Gruhalakshmi Scheme: ರಾಜ್ಯದಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್: ಸರ್ಕಾರದಿಂದ ಮಹತ್ವದ ನಿರ್ಧಾರ

Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ಪ್ರತಿ ಮನೆ ಯಜಮಾನಿ ಖಾತೆಗೆ, ಪ್ರತಿ ತಿಂಗಳು 2,000 ರೂಪಾಯಿ ಹಾಕಲಾಗುತ್ತದೆ. ಆದರೆ, ಸಾವನ್ನಪಿದವರ ಹೆಸರಲ್ಲಿ ಕೂಡ ಹಣ ಪಡೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇದೀಗ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ.

ಕರ್ನಾಟಕ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ದುರುಪಯೋಗ ತಡೆಯಲು ಮತ್ತು ಅರ್ಹರಿಗೆ ಮಾತ್ರ ಯೋಜನೆಯ ಲಾಭ ಸಿಗುವಂತೆ ಮಾಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಯ ಫಲಾನುಭವಿಗಳ ಅರ್ಹತೆಯನ್ನು ಮರುಪರಿಶೀಲಿಸಲು ಸೇವಾ ಸಿಂಧು ಕೇಂದ್ರಗಳ ಜೊತೆಗೆ ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಕೇಳಿದ ಪ್ರಶ್ನೆಗೆ ಈ ಉತ್ತರ ನೀಡಿದ್ದಾರೆ.

Gruhalakshmi Scheme Karnataka State Government Plans Reverification of Beneficiaries Know details

ಬಯೊಮೆಟ್ರಿಕ್, ಫೇಸ್ ಆಥೆಂಟಿಕೇಶನ್..

ಅರ್ಹರನ್ನು ಗುರುತಿಸುವ ಮತ್ತು ನಕಲಿ ಖಾತೆಗಳನ್ನು ತಡೆಯುವ ಉದ್ದೇಶದಿಂದ ಮರುಪರಿಶೀಲನಾ ಪ್ರಕ್ರಿಯೆಯಲ್ಲಿ ಫಲಾನುಭವಿಗಳ ಬಯೊಮೆಟ್ರಿಕ್ ಅಥವಾ ಫೇಸ್ ಆಥೆಂಟಿಕೇಶನ್ (ಮುಖ ಗುರುತಿಸುವಿಕೆ) ಕಡ್ಡಾಯ ಮಾಡಲಾಗಿದೆ. ಈ ತಾಂತ್ರಿಕ ಪರಿಶೀಲನೆಗಾಗಿ ಇ-ಡಿಸಿಎಸ್ ಮೂಲಕ ವಿಶೇಷ ಮೊಬೈಲ್ ಆ್ಯಪ್ ಹಾಗೂ ವೆಬ್ ಪೋರ್ಟಲ್‌ವೊಂದನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರಸ್ತುತ ಇದು ಅಂತಿಮ ಹಂತದ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಯೋಜನೆಯ ವೆಚ್ಚ, ಪ್ರಸ್ತುತ ಸ್ಥಿತಿ

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಾಗಿನಿಂದ ಸರ್ಕಾರ ಈವರೆಗೆ ಒಟ್ಟು 76,951 ಕೋಟಿ ರೂಪಾಯಿಗಳನ್ನು ವಿನಿಯೋಗಿಸಿದೆ. ಪ್ರಸ್ತುತ ಯೋಜನೆಯಡಿ 1,24,48,938 (ಸುಮಾರು 1.24 ಕೋಟಿ) ನೋಂದಾಯಿತ ಫಲಾನುಭವಿಗಳಿದ್ದಾರೆ. ಪ್ರತಿಕ್ರಿಯೆಯಲ್ಲಿ ನೀಡಲಾದ ಮಾಹಿತಿಯಂತೆ, ಪ್ರತಿಯೊಬ್ಬ ಅರ್ಹ ಗೃಹಿಣಿಗೆ 32 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ನೇರ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಹಣ ತಲುಪಿಸಲಾಗಿದೆ.

