Gruhalakshmi Scheme: ಗೃಹಲಕ್ಷ್ಮಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್: ₹4,000 ಜಮಾ ಬಗ್ಗೆ ಅಪ್ಡೇಟ್
Gruhalakshmi Scheme: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತದೆ. ಹಾಗೆಯೇ ಇದೀಗ ಎರಡು ಕಂತುಗಳ ಹಣ ಬಿಡುಗಡೆ ಬಗ್ಗೆ ಮಹತ್ವದ ಮಾಹಿತಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ.
ಹೌದು.. ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ವೀರಭೂಮಿ ಸ್ಮಾರಕದ ಲೋಕಾರ್ಪಣೆ ಸಮಾರಂಭ ನಡೆಯಿತು. ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗವಹಿಸಿ ಈ ಕುರಿತು ಮಾತನಾಡಿದ್ದು, ಸಿಎಂ ಸಿದ್ದರಾಮಯ್ಯ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಎರಡು ತಿಂಗಳ ಹಣ ಬಿಡುಗಡೆ ಯಾವಾಗ?: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೃಹ ಲಕ್ಷ್ಮೀ ಯೋಜನಾ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಎರಡು ತಿಂಗಳ ಹಣ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದರು. ಇದೇ ವೇಳೆ ರಾಜಕೀಯದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಪ್ರಯತ್ನಗಳು ನಡೆಯುತ್ತಿವೆ ಅಂತಲೂ ಹೇಳಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಮನವಾಗಿ ತಲುಪುತ್ತಿವೆ. ಎಷ್ಟೋ ಜನರಿಗೆ ಗೃಹಲಕ್ಷ್ಮೀ ಹಣ ಬಂದಿದೆ. ಇದರಿಂದ ಮಹಿಳೆಯರ ಜೀವನ ಉತ್ತಮ ಆಗಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಜನರ ಜೀವನ ಉತ್ತಮಗೊಂಡಿದೆ ಎಂದು ತಿಳಿಸಿದರು.
"ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡಿದ್ದೇನೆ. ಆದಷ್ಟು ಬೇಗ ಅವರ ಖಾತೆಗೆ ಹಾಕುವಂತೆ ಸೂಚನೆ ನೀಡಿದ್ದಾರೆ," ಎಂದು ಘೋಷಿಸಿದರು. ಇನ್ನೂ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿಗೆ 2,000 ರೂಪಾಯಿ ನೀಡಲಾಗುತ್ತದೆ. ಕೆಲವು ತಿಂಗಳುಗಳಿಂದ ಹಣ ಬಿಡುಗಡೆಯಲ್ಲಿ ವಿಳಂಬ ಆದ ಕಾರಣ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ಶೀಘ್ರವೇ ಹಣ ಜಮಾ: ಗೃಹಲಕ್ಷ್ಮಿ ಯೋಜನೆಯು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಇದು ಬಡ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಾಯ ಆಗುತ್ತಿದೆ. ಇದೀಗ ಸಚಿವೆ ಹೆಬ್ಬಾಳ್ಕರ್ ಅವರ ಈ ಮಹತ್ವದ ಘೋಷಣೆಯಿಂದ ಲಕ್ಷಾಂತರ ಮಹಿಳೆಯರಿಗೆ ಸಂತಸ ಆದಂತಾಗಿದೆ. ಅವರು ಹೇಳಿರುವ ಪ್ರಕಾರ, ಹಣ ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮಾ ಆಗುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ.
ರಾಯಣ್ಣನ ಬಗ್ಗೆ ಹೆಬ್ಬಾಳ್ಕರ್ ಹೇಳಿದ್ದೇನು?: ರಾಯಣ್ಣ ವೀರಭೂಮಿ ಲೋಕಾರ್ಪಣೆ ಸಮಾವೇಶ ಸಮಾರಂಭದಲ್ಲಿ ಭಾಷಣ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಡೀ ರಾಷ್ಟ್ರಕ್ಕೆ ಹೆಮ್ಮೆಯಾಗುವಂತಹ ಕೆಲಸ ರಾಯಣ್ಣ ವೀರಭೂಮಿ ಲೋಕಾರ್ಪಣೆಯ ಮೂಲಕ ನಡೆದಿದೆ ಎಂದು ಹೇಳಿದರು. ಸಂಗೊಳ್ಳಿ ರಾಯಣ್ಣ ಅಂದರೆ ಧೈರ್ಯ, ವಿಶ್ವಾಸ, ತ್ಯಾಗ ಮತ್ತು ದೇಶಭಕ್ತಿ. ರಾಯಣ್ಣ ಹೆಸರು ಕೇಳಿದರೆ ಸಾಕು ರೋಮಾಂಚನವಾಗುತ್ತದೆ ಎಂದು ವರ್ಣನೆ ಮಾಡಿದರು.
33 ವರ್ಷದಲ್ಲಿ ರಾಯಣ್ಣರನ್ನು ಗಲ್ಲಿಗೇರಿಸಲಾಯಿತು. ಆದರೆ ಸೂರ್ಯ, ಚಂದ್ರ ಇರುವವರೆಗೂ ಅವರ ಹೆಸರು ಉಳಿಯುತ್ತದೆ ಎಂದು ಹೇಳಿದರು. ಇಂತಹ ಮಹಾನ್ ನಾಯಕರಿಂದಲೇ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಸ್ಮರಿಸಿದರು. ಹೀಗೆ ರಾಯಣ್ಣನ ಬಗ್ಗೆ ಮಾತನಾಡಿದ್ದು, ಇದೇ ವೇಳೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಕುರಿತು ಈ ಮಹತ್ವದ ಮಾಹಿತಿ ಬಿಚ್ಚಿಟ್ಟರು. ಎರಡು ಕಂತುಗಳ ಹಣ ಶೀಘ್ರದಲ್ಲೇ ಜಮಾ ಆಗಲಿದೆ ಎನ್ನುವ ಭರವಸೆ ನೀಡಿದರು.
-
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ












Click it and Unblock the Notifications