Gruha Lakshmi Scheme: ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್! ಶೀಘ್ರದಲ್ಲೇ 33ನೇ ಕಂತಿನ ಹಣ ಬಿಡುಗಡೆ

ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಮಹಿಳಾ ಫಲಾನುಭವಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. 33ನೇ ಕಂತಿನ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಚರ್ಚೆ ನಡೆದಿದೆ.

ಗೃಹಲಕ್ಷ್ಮಿ ಯೋಜನೆಯಡಿ ಅರ್ಹ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹2,000 ಆರ್ಥಿಕ ನೆರವು ನೀಡಲಾಗುತ್ತಿದೆ. ಗೃಹಲಕ್ಷ್ಮೀ ಹಣಕ್ಕಾಗಿ ಕಾಯುತ್ತಿರುವ ಫಲಾನುಭವಿಗಳಿಗೆ ಶೀಘ್ರದಲ್ಲೇ ಹಣ ಜಮೆಯಾಗುವ ನಿರೀಕ್ಷೆ ಮೂಡಿದೆ. ಫಲಾನುಭವಿಗಳ ಮರುಪರಿಶೀಲನೆ ಪ್ರಕ್ರಿಯೆ ನಡೆಯುತ್ತಿರುವ ನಡುವೆಯೂ ಅರ್ಹ ಫಲಾನುಭವಿಗಳಿಗೆ 33 ಕಂತಿನ ಹಣ ಪಾವತಿಸುವ ಕುರಿತು ಸರ್ಕಾರ ಗಮನಹರಿಸಿದೆ.

Gruha Lakshmi Scheme State government to release 33rd installment of Gruha Lakshmi Scheme funds soon

Gruha Lakshmi Scheme: ಈ ತಿಂಗಳಲ್ಲೇ ಹಣ ಜಮೆ?

ಲಭ್ಯವಾಗಿರುವ ಮಾಹಿತಿಯ ಪ್ರಕಾರ, 33ನೇ ಕಂತಿನ ಹಣವನ್ನು ಇದೇ ತಿಂಗಳಲ್ಲಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಜಮೆ ಮಾಡುವ ಸಾಧ್ಯತೆ ಇದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳ ಪರಿಶೀಲನೆ ಕುರಿತು ನಡೆದ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಿದೆ. ಆದರೆ, ಹಣ ಜಮೆಯಾಗುವ ನಿಖರ ದಿನಾಂಕವನ್ನು ಸರ್ಕಾರ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಹೀಗಾಗಿ ಫಲಾನುಭವಿಗಳು ಅಧಿಕೃತ ಘೋಷಣೆಯನ್ನು ಗಮನಿಸುವುದು ಅಗತ್ಯ.

ಮರುಪರಿಶೀಲನೆ ನಡೆಯುತ್ತಿದ್ದರೂ ಹಣಕ್ಕೆ ತಡೆ ಇಲ್ಲ?

ಗೃಹಲಕ್ಷ್ಮಿ ಸೇರಿದಂತೆ ಗ್ಯಾರಂಟಿ ಯೋಜನೆಗಳಲ್ಲಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಸರ್ಕಾರ ಮರುಪರಿಶೀಲನೆ ನಡೆಸುತ್ತಿದೆ. ಅರ್ಹರಿಗೆ ಯೋಜನೆಯ ಪ್ರಯೋಜನ ಮುಂದುವರಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ವರದಿಯಾಗಿದೆ.

ಇದೇ ವೇಳೆ ಗೃಹಜ್ಯೋತಿ ಯೋಜನೆಯ ಪರಿಶೀಲನಾ ಅವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಜುಲೈ 1ರಿಂದ ಆರಂಭವಾದ ಪರಿಶೀಲನೆಯಲ್ಲಿ ರಾಜ್ಯದ 1.67 ಕೋಟಿ ಮನೆಗಳ ಪೈಕಿ 1.17 ಕೋಟಿ ಮನೆಗಳ ಪರಿಶೀಲನೆ ಪೂರ್ಣಗೊಂಡಿದೆ ಎಂದು ವರದಿಯಾಗಿದೆ.

