Karnataka Budget 2025: ಗೃಹ ಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಅಕ್ಕ ಕೋ-ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ: ಸಿಎಂ ಘೋಷಣೆ
ಬೆಂಗಳೂರು, ಮಾರ್ಚ್ 07: ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ತ್ವರಿತ ಸಾಲ ಸೌಲಭ್ಯ ಒದಗಿಸಿ, ಆರ್ಥಿಕ ಅಗತ್ಯತೆಗಳ ಪೂರೈಕೆ ಮತ್ತು ಭದ್ರತೆ ಒದಗಿಸಿ, ಉಳಿತಾಯ ಮತ್ತು ಉದ್ಯಮಿಶೀಲತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ಅಕ್ಕ ಕೋ ಆಪರೇಟಿವ್ ಸೊಸೈಟಿ ಸ್ಥಾಪಿಸಲಾಗುವುದು. ಗೃಹ ಲಕ್ಷ್ಮಿ ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯಮಟ್ಟದ ಅಕ್ಕ ಕೋ ಆಪರೇಟಿವ್ ಸೊಸೈಟಿ ವಾಪ್ತಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದರು.
ಗೃಹಲಕ್ಷ್ಮಿ ಯೋಜನೆಯನ್ನು 2023-24ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 2024-25ನೇ ಸಾಲಿನಲ್ಲಿ 1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಧನಸಹಾಯ ಒದಗಿಸಲಾಗಿತ್ತು. ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು.

ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ. ವಿಕಲಚೇತನರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಲು ಹಾಗೂ ಅವರಿಗೆ ಸೂಕ್ತ ಸೌಲಭ್ಯ ಒದಗಿಸುವ ಹಿತದೃಷ್ಟಿಯಿಂದ ವಿಕಲಚೇತನರ ಸಮೀಕ್ಷೆ ನಡೆಸಲಾಗುವುದು.
ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು. Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು.
ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು.
ವಿಶೇಷ ಪಾಲನಾ ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಧನಸಹಾಯವನ್ನು 1,000 ರೂ.ನಿಂದ 2,000 ರೂ.ಗೆ ಹೆಚ್ಚಿಸಲಾಗುವುದು.
ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1,750 ರೂ.ಗಳಿಗೆ ಹೆಚ್ಚಿಸಲಾಗುವುದು. ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂ. ಒದಗಿಸಲಾಗುವುದು. ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 62,033 ಕೋಟಿ ರೂ. ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications