ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಆಗದಿದ್ದರೆ ಏನು ಮಾಡಬೇಕು ಹಾಗೂ ಸ್ಟೇಟಸ್ ಚೆಕ್ ಮಡುವ ವಿಧಾನಗಳನ್ನು ತಿಳಿಯಿರಿ
Gruhalakshmi Scheme: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಇದರಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿ ಖಾತೆಗೆ 2,000 ರೂಪಾಯಿ ಹಣವನ್ನು ಹಾಕಲಾಗುತ್ತಿದೆ. ಒಂದು ವೇಳೆ ನಿಮ್ಮ ಖಾತೆಗೆ ಹಣ ಬಂದಿಲ್ಲವೆ? ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಬೇಕಾ? ಹಾಗಾದ್ರೆ, ಇಲ್ಲಿದೆ ನೋಡಿ ಈ ಬಗ್ಗೆ ಸಂಪೂರ್ಣ ಮಾಹಿತಿ.
ಗೃಹಲಕ್ಷಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ನೀಡಲಾಗುತ್ತಿರುವ 2,000 ರೂಪಾಯಿಯಿಂದ ಅದೆಷ್ಟೋ ಬಡ ಕುಟುಂಬಗಳಿಗೆ ಸಹಾಯ ಆದಂತಾಗಿದೆ. ಮತ್ತೊಂದೆಡೆ, ಇದನ್ನು ಹಲವರು ದುರುಪಯೋಗ ಪಡಿಸಿಕೊಂಡಿರುವ ಉದಾಹರಣೆಗಳಿವೆ. ಇನ್ನೂ ಹಲವು ಕಂತುಗಳ ಹಣ ಬಾಕಿ ಉಳಿಸಿಕೊಳ್ಳಲಾಗಿದೆ ಎನ್ನುವ ಆರೋಪಗಳು ಕೂಡ ಕೇಳಿಬಂದಿವೆ.

ಬಾಕಿ ಹಣದ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿರುವ ರಾಜ್ಯದ ಸರ್ಕಾರ, ಎಷ್ಟು ತಿಂಗಳ ಹಣ ಬಾಕಿ ಉಳಿಸಿಕೊಳ್ಳಲಾಗಿದೆಯೋ ಅದನ್ನು ಕೂಡಲೇ ಕೊಡುವ ಕೆಲಸವನ್ನು ಮಾಡಲಾಗುತ್ತದೆ ಎಂದು ಹೇಳಿದೆ. ಇದೆಲ್ಲದರ ನಡುವೆ ನಿಮ್ಮ ಖಾತೆಗೆ ಹಣ ಬರದಿದ್ದರೆ ಏನು ಮಾಡಬೇಕು ಹಾಗೂ ಹೊಸದಾಗಿ ಅರ್ಜಿ ಸಲ್ಲಿಸುವುದುದೇಗೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಹಣ ಬರದಿದ್ದರೆ ಮಾಡಬೇಕಾದ ಕೆಲಸಗಳು
* ನಿಮ್ಮ ಖಾತೆಗೆ ಹಣ ಜಮಾ ಆಗದಿದ್ದರೆ ಹತ್ತಿರದ CDPO ಕಚೇರಿ ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕು. ಜೊತೆಗೆ ಆಧಾರ್ ಕಾರ್ಡ್, ಬ್ಯಾಂಕ್ ವಿವರ, ರೇಷನ್ ಕಾರ್ಡ್ ಹಾಗೂ ಆಧಾರ್ ಲಿಂಕ್ ಮೊಬೈಲ್ ನಂಬರ್ ತೆಗೆದುಕೊಂಡು ಹೋಗುವುದು ಅಗತ್ಯ.
* ನಿಮ್ಮ ಬ್ಯಾಂಕ್ ಖಾತೆಗೆ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗದಿದ್ದರೆ ಲಿಂಕ್ ಮಾಡಿದೆ, ಹಾಗರಯೇ NPCI ಮ್ಯಾಪಿಂಗ್ ಮಾಡಿಸಬೇಕು.
* ಕೆಲವೊಮ್ಮೆ NPCI ದೋಷದಿಂದ ಹಣ ಜಮಾ ಆಗದೆ ಇರಬಹುದು. ಇಂತಹ ಸಂದರ್ಭಗಳಲ್ಲಿ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸುವುದು ಉತ್ತಮ
* ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಅನ್ನು ಕಡ್ಡಾಯವಾಗಿ ಮಾಡಿಸಬೇಕು.