Gruha Lakshmi Scheme: ಅನರ್ಹ ಫಲಾನುಭವಿಗಳಿಗೆ ಕೊಕ್

ಗ್ಯಾರಂಟಿ ಯೋಜನೆಗಳ ಸೌಲಭ್ಯ ನಿಜವಾದ ಅರ್ಹರಿಗೆ ತಲುಪುವಂತೆ ಮಾಡಲು ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ. ಪರಿಶೀಲನೆ ವೇಳೆ ಅನರ್ಹರು ಪತ್ತೆಯಾದರೆ ಅವರನ್ನು ಯೋಜನೆಯ ವ್ಯಾಪ್ತಿಯಿಂದ ಹೊರಗಿಡುವ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ಹೀಗಾಗಿ ಗೃಹಲಕ್ಷ್ಮಿ 33ನೇ ಕಂತಿನ ಹಣ ಯಾವಾಗ ಖಾತೆಗೆ ಬರುತ್ತದೆ ಎಂಬ ನಿರೀಕ್ಷೆಯಲ್ಲಿರುವ ಮಹಿಳೆಯರಿಗೆ ಈ ಬೆಳವಣಿಗೆ ಮಹತ್ವದ್ದಾಗಿದೆ. ಸರ್ಕಾರದ ಅಧಿಕೃತ ದಿನಾಂಕದ ಘೋಷಣೆಯ ಬಳಿಕ ಪಾವತಿ ಪ್ರಕ್ರಿಯೆ ಕುರಿತು ಮತ್ತಷ್ಟು ಸ್ಪಷ್ಟತೆ ಸಿಗಲಿದೆ.

ಹಣ ಬಿಡುಗಡೆಗೆ ಷರತ್ತು

ಗೃಹಲಕ್ಷ್ಮಿ ಯೋಜನೆಯ ಮಾಸಿಕ ₹2,000 ಪ್ರೋತ್ಸಾಹಧನವನ್ನು ಪಡೆಯಲು ಫಲಾನುಭವಿಗಳ ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ಪರಸ್ಪರ ಲಿಂಕ್ ಆಗಿರುವುದು ಕಡ್ಡಾಯವಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಡೆಸಿದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಗಿದೆ.

ನಕಲಿ ಅಥವಾ ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಹೊರಹಾಕಲು ಮತ್ತು ಕೇವಲ ಕರ್ನಾಟಕದ ಅರ್ಹ ಮತದಾರರಿಗೆ ಮಾತ್ರ ಯೋಜನೆ ತಲುಪುವಂತೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.

ಸೆ.30ರವರೆಗೆ ಗೃಹಜ್ಯೋತಿ ಪರಿಶೀಲನೆ

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನಾ ಕಾರ್ಯವನ್ನು ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಲಾಗಿದೆ. ಜುಲೈ 1ರಿಂದ ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ ಪರಿಶೀಲನಾ ಕಾರ್ಯ ನಡೆಸಲಾಗುತ್ತಿದೆ.

ರಾಜ್ಯದಲ್ಲಿರುವ ಒಟ್ಟು 1.67 ಕೋಟಿ ಮನೆಗಳ ಪೈಕಿ ಈಗಾಗಲೇ 1.17 ಕೋಟಿ ಮನೆಗಳ ಪರಿಶೀಲನೆ ಪೂರ್ಣಗೊಂಡಿದೆ. ಈ ವೇಳೆ ಸುಮಾರು 3 ಲಕ್ಷ ಫಲಾನುಭವಿಗಳು ಯೋಜನೆಯಿಂದ ಸ್ವಯಂ ಹೊರಗುಳಿಯಲು ಸಿದ್ಧರಾಗಿದ್ದಾರೆ ಎಂಬ ಮಾಹಿತಿಯನ್ನು ಸಮಿತಿ ಸದಸ್ಯರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೀಡಿದ್ದಾರೆ.

ಅನ್ನಭಾಗ್ಯಕ್ಕೂ ಬರಲಿದೆ 'ಫಿಲ್ಟರ್'?

ಇದೇ ವೇಳೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಅರ್ಹತೆ ಪರಿಶೀಲಿಸುವ ಬಗ್ಗೆಯೂ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಗೃಹಜ್ಯೋತಿ, ಗೃಹಲಕ್ಷ್ಮೀ ಮಾತ್ರವಲ್ಲದೆ ಇತರೆ ಗ್ಯಾರಂಟಿ ಯೋಜನೆಗಳಲ್ಲಿಯೂ ಫಲಾನುಭವಿಗಳ ಮಾಹಿತಿಯನ್ನು ಪರಿಶೀಲಿಸುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+