ಗೃಹಲಕ್ಷ್ಮಿ, ಗ್ಯಾರಂಟಿ ಯೋಜನೆಗಳ ವಿಳಂಬಕ್ಕೆ ಇದೇ ಕಾರಣ: ಆರ್. ಅಶೋಕ್
ಕರ್ನಾಟಕ ಸರ್ಕಾರವು ಕಾಂಗ್ರೆಸ್ ಹೈಕಮಾಂಡ್‌ನ ಎಟಿಎಂ ಆಗಿದೆ ಎನ್ನುವ ಗಂಭೀರ ಆರೋಪವನ್ನು ಬಿಜೆಪಿ ಮೊದನಿಂದಲೂ ಮಾಡಿಕೊಂಡು ಬಂದಿದೆ. ಇದೀಗ ಮತ್ತೊಂದು ಗಂಭೀರ ಆರೋಪವನ್ನು ಮಾಡಲಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ಗ್ಯಾರಂಟಿಗಳಿಂದ ಈಗಾಗಲೇ ಸಾರಿಗೆ ನಿಗಮಗಳು ಮುಚ್ಚುವ ಹಂತಕ್ಕೆ ಬಂದಿವೆ. ಇದೀಗ ಎಸ್ಕಾಂಗಳು ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ ಎನ್ನುವ ವಿಷಯ ಚರ್ಚೆಯಾಗುತ್ತಿವೆ. ಒಂದು ಕಡೆ ಈಗಾಗಲೇ ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಮೊತ್ತವನ್ನು ಸಕಾಲದಲ್ಲಿ ಜನರ ಖಾತೆಗೆ ಜಮೆ ಮಾಡುತ್ತಿಲ್ಲ ಎನ್ನುವ ಆರೋಪ ಇದೆ. ಈ ರೀತಿ ಇರುವಾಗಲೇ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಅವರು ಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಗ್ಯಾರೆಂಟಿ ಯೋಜನೆಗಳಿಗೆ ಬಜೆಟ್‌ನಲ್ಲಿ 52,000 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎನ್ನುತ್ತೀರಿ. ಆದರೆ ಸಾರಿಗೆ ನಿಗಮಗಳಿಗೆ, ವಿದ್ಯುತ್ ಸರಬರಾಜು ಕಂಪನಿಗಳಿಗೆ ಸಮಯಕ್ಕೆ ಸರಿಯಾಗಿ ಸರ್ಕಾರ ಸಬ್ಸಿಡಿ ಹಣ ಪಾವತಿ ಮಾಡುತ್ತಿಲ್ಲ ಎನ್ನುವ ವರದಿ ಇದೆ ಎಂದು ಹೇಳಿದ್ದಾರೆ.

ಒಂದು ಕಡೆ ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ಹಣವಿಲ್ಲ. ಶಾಸಕರಿಗೆ ಅನುದಾನವಿಲ್ಲ ಎನ್ನುವ ಪರಿಸ್ಥಿತಿ ಇದೆ. ಮತ್ತೊಂದು ಕಡೆ 52,000 ಕೋಟಿ ಗ್ಯಾರಂಟಿಗಳಿಗೆ ಮೀಸಲಿಟ್ಟಿದ್ದರೂ ಸಾರಿಗೆ ನಿಗಮಗಳಿಗೆ, ಎಸ್ಕಾಂಗಳಿಗೆ ಬಾಕಿ ಇಟ್ಟುಕೊಂಡಿದ್ದೀರಿ. ಹಾಗಾದರೆ 52,000 ಕೋಟಿ ಎಲ್ಲಿಗೆ ಹೋಗಿತ್ತಿದೆ. ಭ್ರಷ್ಟಾಚಾರದ ಪಾಲಾಗಿ ಕಾಂಗ್ರೆಸ್ ನಾಯಕರ ಹೊಟ್ಟೆ ತುಂಬಿಸುತ್ತಿದೆಯೇ ಅಥವಾ ಕನ್ನಡಿಗರ ತೆರಿಗೆ ಹಣದಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಕಪ್ಪ ಸಲ್ಲಿಸಲಾಗುತ್ತಿದೆಯೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ಸರ್ಕಾರ ಈ ಕೂಡಲೇ ಸಾರಿಗೆ ನಿಗಮಗಳು, ಎಸ್ಕಾಂಗಳ ಆರ್ಥಿಕ ಪರಿಸ್ಥಿತಿ ಬಗ್ಗೆ, ಗ್ಯಾರೆಂಟಿ ಅನುಷ್ಠಾನದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಆರ್. ಅಶೋಕ್ ಅವರು ಒತ್ತಾಯಿಸಿದ್ದಾರೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಭಾರೀ ಚರ್ಚೆ: ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಭಾರೀ ಚರ್ಚೆಗಳು ನಡೆದಿವೆ. ಕಳೆದ ಮೂರು ತಿಂಗಳಿನಿಂದಲೂ ಗೃಹಲಕ್ಷ್ಮಿ ಯೋಜನೆ ಹಣ ಬರದೆ ಇರುವ ಬಗ್ಗೆ ರಾಜ್ಯದ ಜನ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯ ಹಣ ಸಹ ಜನರ ಖಾತೆಗೆ ಜಮೆ ಆಗದೆ ಇರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈ ರೀತಿ ಇರುವಾಗಲೇ ರಾಜ್ಯ ಸರ್ಕಾರವು ಈ ಯೋಜನೆಗಳ ಹಣವನ್ನು ಇನ್ನೊಂದು ವಾರದಲ್ಲಿ ಸಾರ್ವಜನಿಕರ ಖಾತೆಗೆ ಜಮೆ ಮಾಡುವುದಾಗಿ ಹೇಳಿದೆ.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ. ಇದೇ ಕಾರಣಕ್ಕೆ ಗ್ಯಾರಂಟಿ ಯೋಜನೆಗಳಲ್ಲಿ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಈ ನಡುವೆ ರಾಜ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯ ಹಾದಿಯಾಗಿ ಸಚಿವರು ಹಾಗೂ ಕಾಂಗ್ರೆಸ್‌ನ ಶಾಸಕರು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ನಿಲ್ಲಿಸುವುದಿಲ್ಲ ಎಂದು ಸ್ಪಪ್ಟನೆ ಕೊಡುತ್ತಿದ್ದಾರೆ.












Click it and Unblock the Notifications