* ಫಲಾನುಭವಿಗಳು ಹಣ ಜಮೆಯಾಗಲು ತಡವಾದಲ್ಲಿ ಸಹಾಯವಾಣಿ ಸಂಖ್ಯೆ 190700192216 / 08022279954 / 8792662814 / 8792662816ಗೆ ಕರೆ ಮಾಡಿ ಅಥವಾ ಹತ್ತಿರದ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು.
ಸ್ಟೇಟಸ್ ಚೆಕ್ ಮಾಡುವ ವಿಧಾನ
* ಗೃಹಲಕ್ಷ್ಮಿ ಹಣ ಜಮಾ ಆಗಿದೆಯೋ ಇಲ್ಲವೋ ಎಂಬುದರ ಬಗ್ಗೆ ತಿಳಿದುಕೊಳ್ಳಲು ನಿಮ್ಮ ಮೊಬೈಲ್‌ನಲ್ಲಿ ಕರ್ನಾಟಕ DBT ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಿ.
* ಅದರಲ್ಲಿ ಕೇಳುವ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ಲಾಗ್ ಇನ್ ಆಗಿ.
* ನಂತರ ನಿಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ.
* ನೀವು ನೀಡಿದ ನಂಬರ್‌ಗೆ ಒಟಿಪಿ ಬರುತ್ತದೆ. ಅದನ್ನು ನಮೂದಿಸಿ ಲಾಗಿನ್ ಆಗಿ.
* ಲಾಗ್ ಇನ್ ಆದ ನಂತರ ಪೇಮೆಂಟ್ ಸ್ಟೇಟಸ್‌ನ ಮೇಲೆ ಕ್ಲಿಕ್ ಮಾಡಿ.
* ಬಳಿಕ ನಿಮಗೆ ಇದುವರೆಗೆ ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಜಮಾ ಆಗಿರುವ ಹಣದ ಬಗ್ಗೆ ಸಂಪೂರ್ಣ ಮಾಹಿತಿ ಸಿಗಲಿದೆ.
ಹೊಸ ಅರ್ಜಿ ಸಲ್ಲಿಕೆಗೆ ಬೇಕಾಗುವ ದಾಖಲೆಗಳು
* ಪಡಿತರ ಚೀಟಿ (ಇದರಲ್ಲಿ ಅರ್ಜಿದಾರ ಮಹಿಳೆ ಕುಟುಂಬದ ಯಜಮಾನಿ ಎಂದು ನಮೂದಾಗಿರಬೇಕು)
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆಯ ವಿವರ
* ವಿಳಾಸ ಪುರಾವೆ
* ಇತ್ತೀಚಿನ ಭಾವಚಿತ್ರ
* ಆಧಾರ್‌ಗೆ ಲಿಂಕ್ ಆಗಿರುವ ಸಕ್ರಿಯ ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸುವುದೇಗೆ?
* ಅರ್ಜಿ ಸಲ್ಲಿಕೆಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
* ನಂತರ ಹೊಸ ನೋಂದಣಿಯನ್ನು ಆಯ್ಕೆ ಮಾಡಿಕೊಂಡು ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ ಬಳಸಿ ಲಾಗಿನ್ ಆಗಿ.
* ಅಲ್ಲಿ ಕೇಳಲಾಗುವ ವೈಯಕ್ತಿಯ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.
* ಎಲ್ಲಾ ಮಾಹಿತಿ ಸರಿಯಾಗಿದ್ದರೆ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ, ಆಗ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
* ಅಲ್ಲದೆ, ಅಧಿಕೃತ ಸೇವಾ ಸಿಂಧು ಗ್ಯಾರಂಟಿ ಯೋಜನೆಗಳ ಪೋರ್ಟಲ್ ಅಥವಾ ಸೇವಾ ಸಿಂಧು ಸೇವಾ ಪ್ಲಸ್ ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.
* ಹತ್ತಿರದ ಕರ್ನಾಟಕ ಒನ್, ಬೆಂಗಳೂರು ಒನ್, ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು.
ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಷರತ್ತುಗಳು
* ಕುಟುಂಬದ ಯಜಮಾನಿ ಅಥವಾ ಅವರ ಪತಿ ಆದಾಯ ತೆರಿಗೆ ಪಾವತಿದಾರರಾಗಿರಬಾರದು.
* ಕುಟುಂಬದ ಯಜಮಾನಿ ಅಥವಾ ಆಕೆಯ ಪತಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿರಬಾರದು.
* ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕಾಗುತ್ತದೆ.












Click it and Unblock the Notifications