Gruha Lakshmi Scheme: 13 ಜಿಲ್ಲೆಯ ಯಜಮಾನಿಯರಿಗೆ ಮಾತ್ರ 2 ತಿಂಗಳ ಗೃಹಲಕ್ಷ್ಮಿ ಹಣ ಜಮೆ, ಇನ್ನುಳಿದವರಿಗೆ ಯಾವಾಗ?
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಪ್ರಮುಖ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿ ಮನೆ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ಜಮೆ ಆಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿನಿಂದ ಹಣ ಜಮೆಯಾಗಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಜಿಲ್ಲೆಯವರಿಗೆ ಮಾತ್ರ ಹಣ ಜಮೆಯಾಗಿದೆ ಎಂದು ತಿಳಿದುಬಂದಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ಪೈಕಿ ಮಹಿಳಾ ಸಬಲೀಕರಣದ ಉದ್ದೇಶದಿಂದ ಜಾರಿಗೆ ತಂದಿರುವ ಯೋಜನೆಯೇ ಗೃಹಲಕ್ಷ್ಮಿ ಯೋಜನೆಯಾಗಿದೆ. ಇನ್ನು ಕಳೆದ 3 ತಿಂಗಳಿನಿಂದ ಈ ಯೋಜನೆಯ ಹಣ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಬಾಕಿಯಿದ್ದ ಎರಡು ಕಂತಿನ ಹಣ ಮೊದಲ ಹಂತದಲ್ಲಿ ಕೆಲವು ಜಿಲ್ಲೆಗಳ ಮನೆ ಯಜಮಾನಿಯರ ಖಾತೆಗೆ ಜಮೆ ಆಗಿದೆ ಎಂದು ತಿಳಿದುಬಂದಿದೆ. ಇನ್ನುಳಿದ ಜಿಲ್ಲೆಗಳಿಗೆ ಯಾವಾಗ ಎಂದು ಇಲ್ಲಿ ತಿಳಿಯಿರಿ.

ಮೊದಲ ಹಂತದಲ್ಲಿ ಯಾವೆಲ್ಲ ಜಿಲ್ಲೆಯವರಿಗೆ ಜಮೆ?
* ಬೀದರ್
* ಬೆಳಗಾವಿ
* ಕಲಬುರಗಿ
* ಬಳ್ಳಾರಿ
* ವಿಜಯಪುರ
* ಗದಗ
* ಹಾವೇರಿ
* ಬಾಗಲಕೋಟೆ
* ಕೊಪ್ಪಳ
* ಯಾದಗಿರಿ
* ಚಿತ್ರದುರ್ಗ
* ಬೆಂಗಳೂರು
* ಕೋಲಾರ ಜಿಲ್ಲೆಯ ಮಹಿಳೆಯರಿಗೆ ಮೊದಲ ಹಂತದಲ್ಲಿ ಹಣ ಜಮೆ ಆಗಿದ್ದು, ಈ ಮಹಿಳೆಯರು ಸ್ಟೇಟಸ್ ಚೆಕ್ ಮಾಡುವ ಮೂಲಕ ತಮಗೆ ಹಣ ಬಂದಿರುವ ಬಗ್ಗೆ ಚೆಕ್ ಮಾಡಿಕೊಳ್ಳಬಹುದಾಗುದೆ. ಇನ್ನುಳಿದ ಜಿಲ್ಲೆಯ ಮಹಿಳೆಯರಿಗೆ ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆಯ ಹಣ ಜಮೆ ಆಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಕೂಡ ಗೃಗಲಕ್ಷ್ಮಿಯರು ಆರೋಪಗಳನ್ನು ಮಾಡಿದ್ದರು. ಅಲ್ಲದೆ, ಇತ್ತೀಚೆಗಷ್ಟೇ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧವೂ ಗುಡುಗಿದ್ದರು. ಇದರ ಬೆನ್ನಲ್ಲೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಇದೀಗ ಈ ಜಿಲ್ಲೆಯ ಗೃಹಲಕ್ಷ್ಮಿಯರಿಗೆ ಹಣ ಜಮೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆದರೆ ಜೂನ್ ಹಾಗೂ ಜುಲೈ ತಿಂಗಳ ವೇಳೆ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿ ಇದ್ದ ಹಿನ್ನೆಲೆ ಮಹಿಳೆಯರಿಗೆ ಈ ಯೋಜನೆಯ ಹಣ ಜಮೆ ಆಗಿರಲಿಲ್ಲ. ಜೊತೆಗೆ ತಾಂತ್ರಿಕ ದೋಷಗಳು ಕೂಡ ಉಂಟಾಗಿತ್ತಿ ಎಂದು ಸರ್ಕಾರವೇ ತಿಳಿಸಿತ್ತು. ಆದ್ದರಿಂದ 2 ತಿಂಗಳ ಹಣ ಬಾಕಿ ಉಳಿದಿತ್ತು ಎಂದು ತಿಳಿದುಬಂದಿತ್ತು.
ಇನ್ನು ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮೀ ಯೋಜನೆಯ ಬಾಕಿ ಉಳಿದ ಹಣ ಬಿಡುಗಡೆಯಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಆಂದೋಲನ ಕಾರ್ಯಕ್ರಮದ ವೇಳೆ ಈ ಬಗ್ಗೆ ಮಾತನಾಡಿರುವ ಅವರು, ಸರ್ಕಾರದ ಕಡೆಯಿಂದ ಹಣ ಮಂಜೂರಾಗಿದ್ದು, ಹಂತ-ಹಂತವಾಗಿ ಎಲ್ಲಾ ಮಹಿಳೆಯರಿಗೆ ಬಾಕಿ ಹಣ ಒಂದೇ ಬಾರಿ 4,000 ರೂಪಾಯಿ ಜಮೆ ಆಗುತ್ತದೆ ಎಂದು ತಿಳಿಸಿದ್ದಾರೆ. ಈಗಾಗಲೇ 26.65 ಲಕ್ಷ ರೂಪಾಯಿ ಹಣ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆ ಎಂದು ಚೆಕ್ ಮಾಡುವುದಕ್ಕೆ ನಿಮ್ಮ ಬ್ಯಾಂಕ್ ಸ್ಟೇಟ್‌ಮೆಂಟ್ ಪಡೆಯಿರಿ. ಈ ಮೂಲಕ ನಿಮಗೆ ಹಣ ಬಂದಿರುವ ಬಗ್ಗೆ ಗೊತ್ತಾಗುತ್ತದೆ ಅಥವಾ ಸ್ಟೇಟಸ್ ಪರಿಶೀಲನೆ ಮಾಡುವುದಕ್ಕೆ ಮತ್ತೊಂದು ವಿಧಾನ ಸಹ ಇದ್ದು, ಗೂಗಲ್ ಪ್ಲೇ ಸ್ಟೋರ್ ಮೂಲಕ ಡಿಬಿಟಿ ಕರ್ನಾಟಕ ಆಪ್ ಡೌನ್ಲೋಡ್ ಮಾಡಿ, ಆಧಾರ್ ಕಾರ್ಡ್ ಬಳಸಿ ಲಾಗಿನ್ ಆಗುವ ಮೂಲಕ ಡಿಬಿಟಿ ಸ್ಟೇಟಸ್ ಪರಿಶೀಲಿಸಬಹುದಾಗಿದೆ.












Click it and Unblock the Notifications