Gruhalakshmi Scheme: ಚುನಾವಣೆ ಸಮಯದಲ್ಲೇ ಗೃಹಲಕ್ಷ್ಮೀ ಸೇರಿ ಗ್ಯಾರಂಟಿ ಯೋಜನೆಗೆ ಸಂಕಷ್ಟ, ಸಿದ್ದರಾಮಯ್ಯ ಹೇಳಿದ್ದೇನು
Gruhalakshmi Guarantee Scheme: ಚುನಾವಣೆ ಸಮಯದಲ್ಲೇ ಗೃಹಲಕ್ಷ್ಮೀ ಸೇರಿ ಗ್ಯಾರಂಟಿ ಯೋಜನೆಗಳಿಗೆ ಸಂಕಷ್ಟ ಎದುರಾಗಿದ್ದು, ಈ ಯೋಜನೆಗಳ ಬಗ್ಗೆ ಭಾರತೀಯ ಚುನಾವಣಾ ಆಯೋಗವು ಪ್ರಶ್ನೆ ಮಾಡಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ಕೊಟ್ಟಿದ್ದಾರೆ.
ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು (ECI) ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದು, ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿದೆ. ನಮ್ಮ ಗ್ಯಾರಂಟಿ ಯೋಜನೆಗಳು ಈ ಉಪಚುನಾವಣೆ ಸಮಯದಲ್ಲಿ ಜಾರಿಯಾದವುಗಳಲ್ಲ ಎಂಬುದನ್ನು ಆರಂಭದಲ್ಲೇ ಸ್ಪಷ್ಟಪಡಿಸುತ್ತಿದ್ದೇನೆ.

ಇವು 2023ರ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ನೀಡಿದ ಭರವಸೆಗಳ ಭಾಗವಾಗಿ ನಮ್ಮ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಕಾರ್ಯಕ್ರಮಗಳಾಗಿವೆ. ಈ ಯೋಜನೆಗಳಡಿ ರಾಜ್ಯದ ಎಲ್ಲ ಫಲಾನುಭವಿಗಳ ಖಾತೆಗಳಿಗೆ ನಿಯಮಿತವಾಗಿ, ಪಾರದರ್ಶಕವಾಗಿ ಹಣ ವರ್ಗಾವಣೆಯಾಗುತ್ತಿದೆ. ರಾಜ್ಯದ ಎಲ್ಲ ವರ್ಗದ ಜನರು ಘನತೆಯಿಂದ ಜೀವಿಸಲು ಮತ್ತು ಜೀವನ ನಿರ್ವಹಣೆಗೆ ಹಾಗೂ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರವು ನೇರವಾಗಿ ಒದಗಿಸುತ್ತಿರುವ ಅನುದಾನವಾಗಿದೆ. ಈ ಯೋಜನೆಗಳು ಆಡಳಿತದ ಭಾಗವೇ ಹೊರತು, ಮತದಾರರನ್ನು ಸೆಳೆಯುವ ಕಾರ್ಯಕ್ರಮಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮುಂದುವರಿದು ಬಿಜೆಪಿಯು ಗ್ಯಾರಂಟಿ ಯೋಜನೆಗಳ ಬಗ್ಗೆ ಇಬ್ಬಗೆ ನೀತಿಯ ಧೋರಣೆಯನ್ನು ತಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ಕಡೆ ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು "ಬಿಟ್ಟಿ ಭಾಗ್ಯ" ಎಂದು ಅಪಹಾಸ್ಯ ಮಾಡುತ್ತಾರೆ. ಮತ್ತೊಂದು ಕಡೆ ಅದೇ ಯೋಜನೆಗಳನ್ನು ಅನುಕರಿಸಿ ತಾವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಜಾರಿಗೊಳಿಸುತ್ತಾರೆ. ಇದರಿಂದ ಕರ್ನಾಟಕದ ಮಾದರಿಯು ದೇಶಕ್ಕೆ ಪ್ರೇರಣೆಯಾಗಿದೆ ಎಂಬುದು ಸ್ಪಷ್ಟವಾಗುತ್ತದೆ.
