Gruha Lakshmi Scheme: ದೀಪಾವಳಿಗೂ ಮುನ್ನ ಮಹಿಳೆಯರ ಖಾತೆಗೆ 4,000 ಹಣ ಜಮಾ: ಗುಡ್‌ನ್ಯೂಸ್‌ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್‌

ಹಾಸನ, ಅಕ್ಟೋಬರ್‌ 17: ರಾಜ್ಯ ಕಾಂಗ್ರೆಸ್‌ ಜಾರಿಗೆ ತಂದ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ 2000 ಹಣವನ್ನ ಮಹಿಳೆಯರ ಖಾತೆಗೆ ಸರ್ಕಾರ ಜಮಾ ಮಾಡುತ್ತಿದೆ. ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ಐದು ತಿಂಗಳಿನಿಂದ ಪ್ರತಿ ತಿಂಗಳು ಮಹಿಳೆಯವರ ಖಾತೆಗೆ ಹಣ ಜಮಾ ಮಾಡುತ್ತಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭರ್ಜರಿ ಗುಡ್‌ ನ್ಯೂಸ್‌ ನೀಡಿದ್ದಾರೆ.

ಹಾಸನಾಂಬೆ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿಯನ್ನ ಹಂಚಿಕೊಂಡಿದ್ದಾರೆ. ಈಗಾಗಲೇ ದಸರಾ ಹಬ್ಬದ ಸಂದರ್ಭದಲ್ಲಿ ಒಂದು ಕಂತಿನ ಹಣ ಜಮಾವಾಗಿದ್ದು, ಇದೀಗ ದೀಪಾವಳಿ ಸಂದರ್ಭದಲ್ಲಿ ಯೋಜನೆಯ ಮತ್ತೊಂದು ಕಂತಿನ ಹಣ ಬಿಡುಗಡೆಯಾಗಲಿದೆ. ಹಬ್ಬಕ್ಕೆ 2000 ರೂ. ಫಲಾನುಭವಿ ಮಹಿಳೆಯರ ಖಾತೆ ಸೇರಲಿದೆ ಎಂದು ತಿಳಿಸಿದ್ದಾರೆ.

Gruha Lakshmi Money Will Be Deposited In The Account By Before Deepavali Lakshmi Hebbalkar

ಈಗಾಗಲೇ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದು, ಆಗಸ್ಟ್ ತಿಂಗಳ ಹಣ ದೀಪಾವಳಿಗೂ ಮುನ್ನ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ಇನ್ನೂ ಬಾಕಿ ಸೆಪ್ಟೆಂಬರ್‌ ತಿಂಗಳ ಹಣ ಮಾತ್ರ ಬಾಕಿ ಉಳಿಯಲಿದ್ದು, ಆದಷ್ಟು ಬೇಗ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಪ್ರಥಮ ಬಾರಿಗೆ ತಾಯಿ ದರ್ಶನ ಪಡೆದಿರುವೆ, ನಾಡಿನ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ದೇವರು ಎಲ್ಲರಿಗೂ ಸೌಭಾಗ್ಯವನ್ನು ಕೊಡಲಿ, ತಾಯಿಯ ದರ್ಶನಕ್ಕಾಗಿ ಜಿಲ್ಲಾಡಳಿತ ಉತ್ತಮ ವ್ಯವಸ್ಥೆ ಮಾಡಿದೆ. ಹಾಸನಾಂಬೆ ಮಹತ್ವದ ಬಗ್ಗೆ ಕೇಳಿದ್ದೆ. ದೇವರ ದರ್ಶನ ಪಡೆದಿದ್ದು, ಖುಷಿ ಆಯಿತು ಎಂದು ಸಚಿವರು ಹೇಳಿದರು. ಶಕ್ತಿ‌ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳಿಂದ ಮಹಿಳೆಯರಿಗೆ ಸ್ವಾವಲಂಬನೆ, ಶಕ್ತಿ ಕೊಟ್ಟಿದೆ.‌ ನಮ್ಮ ಸರ್ಕಾರಕ್ಕೆ ಈ ಯೋಜನೆಗಳಿಂದ ಸಾರ್ಥಕತೆ ಭಾವನೆ ಮೂಡಿದೆ ಎಂದರು. ಈ ವೇಳೆ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಹಾಸನ ತಹಸೀಲ್ದಾರ್ ಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+