Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ₹2,480 ಕೋಟಿ ಹಣ ಬಿಡುಗಡೆ ಬಗ್ಗೆ ಬಿಗ್ ಅಪ್ಡೇಟ್

Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಗ್ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮೆ ಮಾಡಲಾಗುತ್ತದೆ. ಆದರೆ ಇದೀಗ ದುರುಪಯೋಗ ತಡೆಯುವ ಕ್ರಮ ಹಾಗೂ 33ನೇ ಕಂತಿನ ಹಣ ಬಿಡಗಡೆ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

'ಗೃಹಲಕ್ಷ್ಮಿ' ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದೀಗ ನಕಲಿ ಮತ್ತು ಅನರ್ಹ ಫಲಾನುಭವಿಗಳನ್ನು ತಡೆಯುವ ಉದ್ದೇಶದಿಂದ ಮನೆಯ ಯಜಮಾನಿಯ ಹೆಸರಿನಲ್ಲೇ ಸಿಮ್ ಕಾರ್ಡ್ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

Gruhalakshmi Scheme 33rd Installment 2 480 Cr to Be Released New SIM Card Rule for Beneficiaries

2,480 ಕೋಟಿ ರೂಪಾಯಿ ಬಿಡುಗಡೆ..

ಮದ್ದೂರು ತಾಲೂಕಿನ ಕೊಪ್ಪದಲ್ಲಿ ಮಾತನಾಡಿದ ಅವರು, ಈ ಹೊಸ ನಿಯಮದ ಮೂಲಕ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ಶೀಘ್ರದಲ್ಲೇ ಯೋಜನೆಯ 33ನೇ ಕಂತಿನ ಒಟ್ಟು 2,480 ಕೋಟಿ ರೂಪಾಯಿ ಅನುದಾನವನ್ನು ಅರ್ಹ ಮಹಿಳೆಯರ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಸುಧಾರಣಾ ಕ್ರಮಗಳು..

ಪರಿಶೀಲನೆ ವೇಳೆ ಸುಮಾರು 1.99 ಲಕ್ಷ ಮೃತಪಟ್ಟ ಮಹಿಳೆಯರ ಖಾತೆಗಳಿಗೆ 117 ಕೋಟಿ ರೂಪಾಯಿ ಹಣ ವರ್ಗಾವಣೆ ಆಗಿರುವುದು ಹಾಗೂ ಕೆಲವೆಡೆ ಹಣವು ಪತಿಯ ಖಾತೆಗೆ ಅಥವಾ ರಾಜ್ಯದ ಹೊರಗಿನವರ ಪಾಲಾಗುತ್ತಿರುವುದು ಸಮಿತಿಯ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಿಗೆ ಈ ಹಿಂದೆ ಪಟ್ಟಿ ಪರಿಷ್ಕರಣೆಗೆ ಮನವಿ ಮಾಡಲಾಗಿತ್ತು. ಪ್ರಸ್ತುತ ನೂತನ ಮಾನದಂಡದಿಂದಾಗಿ 1 ಕೋಟಿ 24 ಲಕ್ಷ ನೈಜ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಯೋಜನೆ ಸಂಪೂರ್ಣವಾಗಿ ಕರ್ನಾಟಕದವರಿಗೆ ಮಾತ್ರ ತಲುಪುವಂತೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಶೀಘ್ರದಲ್ಲೇ 33ನೇ ಕಂತಿನ ಹಣ ಬಿಡುಗಡೆ

ಕಾಂಗ್ರೆಸ್ ಸರ್ಕಾರವು ನೀಡಿರುವ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಕುಟುಂಬದ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ರಾಜ್ಯದಲ್ಲಿ ಈವರೆಗೆ 32 ಕಂತುಗಳಲ್ಲಿ ತಲಾ ₹64,000 ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ, 'ನೋ ಕಮಿಷನ್ ನೋ ಕರಪ್ಷನ್' ನೀತಿಯಡಿ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಇದೀಗ ಬಿಡುಗಡೆ ಆಗುತ್ತಿರುವ 33ನೇ ಕಂತಿನ ಅನುದಾನವೂ ಶೀಘ್ರದಲ್ಲೇ ಫಲಾನುಭವಿಗಳ ಕೈಸೇರಲಿದೆ ಎಂದು ದಿನೇಶ್ ಗೂಳಿಗೌಡ ಅವರು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಕುರಿತು ಮಾಹಿತಿ

ಯೋಜನೆಯಡಿ ಅರ್ಹ ಮಹಿಳಾ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಸರ್ಕಾರದ ನೇರ ಹಣ ವರ್ಗಾವಣೆ ವ್ಯವಸ್ಥೆಯ ಮೂಲಕ ಮೊತ್ತವನ್ನು ಪಾವತಿಸುವುದರಿಂದ ಮಧ್ಯವರ್ತಿಗಳ ಅವಶ್ಯಕತೆ ಇರುವುದಿಲ್ಲ. ಯೋಜನೆಯ ಪ್ರಯೋಜನ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಹಾಗೂ ಆಧಾರ್ ವಿವರಗಳು ಸರಿಯಾಗಿರುವುದು ಮುಖ್ಯವಾಗುತ್ತದೆ.

ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡಿರುವ ಫಲಾನುಭವಿಗಳು ತಮ್ಮ ಹಣದ ಜಮಾ ಸ್ಥಿತಿಯನ್ನು ಸಂಬಂಧಿತ ಸರ್ಕಾರಿ ಸೇವಾ ವ್ಯವಸ್ಥೆಗಳ ಮೂಲಕ ಪರಿಶೀಲಿಸಬಹುದು. ಕೆಲ ಸಂದರ್ಭಗಳಲ್ಲಿ ಬ್ಯಾಂಕ್ ಖಾತೆ, ಆಧಾರ್ ಜೋಡಣೆ ಅಥವಾ ಇತರ ದಾಖಲೆಗಳಲ್ಲಿನ ಸಮಸ್ಯೆಯಿಂದ ಹಣ ವರ್ಗಾವಣೆಯಲ್ಲಿ ವಿಳಂಬವಾಗುವ ಸಾಧ್ಯತೆಯೂ ಇರುತ್ತದೆ.

ಮಹಿಳೆಯರ ಕೈಗೆ ನೇರವಾಗಿ ಹಣ ತಲುಪಿಸುವ ಮೂಲಕ ಕುಟುಂಬದ ಆರ್ಥಿಕ ನಿರ್ಧಾರಗಳಲ್ಲಿ ಅವರ ಪಾತ್ರವನ್ನು ಹೆಚ್ಚಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಹಲವು ಕುಟುಂಬಗಳಿಗೆ ಆರ್ಥಿಕ ಬೆಂಬಲದ ಮೂಲವಾಗಿದ್ದು, ಮಹಿಳೆಯರ ಸ್ವಾವಲಂಬನೆಗೆ ಉತ್ತೇಜನ ನೀಡುವ ಯೋಜನೆಯಾಗಿ ಗುರುತಿಸಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+