ಆದರೆ ಈ ವಿಚಾರವಾಗಿ ಚುನಾವಣಾ ಆಯೋಗ ಅನುಸರಿಸುತ್ತಿರುವ ನೀತಿಯು ಅನುಮಾನಸ್ಪದವಾಗಿದೆ. ಮಹಾರಾಷ್ಟ್ರ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಚುನಾವಣೆಗೂ ಮುನ್ನ ನಗದು ವರ್ಗಾವಣೆ ಯೋಜನೆಗಳನ್ನು ಪ್ರಕಟಿಸಲಾಗಿದೆ ಮತ್ತು ಅಂತಹ ಯೋಜನೆಗಳ ಪ್ರಕ್ರಿಯೆಯನ್ನು ವೇಗಗೊಳಿಸಲಾಗಿದೆ. ಮತದಾರರಿಗೆ ನೇರವಾಗಿ ಯೋಜನೆಗಳ ಲಾಭವನ್ನು ವರ್ಗಾವಣೆ ಮಾಡಲಾಗಿದೆ. ಅವೆಲ್ಲವೂ ಬಹಿರಂಗವಾಗಿ ನಡೆದಿವೆ. ಆದರೂ ಚುನಾವಣಾ ಆಯೋಗ ಮೌನವಹಿಸಿತ್ತು, ಯಾವುದೇ ಪರಿಶೀಲನೆಗೆ ಒಳಪಡಿಸದೆ ಯೋಜನೆಗಳನ್ನು ಮುಂದುವರಿಸಲು ಅನುಮತಿ ನೀಡಿತ್ತು.
ಇದು ನಿಷ್ಪಕ್ಷಪಾತ ನಡೆಯಲ್ಲ, ಇದು ಒಂದು ಪಕ್ಷಕ್ಕೆ ನೀಡಿದ ಸಹಕಾರವಾಗಿದೆ. ಬಿಜೆಪಿ ಅಥವಾ ಎನ್‌ಡಿಎ ಸರ್ಕಾರಗಳು ಏನು ಮಾಡಿದರೂ ಚುನಾವಣಾ ಆಯೋಗ ಕಣ್ಣು ಮುಚ್ಚಿಕೊಂಡಿರುತ್ತದೆ. ಆದರೆ ಕರ್ನಾಟಕ ಸರ್ಕಾರ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿರುವಾಗ ಅದೇ ಆಯೋಗವು ಕ್ಯಾತೆ ತೆಗೆಯುತ್ತಿದೆ. ಈ ಇಬ್ಬಗೆಯ ನೀತಿಯು ಚುನಾವಣಾ ಆಯೋಗದ ಪಕ್ಷಪಾತವನ್ನು ಬಯಲು ಮಾಡುತ್ತದೆ.
Gruhalakshmi Scheme: ಕರ್ನಾಟಕದ ಗ್ಯಾರಂಟಿ ಯೋಜನೆ
ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಗುರಿಯಾಗಿಸಿ ದಾಳಿ ಮಾಡುವುದು ಕೇವಲ ರಾಜಕೀಯ ಎಂದೆನಿಸುವುದಿಲ್ಲ - ಇದು ಬಡವರ ವಿರುದ್ಧ, ಮಹಿಳೆಯರ ವಿರುದ್ಧ ಮತ್ತು ಕರ್ನಾಟಕದ ವಿರುದ್ಧದ ಪರೋಕ್ಷ ದಾಳಿಯಾಗಿದೆ. ನುಡಿದಂತೆ ನಡೆವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ನಮ್ಮ ಸರ್ಕಾರವು ಚುನಾವಣಾ ಆಯೋಗದ ಇಂತಹ ಗೊಡ್ಡು ಬೆದರಿಕೆಗಳಿಗೆ ಬಗ್ಗದೆ ತಾನು ಕೊಟ್ಟ ಭರವಸೆಗಳನ್ನು ಪೂರೈಸುವಲ್ಲಿ ಬದ್ಧವಾಗಿರುತ್ತದೆ ಮತ್ತು ಪ್ರತಿ ಕನ್ನಡಿಗನ ಸೇವೆಯನ್ನು ಎಂದಿನಂತೆ ಮುಂದುವರಿಸಲಿದೆ ಎಂದೂ ಹೇಳಿದ್ದಾರೆ. ಈ ಮೂಲಕ ಗೃಹಲಕ್ಷ್ಮೀ ಹಣ ಬಿಡುಗಡೆಯ ಸುಳಿವು ನೀಡಿದಂತೆ ಆಗಿದೆ.
-
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
Content Creator: ಇನ್ಸ್ಟಾಗ್ರಾಂನಿಂದ ತಿಂಗಳಿಗೆ 70 ಲಕ್ಷ ರೂಪಾಯಿ ಗಳಿಕೆ: ಎಲ್ಲರ ಹುಬ್ಬೇರಿಸಿದ ಕೇರಳ ಕಂಟೆಂಟ್ ಕ್ರಿಯೇಟರ್












Click it and Unblock the Notifications