Gruhalakshmi Scheme: ರಾಜ್ಯದ ಗೃಹಲಕ್ಷ್ಮಿಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದರಿಂದ ಅದೇಷ್ಟೋ ಕುಟುಂಬಗಳು ಜೀವನ ನಡೆಸುತ್ತಿರುವ ಉದಾಹರಣೆಗಳಿವೆ. ಆದರೆ, ಮತ್ತೊಂದೆಡೆ ಹಲವು ಕಂತಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ ಎನ್ನುವ ಆರೋಪ ಕೇಳಿಬಂದಿವೆ. ಈ ಕುರಿತು ಸದನದಲ್ಲಿ ವಿಪಕ್ಷ ನಾಯಕರು ಪ್ರಶ್ನೆಗಳನ್ನು ಎತ್ತಿದ್ದಾರೆ. ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು ನಾಲ್ಕು ತಿಂಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾಕೆ ಹೆಚ್ಚು ಕಮ್ಮಿ ಆಗಿದೆ ಎನ್ನುವ ಪ್ರಶ್ನೆಗಳನ್ನು ಕೇಳಲಾಗಿದೆ. ಇದಕ್ಕೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗಾಗಲೇ ಆಗಸ್ಟ್‌ವರೆಗೂ ಗೃಹಲಕ್ಷ್ಮಿ ಹಣ ಸಂದಾಯ ಮಾಡಿದ್ದೀವಿ. ಆದರೆ, ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಂದಿಲ್ಲ ಎಂದು ವಿಪಕ್ಷದವರು ಹೇಳುತ್ತಿದ್ದಾರೆ. ಒಂದು ವೇಳೆ ಕೊಡದೇ ಹೋದ್ರೆ, ಕೂಡಲೇ ಕೊಡಿಸೋಣ. ಅವರು ಹೇಳಿರುವ ಪ್ರಕಾರ, ಮಾರ್ಚ್, ಏಪ್ರಿಲ್‌ನಲ್ಲಿ ಅವರ ಗಮನಕ್ಕೆ ತಂದಿರುತ್ತಾರೆ. ನನ್ನ ಪ್ರಕಾರ, ಆಗಸ್ಟ್‌ವರೆಗೂ ನಾವು ಹಣ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

ಯಾವಾಗಲೂ ಎರಡು ತಿಂಗಳ ವ್ಯತ್ಯಾಸ ಇರುತ್ತದೆ. ಆದರೆ, ಆಗಸ್ಟ್‌ನಲ್ಲಿ ಹಣವನ್ನು ಬಿಡುಗಡೆ ಮಾಡಿದ್ದೇವೆ. ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಹಣ ಕೊಡುವ ಕೆಲಸವನ್ನು ಮಾಡುತ್ತೇವೆ. ಬಂದಿಲ್ಲ ಅಂದ್ರೆ ಕೂಡಲೇ ಕೊಡಿಸುವಂತಹ ಕೆಲಸವನ್ನ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು. ಈ ಮೂಲಕ ಬಾಕಿ ಉಳಿದ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳುವ ಮೂಲಕ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಾಕಿ ಉಳಿಸಿಕೊಂಡಿರುವ ಆರೋಪಗಳ ಕುರಿತು ಮಹಿಳಾ-ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಇಂದು ವಿಪಕ್ಷ ನಾಯಕರು ಆಕ್ರೋಶ ಹೊರಹಾಕಿದರು. ಫೆಬ್ರವರಿ-ಮಾರ್ಚ್ ತಿಂಗಳ ಹಣ ಬಿಡುಗಡೆ ಆಗಿಲ್ಲ ಯಾಕೆ? ಎಂದು ಪ್ರಶ್ನೆ ಮಾಡಿದರು.
ಈ ಪ್ರಶ್ನೆಗೆ ಉತ್ತರ ನೀಡಲು ಲಕ್ಷ್ಮಿ ಹಬ್ಬಾಳ್ಕರ್ ಬದಲಿಗೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರಿಸಿದ್ದು, ಗೃಹಲಕ್ಷ್ಮೀ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಶಾಸಕ ಮಹೇಶ್ ಟೆಂಗಿನಕಾಯಿ ಅವರು ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಇನ್ನೂ ಬಿಡುಗಡೆ ಆಗಿಲ್ಲ ಎಂದು ಸ್ಪಷ್ಟನೆ ಕೇಳಿದ್ದಾರೆ.
ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಾನು ಎಲ್ಲವನ್ನೂ ಹೇಳಿದ್ದೇನೆ ಎಂದು ಮಾತ್ರ ಉತ್ತರ ನೀಡಿದ್ದಾರೆ. ಯಾವ ತಿಂಗಳವರೆಗೆ ಹಣ ಬಿಡುಗಡೆ ಆಗಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಲಿಲ್ಲ. ಇದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿಜೆಪಿ ಶಾಸಕ ಸುನೀಲ್ ಕುಮಾರ್ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಗಸ್ಟ್ ತಿಂಗಳವರೆಗೆ ಹಣವನ್ನು ಬಿಡುಗಡೆ ಮಾಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಒಂದು ವೇಳೆ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಹಣ ಬಂದಿಲ್ಲ ಅಂದರೆ ಕೊಡಿಸೋಣ. ಸಾಮಾನ್ಯವಾಗಿ ಎರಡು ತಿಂಗಳು ವಿಳಂಬ ಆಗುತ್ತದೆ. ಬಂದಿಲ್ಲ ಅಂದರೆ ಕೂಡಲೇ ಕೊಡಿಸುವ ಕೆಲಸ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.












Click it and Unblock the Notifications