Gruha Lakshmi Scheme: ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಟೀಕೆ!
ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ಮಹಿಳೆಯರ ಖಾತೆಗೆ ವರ್ಗಾವಣೆ ಅಥವಾ ಮಹಿಳೆಯರ ಖಾತೆಗೆ ಜಮೆ ಆಗುವುದು ವಿಳಂಬವಾಗುತ್ತಲ್ಲೇ ಇದ್ದು. ಇದೀಗ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಯಾವ ಕಾರಣಕ್ಕೆ ವಿಳಂಬವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿವರಣೆ ಕೊಟ್ಟಿದ್ದಾರೆ. ಈ ವಿವರಣೆ ಭಾರೀ ಟೀಕೆಗೆ ಕಾರಣವಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ಅವರು ನೀಡಿದ್ದ ಹೇಳಿಕೆ ಸಹ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಸರ್ಕಾರದಲ್ಲಿ ಕೆಲವೊಂದು ವಿಳಂಬವಾಗುತ್ತವೆ. ನಿಮಗೆಲ್ಲ ಸರಿಯಾಗಿ ಸಂಬಳ ಬಂದು ಬಿಡುತ್ತಾ ಅಂತ ಅವರು ಪ್ರಶ್ನೆ ಮಾಡಿದ್ದರು. ಇದೀಗ ಮೂರು ತಿಂಗಳಿನಿಂದ ಇನ್ನೂ ಕೆಲವು ಕಡೆ 5 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎನ್ನುವ ಆರೋಪಗಳ ನಡುವೆಯೇ ಲಕ್ಷ್ಮಿ ಅವರ ಹೇಳಿಕೆಗೆ ಟ್ರೋಲ್ ಶುರುವಾಗಿದೆ.
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆ ಹಣ ಸೇರಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುತ್ತಿದೆಯಾದರೂ. ಯಾವುದೇ ಯೋಜನೆಗೂ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ದಿಷ್ಟ ದಿನಾಂಕವನ್ನು ನಿಗದಿ ಮಾಡಿಲ್ಲ. ನಿರ್ದಿಷ್ಟ ದಿನಾಂಕ ನಿಗದಿ ಮಾಡದೆ ಇರುವುದು ಭಾರೀ ಆಕ್ರೋಶಕ್ಕೂ ಕಾರಣವಾಗಿದೆ. ಕೆಲವು ಯೋಜನೆಗಳ ಮೊತ್ತವು ಎರಡು ಮೂರು ತಿಂಗಳಾದರೂ ಬರುತ್ತಿಲ್ಲ ಎನ್ನುವ ಆರೋಪ ಇದೆ. ಅಲ್ಲದೆ, ಗೃಹಜ್ಯೋತಿ ಯೋಜನೆ ಹಾಗೂ ಶಕ್ತಿ ಯೋಜನೆಯಂತಹ ನೇರ ಲಾಭ ಆಗುತ್ತಿಲ್ಲ. ಅಲ್ಲದೆ ಗೃಹಲಕ್ಷ್ಮಿ ಯೋಜನೆಯ ಹಣದ ವಿಚಾರದಲ್ಲಿ ಸರ್ಕಾರ ಪ್ರತಿ ಬಾರಿಯೂ ಎಡವುತ್ತಿದೆ. ಕೆಲವೊಮ್ಮೆ ತಾಂತ್ರಿಕ ದೋಷದ ಕಾರಣ ನೀಡಿದರೆ ಇನ್ನೂ ಕೆಲವೊಮ್ಮೆ ಯಾವುದೇ ಕಾರಣ ನೀಡದೆ ವಿಳಂಬ ಧೋರಣೆಯನ್ನು ಅನುಸರಿಸುತ್ತಿದೆ.

ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು ?
ಇನ್ನು ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಸ್ತೆ ಅಪಘಾತದಿಂದ ನಾನು ವಿಶ್ರಂತಿ ಪಡೆಯುತ್ತಿದ್ದೆ. ವಿಶ್ರಾಂತಿಯಲ್ಲಿದ್ದ ಕಾರಣಕ್ಕೆ ಹಣ ವಿಳಂಬವಾಗಿದೆ. ಇನ್ನೊಂದು ವಾರದಲ್ಲಿ ಹಣ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ. ಆದರೆ, ಈ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಯಾಕೆಂದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ತಿಂಗಳಿನಿಂದ ಇನ್ನೂ ಕೆಲವು ಕಡೆ ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಎಂದು ಮಹಿಳೆಯರು ಆರೋಪಿಸಿದ್ದಾರೆ. ಅಲ್ಲದೆ, ಲಕ್ಷ್ಮಿ ಅವರಿಗೆ ಅಪಘಾತವಾಗಿದ್ದು ಈಚೆಗೆ. ಇದಕ್ಕೂ ಮುಂಚೆ ಅವರು ಏನು ಮಾಡುತ್ತಿದ್ದರು. ಅಲ್ಲದೆ ಇಲಾಖೆಯ ಎಲ್ಲಾ ಕೆಲಸವೂ ಸಚಿವರಿದ್ದರಷ್ಟೇ ನಡೆಯುತ್ತದೆಯೇ ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ದಿನಾಂಕ ನಿಗದಿಗೆ ಆಗ್ರಹ: ಗೃಹಲಕ್ಷ್ಮಿ ಯೋಜನೆಯ ಹಣ ಪ್ರತಿ ತಿಂಗಳು ಯಾವ ದಿನಾಂಕದಂದು ಮಹಿಳೆಯರ ಖಾತೆಗೆ ಜಮೆ ಆಗುತ್ತದೆ ಎನ್ನುವುದಕ್ಕೆ ದಿನಾಂಕ ನಿಗದಿ ಮಾಡಬೇಕು ಎಂದು ರಾಜ್ಯದ ಜನ ಆಗ್ರಹಿಸಿದ್ದಾರೆ. ಇನ್ನು ಮೂರು ತಿಂಗಳ ಹಣಕ್ಕಾಗಿ ರಾಜ್ಯದ ಮಹಿಳೆಯರ ಖಾತೆಗೆ ಜಮೆ ಆಗಿಲ್ಲ ಎಂದು ಸರ್ಕಾರವೇ ಒಪ್ಪಿಕೊಂಡಿದೆ.












Click it and Unblock the Notifications