Gruha lakshmi scheme: ಈ ಜಿಲ್ಲೆಯ ಯಜಮಾನಿಯರಿಗೆ ಡಿಸೆಂಬರ್ ತಿಂಗಳ ಹಣ ಬಿಡುಗಡೆ-ಮಾಹಿತಿ ಇಲ್ಲಿದೆ
ಕರ್ನಾಟಕ, ಡಿಸೆಂಬರ್, 20: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹತ್ವಕಾಂಕ್ಷಿಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತದೆ. ಈ ಯೋಜನೆಯ 4ನೇ ಕಂತಿನ ಹಣವನ್ನು ಜಿಲ್ಲಾವಾರು ವರ್ಗಾವಣೆ ಮಾಡಲಾಗುತ್ತಿದೆ. ಈ ಕೇಳಗಿನ ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ Gruhalakshmi DBT ಮೂಲಕ ಜಮಾ ಮಾಡಲಾಗುವುದು ಎನ್ನುವ ಮಾಹಿತಿ ತಿಳಿದುಬಂದಿದೆ.
ಪ್ರತಿ ತಿಂಗಳು ದಿನಾಂಕ 20ರ ಒಳಗಾಗಿ ಗೃಹಲಕ್ಷ್ಮೀ ಯೋಜನೆಯ ಹಣ ವರ್ಗಾವಣೆ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಸೂಚನೆ ನೀಡಿದ್ದರು, ಅಷ್ಟೇ ಅಲ್ಲದೆ, ಪ್ರತಿ ಗ್ರಾಮಗಳಲ್ಲಿ ಅದಾಲತ್ತು ನಡೆಸುವಂತೆ ಸೂಚನೆ ನೀಡಿದ್ದರು. ಫಲಾನುಭವಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಥವಾ ಅಂಗನವಾಡಿ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಕನ್ನಡ ನ್ಯೂಸ್ ವರದಿ ಮಾಡಿದೆ. ಹಾಗಾದರೆ ಯಾವೆಲ್ಲ ಜಿಲ್ಲೆಯ ಯಜಮಾನಿಯರಿಗೆ 4ನೇ ಕಂತಿನ ಹಣ ಬಿಡುಗಡೆಯಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈ ಜಿಲ್ಲೆಗಳ ಯಜಮಾನಿಯರಿಗೆ ಹಣ ಬಿಡುಗಡೆ
* ಚಿತ್ರದುರ್ಗ
* ಬೆಂಗಳೂರು
* ಕೋಲಾರ
* ಮಂಡ್ಯ
* ಬೆಳಗಾವಿ
* ಬಾಗಲಕೋಟೆ
* ಧಾರವಾಡ
* ಹಾಸನ
* ಬಿಜಾಪುರ
* ಉತ್ತರ ಕನ್ನಡ
* ದಾವಣಗೆರೆ
* ಗದಗ
* ರಾಯಚೂರು
* ಕಲಬುರಗಿ
* ಮೈಸೂರು
ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್
ಹೊಸ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಹಾಗಾದರೆ ಆ ಸಿಹಿಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚುನಾವಣೆ ಅಂಗವಾಗಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಇನ್ನು 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗುತ್ತಿದ್ದು, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಚ್. ಮುನಿಯಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.
6 ತಿಂಗಳಿನಿಂದ ರೇಷನ್ ಪಡೆಯದ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದ್ದು, ಈ ಪೈಕಿ ಒಟ್ಟು 3.26 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ 3.26 ಲಕ್ಷ ಬಿಪಿಎಲ್ ಕಾರ್ಡುದಾರರು 6 ತಿಂಗಳಿಂದ ರೇಷನ್ ಪಡೆಯುತ್ತಿಲ್ಲ ಎಂದು ಇಲಾಖೆ ಹೇಳಿದೆ. ಇಂತಹ ಕಾರ್ಡ್‌ಗಳ ರದ್ದರ ಮಾಡಲಿ ಸರ್ಕಾರ ಸೂಚನೆ ಕೊಟ್ಟಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.












Click it and Unblock the Notifications