Gruhalakshmi scheme: ರಾಜ್ಯದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: 26, 27ನೇ ಕಂತಿನ ಹಣ ಜಮಾದ ಬಗ್ಗೆ ಮಹತ್ವದ ಅಪ್ಡೇಟ್
Gruhalakshmi scheme: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 26ನೇ ಕಂತಿನ 2,000 ರೂಪಾಯಿ ಫಲಾನುಭವಿಗಳ ಖಾತೆಗಳಿಗೆ ಜಮೆಯಾಗಿದೆ ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಹಾಗೆಯೇ ಇದೇ ವೇಳೆ 27ನೇ ಕಂತಿನ ಹಣ ಬಿಡುಗಡೆ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ವಿವರ.
ಇದುವರೆಗೆ ಪ್ರತಿ ಮನೆ ಯಜಮಾನಿಗೆ ಒಟ್ಟು 52,000 ರೂಪಾಯಿ ಪಾವತಿ ಆದಂತಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು 1,20,433 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ವರ್ಗಾಯಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ 1,24,10,629 ಮಹಿಳೆಯರು ನೋಂದಣಿಯಾಗಿದ್ದಾರೆ.

ಈ ಯೋಜನೆಗಾಗಿ ಈವರೆಗೂ 62,345.34 ಕೋಟಿ ರೂಪಾಯಿ ವೆಚ್ಚವಾಗಿದೆ. 26 ಕಂತುಗಳ ಹಣ ಯಶಸ್ವಿಯಾಗಿ ಪಾವತಿ ಆಗಿದ್ದು, 27ನೇ ಕಂತಿನ ಅನುದಾನವನ್ನು ಖಜಾನೆಯಿಂದ ಬಿಡುಗಡೆ ಮಾಡಲಾಗಿದೆ. ಶೀಘ್ರದಲ್ಲೇ ರಾಜ್ಯದ ಎಲ್ಲಾ 31 ಜಿಲ್ಲೆಗಳ ಫಲಾನುಭವಿಗಳಿಗೆ ಈ ಮೊತ್ತ ತಲುಪಲಿದೆ ಎಂದು ತಿಳಿಸಿದ್ದಾರೆ.
ಪ್ರತಿ ಕುಟುಂಬದ ಮನೆ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿ ನೀಡುವ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ನೆರವು ಕುಟುಂಬದ ಆರ್ಥಿಕ ನಿರ್ಧಾರಗಳಲ್ಲಿ ಮಹಿಳೆಯರ ಪಾತ್ರವನ್ನು ಬಲಪಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅರ್ಜಿ ಸಲ್ಲಿಸುವ ವಿಧಾನಗಳು
* ಅರ್ಜಿ ಸಲ್ಲಿಕೆಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
* ನಂತರ ಹೊಸ ನೋಂದಣಿಯನ್ನು ಆಯ್ಕೆ ಮಾಡಿಕೊಂಡು ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿ.
* ಅಲ್ಲಿ ಕೇಳಲಾಗುವ ವೈಯಕ್ತಿಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
* ಎಲ್ಲಾ ಮಾಹಿತಿ ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ, ಆಗ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
* ಅಲ್ಲದೆ, ಅಧಿಕೃತ ಸೇವಾ ಸಿಂಧು ಗ್ಯಾರಂಟಿ ಯೋಜನೆಗಳ ಪೋರ್ಟಲ್ ಅಥವಾ ಸೇವಾ ಸಿಂಧು ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.
* ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಪಡಿತರ ಚೀಟಿ
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ
* ವಿಳಾಸ ಪುರಾವೆ
* ಇತ್ತೀಚಿನ ಭಾವಚಿತ್ರ
* ಆಧಾರ್‌ಗೆ ಲಿಂಕ್ ಆಗಿರುವ ಸಕ್ರಿಯ ಮೊಬೈಲ್ ಸಂಖ್ಯೆ
ಉಳಿದ ಗ್ಯಾರಂಟಿ ಯೋಜನೆಗಳು ಹಾಗೂ ವೆಚ್ಚದ ಮಾಹಿತಿ
* ಗೃಹಜ್ಯೋತಿ ಯೋಜನೆ: ರಾಜ್ಯದ 1,65,65,000 ಮನೆಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದೆ. ಇದಕ್ಕಾಗಿ ಇದುವರೆಗೆ ರೂಪಾಯಿ 22,839 ಕೋಟಿ ವೆಚ್ಚವಾಗಿದೆ.
* ಶಕ್ತಿ ಯೋಜನೆ: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡಲಾಗುತ್ತಿದ್ದು, ಇದುವರೆಗೆ 679.20 ಕೋಟಿ ಉಚಿತ ಟಿಕೆಟ್‌ಗಳನ್ನು ವಿತರಿಸಲಾಗಿದೆ.
* ಅನ್ನಭಾಗ್ಯ ಯೋಜನೆ: ಬಡ ಕುಟುಂಬಗಳಿಗೆ ಉಚಿತ ಅಕ್ಕಿ ಅಥವಾ ನಗದು ಸಹಾಯ ಒದಗಿಸುವ ಈ ಯೋಜನೆಗೆ 16,000 ಕೋಟಿ ರೂಪಾಯಿ ವೆಚ್ಚ ಆಗಿದೆ.
* ಯುವನಿಧಿ ಯೋಜನೆ: 3,08,267 ನಿರುದ್ಯೋಗಿ ಪದವೀಧರರಿಗೆ ಮಾಸಿಕ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದುವರೆಗೆ 915 ಕೋಟಿ ರೂಪಾಯಿ ನೇರವಾಗಿ ಅವರ ಖಾತೆಗಳಿಗೆ ವರ್ಗಾಯಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಒಟ್ಟಿಬಲ್ಲಿ ಗ್ಯಾರಂಟಿ ಯೋಜನೆಗಳು ಕೇವಲ ಆರ್ಥಿಕ ನೆರವಲ್ಲ, ಗೌರವ ಮತ್ತು ಭದ್ರತೆಯ ಭರವಸೆಯೂ ಆಗಿವೆ. ಪಕ್ಷಭೇದವಿಲ್ಲದೆ ಅರ್ಹರೆಲ್ಲರಿಗೂ ಯೋಜನೆಗಳ ಲಾಭ ತಲುಪಿಸಲಾಗುತ್ತಿದೆ ಎಂದು ದಿನೇಶ್ ಗೂಳಿಗೌಡ ತಿಳಿಸಿದ್ದಾರೆ ಎಂದು ವರದಿಯಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications