Gruhalakshmi Scheme: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್
Gruhalakshmi Scheme: ಕಾಂಗ್ರೆಸ್ ನೇತೃತ್ವದ ಸಿಎಂ ಸಿದ್ದರಾಮಯ್ಯ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಖಾತೆಗೆ 2,000 ರೂಪಾಯಿ ಹಣ ಹಾಕಲಾಗುತ್ತದೆ. ಆದರೆ, ಕೆಲವು ಕಂತುಗಳ ಹಣ ಬಾಕಿಯಿರುವ ಬಗ್ಗೆ ಆರೋಪ ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಇದೀಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಬಾಕಿ ಎರಡು ಕಂತುಗಳ ಹಣ ಬಿಡುಗಡೆ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಪ್ರಮುಖವಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಬಾಕಿ ಉಳಿದಿದ್ದ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಬೆಳಗಾವಿಯಲ್ಲಿ ತಿಳಿಸಿದ್ದಾರೆ.

52,000 ರೂಪಾಯಿ ಜಮೆ: ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಇದು ದೊಡ್ಡ ಮಟ್ಟದ ನಿರಾಳತೆ ತಂದಿದೆ. ಈ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿ ನೀಡಲಾಗುತ್ತಿದ್ದು, ಇದೀಗ 26ನೇ ಕಂತಿನವರೆಗೆ ಹಣ ಬಿಡುಗಡೆಯಾಗುದೆ. ಈವರೆಗೆ ಒಟ್ಟು 52,000 ರೂಪಾಯಿಗಳಷ್ಟು ಮೊತ್ತ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.
ಯಜಮಾನಿಯರ ಬ್ಯಾಂಕ್ ಖಾತೆಗೆ ಜಮೆ: ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಬಡ ಹಾಗೂ ಮಧ್ಯಮ ವರ್ಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸಹಕಾರಿಯಾಗಿದ್ದು, ಕುಟುಂಬ ನಿರ್ವಹಣೆಗೆ ಸಹಾಯ ಮಾಡುತ್ತಿದೆ. ಇತ್ತೀಚೆಗೆ ಬಿಡುಗಡೆಗೊಂಡ ಎರಡು ತಿಂಗಳ ಹಣ ನೇರವಾಗಿ ಯಜಮಾನಿಯರ ಬ್ಯಾಂಕ್ ಖಾತೆಗೆ ಜಮೆಯಾಗಿದ್ದು, ಲಕ್ಷಾಂತರ ಮಹಿಳೆಯರಲ್ಲಿ ಸಂತಸ ಮೂಡಿಸಿದೆ. ಮುಂದಿನ ದಿನಗಳಲ್ಲೂ ಯೋಜನೆಯ ಹಣ ಬಿಡುಗಡೆ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಅರ್ಜಿ ಸಲ್ಲಿಸುವ ವಿಧಾನಗಳು
* ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
* ನಂತರ ಹೊಸ ನೋಂದಣಿಯನ್ನು ಆಯ್ಕೆ ಮಾಡಿಕೊಂಡು ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿ.
* ಅಲ್ಲಿ ಕೇಳಲಾಗುವ ವೈಯಕ್ತಿಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
* ಎಲ್ಲಾ ಮಾಹಿತಿ ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ, ಆಗ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
* ಅಲ್ಲದೆ, ಅಧಿಕೃತ ಸೇವಾ ಸಿಂಧು ಗ್ಯಾರಂಟಿ ಯೋಜನೆಗಳ ಪೋರ್ಟಲ್ ಅಥವಾ ಸೇವಾ ಸಿಂಧು ಸೇವಾ ಪ್ಲಸ್ ವೆಬ್ಸೈಟ್ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.
* ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಪಡಿತರ ಚೀಟಿ
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ
* ವಿಳಾಸ ಪುರಾವೆ
* ಇತ್ತೀಚಿನ ಭಾವಚಿತ್ರ
* ಆಧಾರ್ಗೆ ಲಿಂಕ್ ಆಗಿರುವ ಸಕ್ರಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಕೆಗೆ ಅರ್ಹತೆಗಳು
* ಅರ್ಜಿದಾರ ಮಹಿಳೆ ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.
* ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು.
* ಮಹಿಳೆ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ ಅಥವಾ ಜಿಎಸ್ಟಿ ರಿಟರ್ನ್ಸ್ ಸಲ್ಲಿಸುತ್ತಿದ್ದರೆ ಅರ್ಹರಲ್ಲ.
* ಕೇಂದ್ರ ಅಥವಾ ರಾಜ್ಯ ಸರ್ಕಾರದ ಇತರ ಯಾವುದೇ ಕಲ್ಯಾಣ ಯೋಜನೆಯ ಫಲಾನುಭವಿಗಳು ಆಗಿರಬಾರದು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications