Gruha Lakshmi Good News: ಈ ದಿನ ಮುಂದಿನ 2 ಕಂತಿನ ಹಣ ಬಿಡುಗಡೆ ?
Gruha Lakshmi scheme updates: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಹತ್ವದ ಅಪ್ಡೇಟ್ಸ್ ನೀಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಹಣ ಬಾಕಿ ಯಾವಾಗ ಬಿಡುಗಡೆಯಾಗುತ್ತದೆ ಎನ್ನುವುದರ ಕುರಿತು ಸುಳಿವು ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಐದು ಪ್ರಮುಖ ಗ್ಯಾರಂಟಿಗಳನ್ನು ಪರಿಚಯಿಸಿದ್ದು, ಅದರಲ್ಲಿ ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ, ಗೃಹಲಕ್ಷ್ಮೀ ಯೋಜನೆಯ ಹಣ ಸಕಾಲದಲ್ಲಿ ಜನರ ಖಾತೆಗೆ ಜಮೆಯಾಗುತ್ತಿಲ್ಲ.
ಇನ್ನು ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣ ಇನ್ನಷ್ಟೇ ಸಂದಾಯವಾಗಬೇಕಿದೆ. ರಾಜ್ಯ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ಪ್ರತಿ ಮನೆಯ ಯಜಮಾನಿಯ ಖಾತೆಗೆ 2000 ಸಾವಿರ ರೂಪಾಯಿ ಪ್ರತಿ ತಿಂಗಳು ಸಹ ಹಾಕುತ್ತಿದೆ. ಆದರೆ, ಕಳೆದ ಎರಡು ತಿಂಗಳಿನಿಂದಲೂ ಹಣ ಮಹಿಳೆಯರ ಖಾತೆಗೆ ಬಂದಿಲ್ಲ. ಈ ಬಗ್ಗೆ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶೀಘ್ರವೇ ಮಹಿಳೆಯರ ಖಾತೆಗೆ ಹಣ ಜಮೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ತಾಂತ್ರಿಕ ಸಮಸ್ಯೆ !
ಗೃಹಲಕ್ಷ್ಮೀ ಯೋಜನೆ ಪ್ರಾರಂಭವಾದಾಗಿನಿಂದಲೂ ತಾಂತ್ರಿಕ ಸಮಸ್ಯೆ ಗೃಹಲಕ್ಷ್ಮೀ ಯೋಜನೆಯ ಬೆನ್ನು ಬಿಡುತ್ತಿಲ್ಲ. ತಾಂತ್ರಿಕ ಸಮಸ್ಯೆಯಿಂದ ಮಹಿಳೆಯರ ಖಾತೆಗೆ ಹಣ ಸಂದಾಯ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೆಬ್ಬಾಳ್ಕರ್ ಅವರು ಹೇಳಿದ್ದಾರೆ. ನಾವು ಈಗಾಗಲೇ 11 ತಿಂಗಳಿನಿಂದ ಗೃಹಲಕ್ಷ್ಮೀ ಯೋಜನೆಯ ಮೂಲಕ ಹಣ ಹಾಕಿದ್ದೇವೆ.
ಮಹಿಳೆಯರ ಖಾತೆಗೆ ಪ್ರತಿ ತಿಂಗಳು ತಲಾ 2000 ಸಾವಿರ ರೂಪಾಯಿಯಂತೆ ಇಲ್ಲಿಯವರೆಗೆ ಅಂದರೆ ಕಳೆದ ಒಂದು ವರ್ಷದ ಅವಧಿಯಲ್ಲಿ ಬರೋಬ್ಬರಿ 25,000 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಏಕಕಾಲಕ್ಕೆ ಎಲ್ಲಾ ಗೃಹಲಕ್ಷ್ಮೀಯರ ಖಾತೆಗೆ ಹಣ ಜಮೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಸಾಧ್ಯವಾದಷ್ಟು ಶೀಘ್ರ ಪರಿಹರಿಸಿ, ಎಲ್ಲಾ ಮಹಿಳೆಯರ ಖಾತೆಗೂ ಹಣ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಖಾತೆ ಡಿಲೀಟ್ ಮಾಡ್ಸಿದ್ರೆ ಹೇಳಿ
ಇನ್ನು ಇಲ್ಲಿಯವರೆಗೆ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಯಾರ ಖಾತೆಯನ್ನೂ ಇಲ್ಲಿಯವೆರೆಗೆ ಡಿಲೀಟ್ ಮಾಡಿಲ್ಲ. ಈ ಬಗ್ಗೆ ಅಧಿಕಾರಿಗಳಿಂದಲೂ ವಿವರಣೆ ಪಡೆಯಲಾಗಿದೆ. ಆದರೆ, ಯಾವುದೇ ಖಾತೆಯನ್ನೂ ನಾವು ನಮ್ಮ ಕಡೆಯಿಂದ ಡಿಲೀಟ್ ಮಾಡಿಲ್ಲ.
ಜಿಎಸ್‌ಟಿ ಹಾಗೂ ಟ್ಯಾಕ್ಸ್ ಪೇ ಮಾಡುವವರ ಈ ಯೋಜನೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲೇ ಅವರ ಅರ್ಜಿ ತಿರಸ್ಕೃತವಾಗುತ್ತದೆ. ಆದರೆ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಯಾರ ಖಾತೆಯನ್ನೂ ನಾವು ಡಿಲೀಟ್ ಮಾಡಿಲ್ಲ. ಈಗಾಗಲೇ 11ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮೆಯಾಗಿದೆ. 12 ಮತ್ತು 13ನೇ ಕಂತಿನ ಹಣವನ್ನು ಶೀಘ್ರವೇ ಮಹಿಳೆಯರ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕಾಂಗ್ರೆಸ್ ಶಿಸ್ತಿನ ಪಕ್ಷ, ಹೈಕಮ್ಯಾಂಡ್ ಇದೆ
ನಮ್ಮದು ಅತ್ಯಂತ ಶಿಸ್ತಿನ ಪಕ್ಷವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ದಕ್ಷತೆಯಿಂದ ಆಡಳಿತ ನೀಡಿದ್ದಾರೆ. ಹೀಗಾಗಿ, ಸಿ.ಎಂ ಬದಲಾವಣೆಯ ಚರ್ಚೆಯೇ ಇಲ್ಲ. ಮುಖ್ಯಮಂತ್ರಿಗಳ ಕುರ್ಚಿಯೂ ಸಹ ಖಾಲಿ ಇಲ್ಲ. ಯಾವುದೇ ಬದಲಾವಣೆ ಇದ್ದರೂ ಅದನ್ನು ನಮ್ಮ ಹೈಕಮ್ಯಾಂಡ್ ನೋಡಿಕೊಳ್ಳಲಿದೆ. ಆದರೆ, ಈಗ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.












Click it and Unblock the Notifications