Gruha Lakshmi: ಯುಗಾದಿಗೆ ಸಿಗಲಿದೆ ಮಹಿಳೆಯರಿಗೆ ಧನಲಕ್ಷ್ಮಿ: ಸರ್ಕಾರದಿಂದ ಗುಡ್‌ನ್ಯೂಸ್!
Gruha Lakshmi: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಒಟ್ಟು ಮೊತ್ತ 4,000 ಸಾವಿರ ರೂಪಾಯಿ ಯಾವಾಗ ಬಿಡುಗಡೆಯಾಗಲಿದೆ ಎನ್ನುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯ ಹಣವು ಕಳೆದ ಎರಡು ತಿಂಗಳಿನಿಂದ ಬಿಡುಗಡೆ ಆಗಿಲ್ಲ. ಇದೀಗ ಈ ಯೋಜನೆಯ ಹಣ ಯಾವಾಗ ಬಿಡುಗಡೆ ಆಗಲಿದೆ ಎನ್ನುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಗ್ ಅಪ್ಡೇಟ್ ಕೊಟ್ಟಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣ ಮಹಿಳೆಯರ ಖಾತೆಗೆ ಸರಿಯಾಗಿ ಜಮೆ ಆಗುತ್ತಿಲ್ಲ ಎನ್ನುವ ಆರೋಪ ಇದೆ. ಈ ಯೋಜನೆಯ ಹಣವು ಕಳೆದ ಮೂರು ತಿಂಗಳಿನಿಂದ ಹೆಚ್ಚು ಸಮಸ್ಯೆ ಆಗುತ್ತಿದೆ ಎಂದು ಚರ್ಚೆಯಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಸರ್ಕಾರವು ಏಕಕಾಲಕ್ಕೆ ಜಮೆ ಮಾಡುತ್ತಿಲ್ಲ. ಒಂದು ತಿಂಗಳು ಪಾವತಿ ಮಾಡಿದರೆ ಮತ್ತೊಂದು ತಿಂಗಳು ಹಣವನ್ನು ಪಾವತಿಯೇ ಮಾಡುತ್ತಿಲ್ಲ. ಇದೀಗ ಈ ಯೋಜನೆಯ ಗೊಂದಲಗಳು ಹಾಗೂ ಯಾವಾಗ ಹಣ ಬಿಡುಗಡೆ ಆಗಲಿದೆ ಎನ್ನುವ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಪ್ಡೇಟ್ ಕೊಟ್ಟಿದ್ದಾರೆ.

ಯುಗಾದಿ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ: ಗೃಹಲಕ್ಷ್ಮಿ ಯೋಜನೆಯ ಹಣವು ಯುಗಾದಿ ಹಬ್ಬದ ಸಮಯದಲ್ಲಿ ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಪ್ಡೇಟ್ ಕೊಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಇದೀಗ ರಾಜ್ಯ ಸರ್ಕಾರವು ಗುಡ್‌ನ್ಯೂಸ್ ಕೊಟ್ಟಿದೆ.
ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣದ ಬಗ್ಗೆ ಕಳೆದ ಕೆಲವು ದಿನಗಳಿಂದ ಗಂಭೀರವಾದ ಚರ್ಚೆಗಳು ನಡೆದಿವೆ. ಈ ಯೋಜನೆಯ ಹಣವನ್ನು ಪ್ರತಿ ತಿಂಗಳು ಸಹ ಸರಿಯಾಗಿ ಸಮಯಕ್ಕೆ ಖಾತೆಗೆ ಹಾಕುತ್ತಿಲ್ಲ ಎನ್ನುವ ಆರೋಪ ಇದೆ. ಆದರೆ ರಾಜ್ಯ ಸರ್ಕಾರವು ಈ ಬಗ್ಗೆ ಸ್ಪಷ್ಟನೆ ನೀಡಿದೆ. ಯೋಜನೆಯ ಹಣ ತುಸು ವಿಳಂಬವಾಗುತ್ತಿದೆ. ಆದರೆ ನಾವು ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಲಾಗಿದೆ.
ಇದೀಗ ಗೃಹಲಕ್ಷ್ಮಿ ಯೋಜನೆಯ 4000 ಸಾವಿರ ರೂಪಾಯಿಗಾಗಿ ಕಾಯುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗುಡ್‌ನ್ಯೂಸ್ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಾಕಿ ಉಳಿದಿದೆ. ಯಾವಾಗ ಈ ಹಣ ಮಹಿಳೆಯರ ಖಾತೆಗೆ ಜಮೆಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೊಸ ಅಪ್ಡೇಟ್ ಕೊಟ್ಟಿದ್ದಾರೆ.
ಯುಗಾದಿ ಸಂಭ್ರಮದಲ್ಲಿ ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಯಾಗಲಿದೆ. ಮಾರ್ಚ್ 31 ಆದ ಮೇಲೆ ಅಥವಾ ಅದಕ್ಕೂ ಮುಂಚೆಯೇ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ 4,000 ಸಾವಿರ ರೂಪಾಯಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.
ದಿನಾಂಕ ನಿಗದಿಗೆ ಆಗ್ರಹ: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳೂ ವಿಳಂಬ ಮಾಡಲಾಗುತ್ತಿದೆ. ಹೀಗಾಗಿ, ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಗೆ ದಿನಾಂಕ ನಿಗದಿ ಮಾಡಬೇಕು ಎಂದು ಮಹಿಳೆಯರು ಆಗ್ರಹಿಸಿದ್ದಾರೆ. ಈ ಹಣ ಬಿಡುಗಡೆಗೆ ಒಂದು ನಿರ್ದಿಷ್ಟ ದಿನಾಂಕವನ್ನು ನಿಗದಿ ಮಾಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.












Click it and Unblock the Notifications