Gruhalakshmi Scheme: ರಾಜ್ಯದ 'ಗೃಹಲಕ್ಷ್ಮಿ'ಯರಿಗೆ ಭರ್ಜರಿ ಸಿಹಿ ಸುದ್ದಿ, 31ನೇ ಕಂತಿನ 2,400 ಕೋಟಿ ರೂಪಾಯಿ ರಿಲೀಸ್
Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ 'ಗೃಹಲಕ್ಷ್ಮಿ' ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು, ಪ್ರತಿ ಮನೆ ಯಜಮಾನಿ ಬ್ಯಾಂಕ್ ಖಾತೆಗೆ 2,000 ರೂಪಾಯಿ ಜಮೆ ಮಾಡಲಾಗುತ್ತಿದೆ. ಇದೀಗ ಗುಡ್ ನ್ಯೂಸ್‌ವೊಂದು ಸಿಕ್ಕಿದ್ದು, 31ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ಹಣ ನೀಡಲಾಗುತ್ತದೆ. ಇದೀಗ 31ನೇ ಕಂತಿನ 2,400 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗಿದೆ.

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣ ಬಿಡುಗಡೆ
ರಾಜ್ಯದಲ್ಲಿನ 1.24 ಕೋಟಿಗೂ ಅಧಿಕ ಕುಟುಂಬದ ಮನೆಯ ಯಜಮಾನಿಯರಿಗೆ ದಿವರೆಗೆ 30 ಕಂತುಗಳಲ್ಲಿ ತಲಾ 2,000 ರೂಪಾಯಿನಂತೆ 60,000 ರೂಪಾಯಿಗಳನ್ನು ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿತ್ತು. ಇದೀಗ 31ನೇ ಕಂತಿನ 2,400 ಕೋಟಿ ರೂಪಾಯಿ ಹಣ ಬಿಡುಗಡೆ ಮಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ, ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.
'62,000 ರೂಪಾಯಿ ಹಣ ನೀಡಲಾಗಿದೆ'
ಗುರುವಾರ (ಜುಲೈ 16) ಈ ಸಂಬಂಧ ಮಾಹಿತಿ ನೀಡಿರುವ ಅವರು, 'ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರ ಈವರೆಗೂ 74,650 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದೆ. ಇದರಿಂದ ಫಲಾನುಭವಿ ಮನೆಯ ಯಜಮಾನಿ ಖಾತೆಗೆ ಒಟ್ಟು 62,000 ರೂಪಾಯಿ ಹಣವನ್ನು ನೀಡಿದಂತೆ ಆಗಿದೆ,' ಎಂದು ತಿಳಿಸಿದ್ದಾರೆ.
'ಕುಟುಂಬದ ದೈನಂದಿನ ಖರ್ಚು, ಮಕ್ಕಳ ಶಿಕ್ಷಣ, ಆರೋಗ್ಯ, ಆಹಾರ ಸೇರಿದಂತೆ ಇತರೆ ಅಗತ್ಯಗಳಿಗೆ ಬಳಕೆ ಮಾಡಿಕೊಳ್ಳಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಹಿಳೆಯರು ಸ್ವಾವಲಂಬಿಗಳು ಆಗಬೇಕೆಂದು ನಮ್ಮ ಸರ್ಕಾರ ಮನೆಯ ಯಜಮಾನಿಯರಿಗೆ 31 ಕಂತುಗಳಲ್ಲಿ ತಲಾ 2,000 ರೂಪಾಯಿನಂತೆ ಈವರೆಗೂ 62,000 ರೂಪಾಯಿ ಹಣವನ್ನು ನೀಡಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರ ಪರ ಎಂಬುದಕ್ಕೆ ಇದೇ ಸಾಕ್ಷಿ,' ಎಂದು ಅವರು ಹೇಳಿದ್ದಾರೆ.
ಗೊಂದಲಕ್ಕೆ ತೆರೆ ಎಳೆದ ಸರ್ಕಾರ
ಈ ಹಿಂದೆ ರಾಜ್ಯದಲ್ಲಿ ಇ-ಕೆವೈಸಿ ಮಾಡಿಸದವರ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬರುವುದಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿಗಳು ಹರಡಿದ್ದವು. ಇದಕ್ಕೆ ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿ ಗೊಂದಲಗಳಿಗೆ ತೆರೆ ಎಳೆಯುವ ಕೆಲಸವನ್ನು ಮಾಡಿತ್ತು. 'ಯೋಜನೆ ಆರಂಭ ಆದಾಗಿನಿಂದ ಈವರೆಗೆ ಒಟ್ಟು 30 ಕಂತುಗಳಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಯಶಸ್ವಿಯಾಗಿ ಜಮೆ ಮಾಡಲಾಗಿದೆ. ಪ್ರಸ್ತುತ ಯಾವುದೇ ಅಡಚಣೆಯಿಲ್ಲದೆ ಹಣ ಪಾವತಿಯಾಗುತ್ತಿದ್ದು, ಇ-ಕೆವೈಸಿ ನೆಪದಲ್ಲಿ ಸಾರ್ವಜನಿಕರು ಗೊಂದಲಕ್ಕೀಡಾಗಬಾರದು,' ಎಂದು ತಿಳಿಸಿತ್ತು.
ಈ ಯೋಜನೆಗೆ ಯಾರೆಲ್ಲಾ ಅರ್ಹರು?
* ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
* ರೇಷನ್ ಕಾರ್ಡ್‌ನಲ್ಲಿ ಮಹಿಳೆ ಕುಟುಂಬದ ಮುಖ್ಯಸ್ಥೆ ಆಗಿರಬೇಕು.
* ಆಧಾರ್ ಸಂಖ್ಯೆ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು.
* ಸರ್ಕಾರಿ ನೌಕರರು ಹಾಗೂ ಆದಾಯ ತೆರಿಗೆ ಪಾವತಿ ಮಾಡುವವರು ಯೋಜನೆಗೆ ಅರ್ಹರಲ್ಲ.
ಹಣ ಜಮಾ ಆಗಿದೆಯೇ ಎಂದು ಪರಿಶೀಲಿಸುವುದೇಗೆ?
* DBT ಕರ್ನಾಟಕ ಆಪ್
* ಸೇವಾ ಸಿಂಧು ಪೋರ್ಟಲ್
* ಬ್ಯಾಂಕ್ ಪಾಸ್‌ಬುಕ್ ಅಥವಾ ಸ್ಟೇಟ್‌ಮೆಂಟ್
* ಬ್ಯಾಂಕ್‌ನಿಂದ ಬರುವ ಎಸ್‌ಎಂಎಸ್ ಮೂಲಕ ಹಣ ಜಮೆಯಾದ ಮಾಹಿತಿ ತಿಳಿದುಕೊಳ್ಳಬಹುದು.
ಹಣ ಜಮೆಯಾಗದಿದ್ದರೆ ಏನು ಮಾಡಬೇಕು?
* ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸಿ.
* e-KYC ಪೂರ್ಣಗೊಂಡಿದೆಯೇ ಎಂದು ಖಚಿತಪಡಿಸಿಕೊಳ್ಳಿ.
* ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಥವಾ ಹತ್ತಿರದ ಗ್ರಾಮ ಒನ್/ಕರ್ನಾಟಕ ಒನ್ ಕೇಂದ್ರದಲ್ಲಿ ಪಾವತಿ ಸ್ಥಿತಿಯನ್ನು ಪರಿಶೀಲನೆ ಮಾಡಬಹುದು.












Click it and Unblock the Notifications