Gruha Lakshmi Scheme: ಮಹಿಳೆಯವರಿಗೆ ಮಾತ್ರವಲ್ಲ, ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಹಣ: ಸಂಪೂರ್ಣ ಮಾಹಿತಿ ಇಲ್ಲಿದೆ
ಬೆಂಗಳೂರು, ಜೂನ್ 12: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿ ಖಾತೆಗೆ 2000 ಹಣ ನೀಡುವ ವಿಚಾರದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಗೊಂದಲಗಳಿಗೆ ಕಾರಣವಾಗಿದ್ದು, ಇದೀಗ ಮಹಿಳೆಯವರಿಗೆ ಮಾತ್ರ 2000 ಕೊಡುವುದಲ್ಲದೇ ತೃತೀಯ ಲಿಂಗಿಗಳಿಗೂ ಗೃಹ ಲಕ್ಷ್ಮಿ ಹಣ ಸಿಗಲಿದೆ.
ಹೌದು, ಇಷ್ಟು ದಿನ ಮಹಿಳೆಯರಿಗೆ ಮಾತ್ರ ಮೀಸಲಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಈ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮುಂದಿನ ತಿಂಗಳಿನಿಂದ ಹಣ ದೊರೆಯಲಿದ್ದು, ಈ ತಿಂಗಳ ಅಂತ್ಯದ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬೇಕಿದೆ. ಜಿಲ್ಲಾಧಿಕಾರಿಗಳು ವಿತರಣೆ ಮಾಡಿರುವ ಐಡಿ ಕಾರ್ಡ್ ನೀಡಿ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು.

ಪಂನಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯ ತೃತೀಯ ಲಿಂಗಿಗಳಿಗೆ ಹಣ ನೀಡಲು ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆದೇಶ ಆಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಇನ್ನೂ ಈ ತಿಂಗಳ ಕೊನೆಯ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಜಿಲ್ಲಾಧಿಕಾರಿಗಳಿಂದ ವಿತರಿಲ್ಪಟ್ಟ ಗುರುತಿನ ಚೀಟಿ ಇದ್ದರೆ ತೃತೀಯ ಲಿಂಗಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ತಿಂಗಳ ಒಳಗಡೆ ಅರ್ಜಿ ಸಲ್ಲಿಕೆಯಾದ್ರೆ ಮುಂದಿನ ತಿಂಗಳೇ ತೃತೀಯ ಲಿಂಗಿಗಳ ಅಕೌಂಟ್ಗೆ ಗೃಹ ಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಬರಲಿದೆ.
ಈಗಾಗಲೇ 1.24 ಕೋಟಿ ಮಂದಿ ಗೃಹಲಕ್ಷ್ಮಿ ಯೋಜನೆಗೆ ನೊಂದಾಣಿ ಮಾಡಿಕೊಂಡಿದ್ದಾರೆ. ಅದರಲ್ಲಿ 1.25 ಕೋಟಿ ಮಂದಿ 2 ಸಾವಿರ ರೂಪಾಯಿ ಹಣ ಪಡೆಯುತ್ತಿದ್ದು 1.5 ಲಕ್ಷ ಮಂದಿ ಜಿಎಸ್ಟಿ ಮತ್ತು ಆದಾಯ ತೆರಿಗೆ ಪಾವತಿ ದಾರರಾಗಿದ್ದು ಅವರಿಗೆ ಹಣ ಸಂದಾಯ ಸ್ಥಗಿತ ಮಾಡಲಾಗಿದೆ. ಜೊತೆಗೆ ಮೇ ತಿಂಗಳವರೆಗೂ ಹಣ ಸಂದಾಯ ಆಗಿದ್ದು ಜೂನ್ ತಿಂಗಳ ಹಣ ವರ್ವಗಾವಣೆಯಾಗಬೇಕಿದೆ.ಇನ್ನೂ ರಾಜ್ಯದಲ್ಲಿ 40,000 ಹೆಚ್ಚು ತೃತೀಯ ಲಿಂಗಿಗಳಿದ್ದು ಅವರ ಅಭಿವೃದ್ಧಿಗೆ ಅಥವಾ ಜೀವನೋಪಾಯಕ್ಕೆ ಗೃಹಲಕ್ಷ್ಮಿ ಹಣ ಸಹಕಾರಿಯಾಗಲಿದೆ.
ತೃತೀಯ ಲಿಂಗಿಗಳು ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಸೈಬರ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಇನ್ನೂ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯಿಂದಾಗಿ ತೃತೀಯ ಲಿಂಗಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಜನ ಮಂಗಳಮುಖಿಯರು ಕಷ್ಟದಲ್ಲಿದ್ದಾರೆ. ದುಡಿಮೆಗೆ ಯಾವುದೇ ಕೆಲಸಗಳು ಸಿಗುತ್ತಿಲ್ಲ. ಈ ಸಂದರ್ಭದಲ್ಲಿ ಸರ್ಕಾರ ನೀಡುವ ಈ ಹಣ ಸಾಕಷ್ಟು ಅನುಕೂಲವಾಗಲಿದೆ. ಐದು ಸ್ಕೀಮ್ ಪೈಕಿ ಶಕ್ತಿ ಯೋಜನೆ ನಮ್ಮ ಕೈ ಸೇರಿತ್ತು. ಆದ್ರೆ ಗೃಹಲಕ್ಷ್ಮಿ ಹಣ ಸಿಕ್ಕಿರಲಿಲ್ಲ. ಇದೀಗ ಎಲ್ಲ ಮಹಿಳೆಯರಂತೆ ನಮಗೂ ಈ ಹಣ ಸಿಗಲಿದೆ ಎಂದು ಸರ್ಕಾರಕ್ಕೆ ದನ್ಯವಾದ ತಿಳಿಸಿದ್ದಾರೆ.












Click it and Unblock the Notifications