Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ 2,000 ರೂ. ಪಡೆಯಲು ಹೊಸ ದಾಖಲೆ ಸಲ್ಲಿಕೆ ಕಡ್ಡಾಯ, ಏನೆಲ್ಲ ಬದಲಾವಣೆ

Gruha Lakshmi Scheme: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಇದೀಗ ಮತ್ತೊಂದು ಪ್ರಮುಖ ಹಾಗೂ ಹೊಸ ದಾಖಲೆಯನ್ನು ಕೇಳುವುದಕ್ಕೆ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ವಿಶೇಷ ಪರಿಷ್ಕರಣೆ ನಡೆಸುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳು ಅವರ ಪತಿಯ ಆಧಾರ್ ಕಾರ್ಡ್ ಸಲ್ಲಿಕೆ ಮಾಡುವುದನ್ನು ಕಡ್ಡಾಯ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಏನೆಲ್ಲ ಬದಲಾವಣೆ ಆಗಿದೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕ ಸರ್ಕಾರವು ಗೃಹಲಕ್ಷ್ಮಿ ಸೇರಿದಂತೆ ವಿವಿಧ ಗ್ಯಾರಂಟಿ ಯೋಜನೆಗಳ ಪರಿಶೀಲನೆ ಪ್ರಕ್ರಿಯೆಯನ್ನು ಮುಂದುವರಿಸಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಾಸಿಕ 2,000 ರೂಪಾಯಿ ಕೊಡುವುದಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಹೊಸ ನಿಯಮಗಳನ್ನು ರೂಪಿಸಿದೆ. ಗೃಹಲಕ್ಷ್ಮಿ ಯೋಜನೆಗೆ ಇನ್ಮುಂದೆ ಯಜಮಾನಿಯ ಆಧಾರ್ ಕಾರ್ಡ್ ಮಾತ್ರವಲ್ಲ ಯಜಮಾನನ / ಪತಿಯ ಆಧಾರ್ ಕಾರ್ಡ್ ಸಹ ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ "ವಿಜಯ ಕರ್ನಾಟಕ' ವರದಿ ಮಾಡಿದೆ.

Gruha Lakshmi Scheme New Document Mandatory to Receive 2 000 Benefit Check What Has Changed

Gruha Lakshmi Scheme: ಗೃಹಲಕ್ಷ್ಮಿ ಯೋಜನೆ: ಸರ್ಕಾರದಿಂದ ಹೊಸ ನಿಯಮ

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರವು ಹೊಸ ನಿಯಮಗಳನ್ನು ರೂಪಿಸಿದೆ. ಫಲಾನುಭವಿಗಳು ಇನ್ಮುಂದೆ ತಮ್ಮ ಪತಿಯ ಆಧಾರ್ ಕಾರ್ಡ್ ಸಹ ಸಲ್ಲಿಕೆ ಮಾಡಬೇಕು. ಅಲ್ಲದೆ ಸಾಲ ಇಲ್ಲದೆ ಇರುವ ಬ್ಯಾಂಕ್ ಖಾತೆಯನ್ನೇ ಫಲಾನುಭವಿಗಳು ಹೊಂದಿರಬೇಕು. ಆಧಾರ್ ಕಾರ್ಡ್‌ನಲ್ಲಿ ಇರುವ ಮಾದರಿಯಲ್ಲೇ ಫಲಾನುಭವಿಗಳ ಹೆಸರು ಮತ್ತು ವಿಳಾಸ ಇರಬೇಕು. ಈ ಅಂಶಗಳು ಇಲ್ಲದಿದ್ದರೆ ಯೋಜನೆಯ ಲಾಭ ಸಿಗುವುದಿಲ್ಲ.

Gruha Lakshmi Scheme: ಈ ದಾಖಲೆಗಳು ಇರುವುದು ಕಡ್ಡಾಯ

ಇನ್ನು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮನೆಯ ಯಜಮಾನರ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ, ರೇಷನ್ ಕಾರ್ಡ್ ಹಾಗೂ ಫೇಶಿಯಲ್ ದೃಢೀಕರಣ ಸೇರಿದಂತೆ ಹಲವು ದಾಖಲೆಗಳನ್ನು ಕಡ್ಡಾಯ ಮಾಡಲಾಗಿದೆ. ಈ ದಾಖಲೆಗಳ ಪರಿಶೀಲನೆಗಾಗಿಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರವು ಗಣತಿದಾರರನ್ನು ನೇಮಕ ಮಾಡಿದ್ದು, ಗೃಹಜ್ಯೋತಿ ಯೋಜನೆಯ ಮಾದರಿಯಲ್ಲೇ ಗೃಹಲಕ್ಷ್ಮಿ ಯೋಜನೆಯ ದಾಖಲೆಗಳನ್ನು ಪರಿಶೀಲನೆ ಮಾಡುವ ಸಾಧ್ಯತೆ ಇದೆ.

Gruha Lakshmi Scheme: ಎಸ್‌ಐಆರ್ ಪೂರ್ಣಗೊಂಡ ನಂತರ ಪ್ರಕ್ರಿಯೆ

ಇನ್ನು ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತರ ಎಸ್‌ಐಆರ್ / ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಂಡ ನಂತರ ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ. ಈ ಯೋಜನೆಯ ಅಡಿಯಲ್ಲಿ ಅರ್ಹತೆಯನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಯ ಹಣ ಸೇರುವಂತೆ ಮಾಡುವುದು ಇದರ ಉದ್ದೇಶ ಎಂದು ಹೇಳಲಾಗಿದೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆದಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಹಂತದಲ್ಲಿ ಈಚೆಗೆ ನಡೆದ ಪ್ರಮುಖ ಚರ್ಚೆಗಳ ವಿವರ ಇಲ್ಲಿದೆ.

ಗೃಹಲಕ್ಷ್ಮಿ ಯೋಜನೆಯ ಮೂಲಕ ನೇರ ನಗದು ವರ್ಗಾವಣೆ (DBT) ಮೂಲಕ ಅರ್ಹರ ಖಾತೆಗೆ 2,000 ಜಮಾ ಮಾಡಲಾಗುತ್ತಿದೆ.

ಯೋಜನೆಗೆ ಇರಬೇಕಾದ ಅರ್ಹತೆ: ರೇಷನ್ ಕಾರ್ಡ್‌ನಲ್ಲಿ (Ration Card) ಕುಟುಂಬದ ಯಜಮಾನಿ ಎಂದು ಗುರುತಿಸಲ್ಪಟ್ಟಿರಬೇಕು.

ಯೋಜನೆಯ ವ್ಯಾಪ್ತಿ: ಬಿಪಿಎಲ್ (BPL), ಎಪಿಎಲ್ (APL) ಹಾಗೂ ಅಂತ್ಯೋದಯ ಕಾರ್ಡ್‌ದಾರರು ಒಳಪಡುತ್ತಾರೆ.

ಮರುಪರಿಶೀಲನೆ ಪ್ರಕ್ರಿಯೆ: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಅನರ್ಹರನ್ನು ಕೈಬಿಡಲು ಹಾಗೂ ಅಕ್ರಮ ತಡೆಯಲು ಕರ್ನಾಟಕದಾದ್ಯಂತ ಮನೆಮನೆಗೆ ತೆರಳಿ ಯೋಜನೆ ಮರುಪರಿಶೀಲನೆ ಕಾರ್ಯ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+