Gruhalakshmi Scheme: ಮಾಸಿಕ 2,000 ರೂಪಾಯಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದ್ಹೇಗೆ?
Gruhalakshmi Scheme: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಸಹ ಒಂದಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಖಾತೆಗೆ 2,000 ರೂಪಾಯಿ ಹಣವನ್ನು ಹಾಕಲಾಗುತ್ತಿದೆ. ನೀವೂ ಇದರ ಪ್ರಯೋಜನಾ ಪಡೆಬೇಕೆ? ಹಾಗಾದ್ರೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹಾಗೂ ಇದಕ್ಕೆ ಬೇಕಾಗುವ ದಾಖಲೆಗಳ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗೃಹಲಕ್ಷಿ ಯೋಜನೆ ಅಡಿಯಲ್ಲಿ ನೀಡಲಾಗುತ್ತಿರುವ 2,000 ರೂಪಾಯಿ ಅದೆಷ್ಟೋ ಬಡ ಕುಟುಂಬಗಳಿಗೆ ಸಹಾಯ ಆಗಿದೆ. ಮತ್ತೊಂದೆಡೆ ಈ ಯೋಜನೆ ಪಡೆಯದೇ ಇರುವ ಫಲಾನುಭವಿಗಳು ತುಂಬಾ ಜನ ಇದ್ದಾರೆ. ಹಾಗಾದ್ರೆ, ಅಂತಹರು ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಅರ್ಜಿ ಸಲ್ಲಿಸುವ ವಿಧಾನಗಳು
* ಅರ್ಜಿ ಸಲ್ಲಿಕೆಗೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
* ನಂತರ ಹೊಸ ನೋಂದಣಿಯನ್ನು ಆಯ್ಕೆ ಮಾಡಿಕೊಂಡು ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿ.
* ಅಲ್ಲಿ ಕೇಳಲಾಗುವ ವೈಯಕ್ತಿಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
* ಎಲ್ಲಾ ಮಾಹಿತಿ ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ, ಆಗ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
* ಅಲ್ಲದೆ, ಅಧಿಕೃತ ಸೇವಾ ಸಿಂಧು ಗ್ಯಾರಂಟಿ ಯೋಜನೆಗಳ ಪೋರ್ಟಲ್ ಅಥವಾ ಸೇವಾ ಸಿಂಧು ಸೇವಾ ಪ್ಲಸ್ ವೆಬ್ಸೈಟ್ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.
* ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಪಡಿತರ ಚೀಟಿ
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ
* ವಿಳಾಸ ಪುರಾವೆ
* ಇತ್ತೀಚಿನ ಭಾವಚಿತ್ರ
* ಆಧಾರ್ಗೆ ಲಿಂಕ್ ಆಗಿರುವ ಸಕ್ರಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಕೆಗೆ ಅರ್ಹತೆಗಳು
* ಅರ್ಜಿದಾರ ಮಹಿಳೆ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
* ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು.
* ಮಹಿಳೆ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಥವಾ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅರ್ಹರಲ್ಲ.
* ಕೇಂದ್ರ ಅಥವಾ ರಾಜ್ಯ ಸರ್ಕಾರದ ಇತರ ಯಾವುದೇ ಕಲ್ಯಾಣ ಯೋಜನೆಯ ಫಲಾನುಭವಿಗಳು ಆಗಿರಬಾರದು.
ಹಣ ಬರದಿದ್ದರೆ ನೀವು ಮಾಡಬೇಕಾದ ಕೆಲಸಗಳು
* ನಿಮ್ಮ ಖಾತೆಗೆ ಹಣ ಜಮಾ ಆಗದಿದ್ದರೆ ಹತ್ತಿರದ ಸಿಡಿಪಿಒ ಕಚೇರಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕು. ಜೊತೆಗೆ ಆಧಾರ್ ಕಾರ್ಡ್, ಬ್ಯಾಂಕ್ ವಿವರ, ರೇಷನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಮೊಬೈಲ್ ನಂಬರ್ ತೆಗೆದುಕೊಂಡು ಹೋಗುವುದು ಅಗತ್ಯ.
* ನಿಮ್ಮ ಬ್ಯಾಂಕ್ ಖಾತೆಗೆ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ಲಿಂಕ್ ಮಾಡಿದೆ, ಹಾಗರಯೇ NPCI ಮ್ಯಾಪಿಂಗ್ ಮಾಡಿಸಬೇಕು.
* ಕೆಲವೊಮ್ಮೆ NPCI ದೋಷದಿಂದ ಹಣ ಜಮಾ ಆಗದೆ ಇರಬಹುದು. ಇಂತಹ ಸಂದರ್ಭಗಳಲ್ಲಿ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸುವುದು ಉತ್ತಮ
* ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಅನ್ನು ಕಡ್ಡಾಯವಾಗಿ ಮಾಡಿಸಬೇಕು.
* ಫಲಾನುಭವಿಗಳು ಹಣ ಜಮೆಯಾಗಲು ತಡವಾದಲ್ಲಿ ಸಹಾಯವಾಣಿ ಸಂಖ್ಯೆ 190700192216 / 08022279954 / 8792662814 / 8792662816ಗೆ ಕರೆ ಮಾಡಿ ಅಥವಾ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಜೆಎಎಲ್ ದಿವಾಳಿ ಪ್ರಕ್ರಿಯೆ ಬಗ್ಗೆ ವೇದಾಂತ ಆಕ್ಷೇಪ; ಅದಾನಿ ಬಿಡ್ಗೆ ಸಾಲದಾತರ ಸಮಿತಿ, ನ್ಯಾಯಮಂಡಳಿಗಳ ಬೆಂಬಲ ದಾಖಲೆಗಳಿಂದ ದೃಢ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications