ಎಸ್. ಎಲ್. ಧರ್ಮೇಗೌಡ ಆತ್ಮಹತ್ಯೆ; ಕಂಬನಿ ಮಿಡಿದ ಜಿಟಿಡಿ

ಶಿವಮೊಗ್ಗ, ಡಿಸೆಂಬರ್ 29; ಜೆಡಿಎಸ್ ನಾಯಕ, ವಿಧಾನ ಪರಿಷತ್‌ನ ಉಪ ಸಭಾಪತಿ ಎಸ್. ಎಲ್. ಧರ್ಮೇಗೌಡ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಕಡೂರು ತಾಲೂಕಿನ ಸರಪನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸೋಮವಾರ ರಾತ್ರಿ ಎಸ್. ಎಲ್. ಧರ್ಮೇಗೌಡ (65) ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧರ್ಮೇಗೌಡರ ಅಕಾಲಿಕ ಸಾವು ಹಲವು ನಾಯಕರಿಗೆ ಬೇಸರ ಉಂಟು ಮಾಡಿದೆ. ಅದರಲ್ಲೂ ಆತ್ಮಹತ್ಯೆ ಮಾಡಿಕೊಂಡಿರುವುದು ಅಘಾತ ತಂದಿದೆ.

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಅವರು ಸಹ ಧರ್ಮೇಗೌಡರ ಸಾವಿಗೆ ಸಂತಾಪವನ್ನು ಸೂಚಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. "ನನ್ನ ಸ್ನೇಹಿತರು ಹಾಗೂ ಸಹಕಾರಿಗಳಾದ ವಿಧಾನ ಪರಿಷತ್‌ನ ಉಪ ಸಭಾಪತಿಗಳು ಎಸ್. ಎಲ್. ಧರ್ಮೇಗೌಡ ಅವರ ಅಕಾಲಿಕ ಸಾವಿನ ಸುದ್ದಿ ನಿಜಕ್ಕೂ ಆಘಾತವನ್ನು ಉಂಟುಮಾಡಿದೆ" ಎಂದು ಹೇಳಿದ್ದಾರೆ.

GT Deve Gowda Expresses Condolences For SL Dharme Gowda Death

"ಅವರ ನಿಧನ ನನಗೆ ವೈಯುಕ್ತಿಕವಾಗಿ ತೀರಾ ಬೇಸರವನ್ನುಂಟು ಮಾಡಿದೆ. ಧರ್ಮೇಗೌಡರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ" ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಜಿ. ಟಿ. ದೇವೇಗೌಡ ಅವರು ಟ್ವೀಟ್ ಮಾಡಿದ್ದಾರೆ.

Recommended Video

      ಸಜ್ಜನ ರಾಜಕಾರಣಿ , ಈ ಸಾವು ನ್ಯಾಯವೇ? | DKS | Oneindia Kannada

      ಎಸ್. ಎಲ್. ಧರ್ಮೇಗೌಡರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಡೂರಿನ ಸಖರಾಯಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಂತಿಮ ದರ್ಶನದ ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+