ಮೃತಪಟ್ಟವರ ಖಾತೆಗೆ ಹಣ ಜಮೆ

ಯೋಜನೆ ಪ್ರಾರಂಭ ಆದಾಗಿನಿಂದ ಜೂನ್ 2026ರ ಕೊನೆಯವರೆಗೆ ಒಟ್ಟು 3,13,297 ಫಲಾನುಭವಿಗಳು ಮರಣ ಹೊಂದಿದ್ದಾರೆ ಎಂಬ ಆಘಾತಕಾತಿ ಸಂಗತಿ ಬೆಳಕಿಗೆ ಬಂದಿದೆ. ಈ ಪೈಕಿ 1,10,562 ಮೃತ ಫಲಾನುಭವಿಗಳ ಖಾತೆಗಳಿಗೆ ಅವರು ತೀರಿಕೊಂಡ ನಂತರವೂ ಒಟ್ಟು 117.31 ಕೋಟಿ ರೂಪಾಯಿ ಜಮೆಯಾಗಿದೆ. ಇದರಲ್ಲಿ ಸರ್ಕಾರಕ್ಕೆ ಈವರೆಗೆ 40.07 ಕೋಟಿ ರೂಪಾಯಿ ಮಾತ್ರ ವಾಪಸ್ ಬಂದಿದ್ದು, ಬಾಕಿ ಹಣವನ್ನು ಹಿಂಪಡೆಯುವ ಪ್ರಕ್ರಿಯೆ ಚುರುಕಿನಿಂದ ಸಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯ ಲಾಭ ಪಡೆಯುತ್ತಿರುವುದೆಲ್ಲಿ?

ಜಿಲ್ಲಾವಾರು ಅಂಕಿಅಂಶಗಳ ಪ್ರಕಾರ, ಮೃತಪಟ್ಟ ಫಲಾನುಭವಿಗಳ ಸಂಖ್ಯೆ ಬೆಳಗಾವಿ ಜಿಲ್ಲೆಯಲ್ಲಿ ಅತ್ಯಧಿಕ ಇದ್ದರೆ, ಕೊಡಗು ಜಿಲ್ಲೆಯಲ್ಲಿ ಅತ್ಯಂತ ಕಡಿಮೆ (2,991) ದಾಖಲಾಗಿದೆ. ಇನ್ನೂ ಯೋಜನೆಯ ಹಣ ದುರುಪಯೋಗ ಆಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಸರಿಪಡಿಸುವ ಕ್ರಮ ಕೈಗೊಳ್ಳಲಾಗಿದೆ. ಮರಣ ಹೊಂದಿದ ಫಲಾನುಭವಿಯ ಬದಲಿಗೆ, ಆ ಕುಟುಂಬದ ಮತ್ತೊಬ್ಬ ಅರ್ಹ ಮಹಿಳಾ ಸದಸ್ಯರನ್ನು ನೂತನ ಫಲಾನುಭವಿಯಾಗಿ ಸೇರ್ಪಡೆಗೊಳಿಸುವ ಕಾರ್ಯವೂ ಪ್ರಗತಿಯಲ್ಲಿದೆ. ಸರ್ಕಾರದ ಪ್ರತಿಯೊಂದು ರೂಪಾಯಿಯೂ ಅರ್ಹ ಬಡ ಕುಟುಂಬಕ್ಕೆ ತಲುಪಬೇಕು ಎಂಬುದೇ ಈ ಮರುಪರಿಶೀಲನೆಯ ಮುಖ್ಯ ಉದ್ದೇಶವಾಗಿದೆ ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೇಳುವುದಾದರೆ ಈ ಯೋಜನೆಯಿಂದ ಅದೆಷ್ಟೋ ಕುಟುಂಬಗಳು ಜೀವನ ಸಾಗಿಸುತ್ತಿವೆ. ಈ ಹಣವನ್ನು ಮನೆ ಖರ್ಚು, ಸಾಮಾಗ್ರಿಗಳು, ಕೃಷಿ ಸಲಕರಣೆ ಸೇರಿದಂತೆ ಇನ್ನಿತರ ಉತ್ತಮ ಉದ್ದೇಶಗಳಿಗೆ ಬಳಸಿಕೊಂಡಿರುವ ಉದಾಹರಣೆಗಳಿವೆ. ಆದರೆ ಈ ನಡುವೆಯೇ ಕೆಲವರು ಸತ್ತವರರ ಹೆಸರಿನಲ್ಲಿ ಹಣ ಪಡೆದುಕೊಳ್ಳುತ್ತಿರುವ ಘಟನೆಗಳು ಬೆಳಕಿಗೆ ಬಂದಿವೆ. ಇದನ್ನ ತಡೆಗಟ್ಟಲು ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+