Gruhalakshmi Scheme Update: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಜಮಾ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಬಿಗ್ ಅಪ್ಡೇಟ್
Gruhalakshmi Scheme: ಗೃಹಲಕ್ಷ್ಮಿ ಯೋಜನೆಯು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳಲ್ಲಿ ಒಂದಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಬ್ಯಾಂಕ್ ಖಾತೆಗೆ 2,000 ರೂಪಾಯಿ ಹಣ ಹಾಕಲಾಗುತ್ತದೆ. ಇದೀಗ ಬಾಕಿ ಉಳಿದಿದ್ದ ಕಂತುಗಳ ಬಿಡುಗಡೆ ಆಗಿದ್ದು, ಇದನ್ನು ಯಾವಾಗ ಖಾತೆಗೆ ಹಾಕಲಾಗುತ್ತದೆ ಎನ್ನುವ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಗ್ ಅಪ್ಡೇಟ್ ಅನ್ನು ಕೊಟ್ಟಿದ್ದಾರೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಶೀಘ್ರದಲ್ಲೇ ಇನ್ನೂ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಎರಡು ಕಂತುಗಳ ಹಣ ಬಿಡುಗಡೆ ಬಗ್ಗೆ ಮಾಹಿತಿ: ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಹೆಚ್ಚುವರಿಯಾಗಿ ಎರಡು ಕಂತುಗಳ ಮೊತ್ತವನ್ನು ಬಿಡುಗಡೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು 26 ಕಂತುಗಳಲ್ಲಿ 52 ಸಾವಿರ ರೂಪಾಯಿ ನೆರವು ಫಲಾನುಭವಿಗಳಿಗೆ ದೊರೆಯಲಿದೆ ಎಂದು ಸಚಿವೆ ಮಾಹಿತಿ ನೀಡಿದ್ದಾರೆ.
ಹಣ ಜಮಾ ಆಗದಿದ್ದರೆ ಏನು ಮಾಡಬೇಕು?: ಗೃಹಲಕ್ಷ್ಮಿ ಯೋಜನೆಯ ಕೆಲ ಫಲಾನುಭವಿಗಳಿಗೆ ತಿಂಗಳುಗಳಾದರೂ ಹಣ ಜಮಾ ಆಗದಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದವು. ಈ ಸಮಸ್ಯೆ ಪರಿಹಾರಕ್ಕಾಗಿ ಅನೇಕರು ತಾಲೂಕು ಕಚೇರಿಗಳಲ್ಲಿ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಈ ಗೊಂದಲಕ್ಕೆ ತೆರೆ ಬೀಳುವಂತೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ.
ಮೊಟ್ಟ ಮೊದಲ ಬಾರಿಗೆ ಗೃಹಲಕ್ಷ್ಮಿ ಯೋಜನೆಗಾಗಿ ವಿಶೇಷ ಸಹಾಯವಾಣಿ ಸಂಖ್ಯೆಯನ್ನು ಸರ್ಕಾರ ಕಲ್ಪಿಸಿದೆ. ಫಲಾನುಭವಿಗಳು ತಮ್ಮ ಸಮಸ್ಯೆ, ಹಣ ಜಮಾ ಆಗದಿರುವ ಬಗ್ಗೆ ಮಾಹಿತಿ ಪಡೆಯಲು ಸಹಾಯವಾಣಿ 181ಕ್ಕೆ ಕರೆ ಮಾಡಬಹುದು. ಈ ಮೂಲಕ ಕಚೇರಿ ಸುತ್ತಾಟದ ತೊಂದರೆ ಕಡಿಮೆಯಾಗಲಿದೆ. ಸರ್ಕಾರದ ಈ ಮಹತ್ವದ ಕ್ರಮದಿಂದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಮತ್ತಷ್ಟು ಪರಿಣಾಮಕಾರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಗೃಹಲಕ್ಷ್ಮಿ ಯೋಜನೆಯ ಉದ್ದೇಶ: ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಿಸುವುದು, ಕುಟುಂಬದ ದಿನನಿತ್ಯದ ಖರ್ಚುಗಳಿಗೆ ನೆರವು ನೀಡುವುದು ಮತ್ತು ಸಮಾಜದಲ್ಲಿ ಮಹಿಳೆಯರ ಸ್ಥಾನಮಾನವನ್ನು ಬಲಪಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸರ್ಕಾರ ನೇರ ಡಿಬಿಟಿ ಮೂಲಕ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡುತ್ತದೆ.
ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹತಾ ಮಾನದಂಡಗಳನ್ನು ಸರ್ಕಾರ ನಿಗದಿಪಡಿಸಿದೆ. ಸಾಮಾನ್ಯವಾಗಿ ಬಿಪಿಎಲ್, ಎಪಿಎಲ್ ಮತ್ತು ಅಂತರಂಗ ಕಾರ್ಡ್ ಹೊಂದಿರುವ ಕುಟುಂಬಗಳ ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರಕ್ರಿಯೆ ಸರಳವಾಗಿದ್ದು, ಸೇವಾ ಕೇಂದ್ರಗಳು ಮತ್ತು ಆನ್‌ಲೈನ್ ವ್ಯವಸ್ಥೆಯ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಗೃಹಲಕ್ಷ್ಮಿ ಯೋಜನೆ ಗ್ರಾಮೀಣ ಮತ್ತು ನಗರ ಪ್ರದೇಶಗಳ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನಗಳು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಯನ್ನು ಸರ್ಕಾರ ಸರಳ ಮತ್ತು ಸುಲಭ ವ್ಯವಸ್ಥೆಯನ್ನು ಕಲ್ಪಿಸಿದೆ. ಅರ್ಹ ಮಹಿಳೆಯರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಲ್ಲಿ ಅರ್ಜಿ ಫಾರ್ಮ್ ಪಡೆದು ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಸಮಯದಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ವಿವರಗಳು ಹಾಗೂ ಮೊಬೈಲ್ ಸಂಖ್ಯೆ ಕಡ್ಡಾಯ ಆಗಿರುತ್ತದೆ.












Click it and Unblock the Notifications