ಅಂತಹ ಉಳುಮೆ ಮಾಡಿಕೊಂಡಿರುವ ಜಮೀನುಗಳಿಂದ ಒಕ್ಕಲೆಬ್ಬಸುತ್ತಿರುವ ಕುರಿತು ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಗಮನ ಸೆಳೆದರು.

ಈ ಸಂದರ್ಭದಲ್ಲಿ ಉತ್ತರಿಸಿದ ಸಚಿವರು, ಭೂ ಸ್ವಾಧೀನಪಡಿಸಿ ಜಮೀನುಗಳಿಗೆ ಭೂ ಮಾಲೀಕರುಗಳು ತಮ್ಮ ಭೂಮಿಯ ಮೇಲಿನ ಹಕ್ಕಿಗೆ ಸಂಬಂಧಪಟ್ಟಂತೆ ಸೂಕ್ತ ದಾಖಲೆಗಳನ್ನು ಹಾಜರುಪಡಿಸಿದ್ದಲ್ಲಿ ನಿಯಮಾನುಸಾರ ಪರಿಹಾರ ವಿತರಣೆ ಕ್ರಮ ಕೈಗೊಳ್ಳಲಾಗುತ್ತದೆ. ಸ್ವಾಧೀನಪಡಿಸಿದ ಜಮೀನುಗಳ ಮೇಲೆ ಹಕ್ಕಿಗೆ ಸಂಬಂಧಪಟ್ಟಂತೆ ವ್ಯಾಜ್ಯಗಳಿದ್ದಲ್ಲಿ ಅಥವಾ ಭೂ ಸ್ವಾಧೀನವನ್ನು ಪ್ರಶ್ನಿಸಿ ಮಾನ್ಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಲ್ಲಿ, ಭೂ ಸ್ವಾಧೀನ ಪ್ರಕ್ರಿಯೆಯು ವಿಳಂಬವಾಗುವುದನ್ನು ತಡೆಯಲು ಹಾಗೂ ರಾಜ್ಯದ ಕೈಗಾರಿಕಾ ಬೆಳವಣಿಗೆ ಹಿತದೃಷ್ಠಿಯಿಂದ ಸಾಮಾನ್ಯ ಐತೀರ್ಪು ರಚಿಸಿ, ಐ ತೀರ್ಪು ಮೊತ್ತವನ್ನು ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ಠೇವಣಿಕರಿಸಲಾಗುವುದು.

ಸರ್ಕಾರಿ ಗೋಮಾಳ ಮತ್ತು ಇತರೆ ಜಮೀನುಗಳಲ್ಲಿ ಭೂ ಮಂಜೂರಾತಿ ಅಧಿನಿಯಮದಡಿ ನಮೂನೆ-53 ಹಾಗೂ ನಮೂನೆ 57ರಲ್ಲಿ ಅರ್ಜಿ ಸಲ್ಲಿಸಿ ಭೂ ಸಕ್ರಮಿಕರಣ ಸಮಿತಿಯು ಅರ್ಜಿದಾರರಿಗೆ ಭೂ ಮಂಜೂರಾತಿ ಮಾಡಿ ಸಾಗುವಳಿ ಚೀಟಿ ಮತ್ತು ಇತರೆ ದಾಖಲೆಗಳನ್ನು ನೀಡಿದ್ದಲ್ಲಿ ಹಾಗೂ ಸದರಿ ಮಂಜೂರಾತಿಗಳ ಬಗ್ಗೆ ನೈಜತೆಯನ್ನು ಸಂಬಂಧಪಟ್ಟ ಕಂದಾಯ ಅಧಿಕಾರಿಗಳಿಂದ ಪಡೆದು ಭೂ ಮಾಲೀಕರುಗಳಿಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಘನತ್ಯಾಜ್ಯ ವಿಲೇವಾರಿಗೆ ಕ್ರಮ: ರಹೀಂಖಾನ್

ಪಾರಂಪರಿಕ ತ್ಯಾಜ್ಯ ಸಂಸ್ಕರಣೆಯಿಂದ ಬರುವ Bio-earth ಅನ್ನು ಪರೀಕ್ಷೆಗೊಳಪಡಿಸಿ FCO (Fertilizer Control order) ಮಾನದಂಡ ಪೂರೈಸಿದಲ್ಲಿ ಅದನ್ನು ಸ್ಥಳೀಯ ರೈತರಿಗೆ ಮಾರಾಟ ಮಾಡಲಾಗುವುದು ಅಥವಾ ಸ್ಯಾನಿಟರಿ ನೆಲಭರ್ತಿ ಸೌಲಭ್ಯದಲ್ಲಿ Soil Cover ಆಗಿ ಬಳಕೆ ಮಾಡಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ತಿಳಿಸಿದರು.

ಶುಕ್ರವಾರ ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ರಾಣೆಬೆನ್ನೂರು ಕ್ಷೇತ್ರದ ಪ್ರಕಾಶ್ ಕೋಳಿವಾಡ ಪ್ರಶ್ನೆಗೆ ಉತ್ತರಿಸಿದ ಅವರು, ಪಾರಂಪರಿಕ ತ್ಯಾಜ್ಯ ನಿರ್ವಹಣೆಗೆ ಹಾವೇರಿ ಜಿಲ್ಲಾ ಮಟ್ಟದಲ್ಲಿ ಕ್ಲಸ್ಟರ್ ಮಾದರಿ ಟೆಂಡರ್ ಕರೆಯಲಾಗಿದೆ. 1ನೇ, 2ನೇ ಮತ್ತು 3ನೇ ಕರೆಯಲ್ಲಿ ಭಾಗವಹಿಸಿದ ಯಾವುದೇ ಗುತ್ತಿಗೆದಾರರು ಅರ್ಹತೆ ಗಳಿಸಿಲ್ಲದಿರುವ ಕಾರಣ ಪ್ರಸ್ತುತ 4ನೇ ಬಾರಿ ಟೆಂಡರ್ ಕರೆಯಲಾಗಿದೆ. ಟೆಂಡರ್‍ನ್ನು ವ್ಯಾಪಕವಾಗಿ ಪ್ರಚಾರ ಮಾಡಿ ಹೆಚ್ಚಿನ ಗುತ್ತಿಗೆದಾರರು ಟೆಂಡರಿನಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುವುದು. ಕೊನೆಯ ದಿನಾಂಕದ ಬಳಿಕ ಗುತ್ತಿಗೆದಾರರ ಭಾಗವಹಿಸುವಿಕೆಯನ್ನು ಪರಿಶೀಲಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ನಿರ್ಧಾರ ತೀರ್ಮಾನಕ್ಕೆ ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಬಗ್ಗೆ ನಿಲುವಳಿ ಸೂಚನೆಯಡಿ ಡಾ:ಸಿ.ಎನ್ ಅಶ್ವತ್ಥ್ ನಾರಾಯಣ ಅವರು ಪ್ರಸ್ತಾವ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ತೀರ್ಮಾನವೇ ಆಗಿಲ್ಲ. ಉಪ ಸಮಿತಿಯು ವಿಶ್ವವಿದ್ಯಾನಿಲಯಗಳನ್ನು ಮುಂದುವರೆಸಬೇಕೆ, ಬೇಡವೇ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ವರದಿ ನೀಡಬೇಕಾಗಿದೆ. ಸಮಿತಿಯು ನೀಡಿದ ವರದಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಿ, ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿದ ನಂತರ ಈ ವಿಷಯದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+