ಲೋಕಸಭೆಗೆ ಕುಮಾರಸ್ವಾಮಿ ಸ್ಪರ್ಧಿಸುವ ಸುಳಿವು ನೀಡಿದ ದೇವೇಗೌಡ, ಯಾವ ಕ್ಷೇತ್ರದಿಂದ ಕಣಕ್ಕೆ?
ಹುಬ್ಬಳ್ಳಿ, ಫೆಬ್ರವರಿ10: ಲೋಕಸಭಾ ಚುನಾವಣೆ ಹಿನ್ನಲೆ ರಾಜ್ಯ ರಾಜಕಾರಣದಲ್ಲಿ ಚುನಾವಣಾ ಕಾವು ಜೋರಾಗಿದೆ. ಲೋಕಸಮರಕ್ಕೆ ಮೈತ್ರಿಯಾಗಿರುವ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ಕುರಿತು ಹಲವು ಸುತ್ತಿನ ಮಾತುಕತೆ ನಡೆಯುತ್ತಿದ್ದು, ಮಂಡ್ಯದಿಂದ ಮಾಜಿ ಸಿಎಂ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗಿದೆ.
ಹೌದು, ಲೋಕಸಭಾ ಚುನಾವಣೆಯಲ್ಲಿ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಅನ್ನ ರಾಜ್ಯದಲ್ಲಿ ಮಕಾಡೆ ಮಲಗಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ತಂತ್ರಗಾರಿಕೆಯನ್ನ ರೂಪಿಸಿದ್ದು, ಕ್ಷೇತ್ರ ಹಂಚಿಕೆ ಕುರಿತು ಹಾಗೂ ಲೋಕಸಭಾ ಚುನಾವಣೆಯ ಕುರಿತು ಮಾಜಿ ಸಚಿವರಾದ ಜಿಟಿ ದೇವೇಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸುಳಿವು ನೀಡಿದ್ದಾರೆ.

ಈಗಾಗಲೇ ಆರು ಕ್ಷೇತ್ರಗಳ ಕುರಿತು ಬಿಜೆಪಿ ಹೈಕಮಾಂಡ್ ನಾಯಕರ ಮುಂದೆ ದಳಪತಿಗಳು ಬೇಡಿಕೆ ಇಟ್ಟಿದ್ದು, ಕಳೆದುಕೊಂಡ ಮಂಡ್ಯ ಲೋಕಸಭಾ ಕ್ಷೇತ್ರವನ್ನ ಮರಳಿ ಪಡೆಯುವ ತಂತ್ರಗಾರಿಕೆಯನ್ನ ದಳಪತಿಗಳು ಹಾಕಿಕೊಂಡಿದ್ದಾರೆ. ಇನ್ನೂ ಈ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರ ಕುಟುಂಬದಿಂದ ಇಬ್ಬರು ಅಭ್ಯರ್ಥಿಗಳು ಆಗಬಹುದು. ಹೆಚ್ ಡಿ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಇಬ್ಬರು ಅಭ್ಯರ್ಥಿಗಳಾಗಬಹದು ಎಂದು ಹೇಳಿದ್ದು, ಬಹುತೇಕ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಅಭ್ಯರ್ಥಿಯಾಗಲಿದೆ ಎಂದು ಹೇಳಲಾಗಿದೆ.
ಅಲ್ಲದೇ 2019 ರ ಲೋಕಸಭಾ ಚುನಾವಣೆ ಹಾಗೂ 2023 ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧಿಸುವುದು ಅನುಮಾನವಾಗಿದೆ. ಹೀಗಾಗಿ ನಿಖಿಲ್ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ ಎಂದು ಹೇಳಿದರು. ಈ ಮೂಲಕ ಪ್ರಜ್ವಲ್ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ, ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕಿಳಿಯುವುದು ಖಚಿತವಾದಂತಾಗಿದೆ.

ಬಿಜೆಪಿ, ಜೆಡಿಎಸ್ ಜೊತೆಗೂಡಿ 28 ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ. 28 ಲೋಕಸಭಾ ಕ್ಷೇತ್ರಗಳಲ್ಲಿ 6 ಕ್ಷೇತ್ರಗಳನ್ನು ಕೇಳಲು ಹೇಳಿದ್ದೇವೆ. ತುಮಕೂರು, ಹಾಸನ, ಮಂಡ್ಯ, ಮೈಸೂರು-ಕೊಡಗು, ಕೋಲಾರ ಸೇರಿ ಆರು ಕ್ಷೇತ್ರ ಕೇಳಿದ್ದೇವೆ ಎಂದು ಜಿಟಿ ದೇವೇಗೌಡ, ಲೋಕಸಭೆಯಷ್ಟೇ ಅಲ್ಲ, ವಿಧಾನಸಭೆ ಚುನಾವಣೆಗೂ ಮೈತ್ರಿ ಆಗಬೇಕು ಎಂದು ಸ್ಪಷ್ಟಪಡಿಸಿದರು.
ಕುಮಾರಸ್ವಾಮಿಗೆ ಅವತ್ತು ಭಕ್ತ ಬಂದು ಕೇಸರಿ ಶಾಲು ಹಾಕಿದ್ರು. ಕೇಸರಿ ಏನೂ ಬಿಜೆಪಿಯ ಸಿಂಬಲ್ ಅಲ್ಲಾ. ಕುಮಾರಸ್ವಾಮಿ ಬಿಜೆಪಿಯ ಸಿಂಬಲ್ ಇರೋದು ಹಾಕಿಲ್ಲ. ಅದು ಆಂಜನೇಯನ ಧ್ವಜ, ನಮ್ಮ ಪಕ್ಷದ ತತ್ವ ಸಿದ್ದಾಂತ ಬೇರೆ. ಬಿಜೆಪಿ ತತ್ವ ಸಿದ್ದಾಂತ ಬೇರೆ. ಮೋದಿ ಕಾರಣಕ್ಕೆ ನಾವು ಹೊಂದಾಣಿಕೆ ಆಗಿರೋದು. ಬಿಜೆಪಿಯ ಯಾವ ತತ್ವ ಸಿದ್ದಾಂತವನ್ನು ನಾವು ಜೆಡಿಎಸ್ ಪಕ್ಷದ ಒಳಗಡೆ ಬಿಟ್ಕೋಳಲ್ಲ.
ಕೇಂದ್ರ ಸರ್ಕಾರ ಅನುದಾನ ಕೊಟ್ಟಿದೆ. ಇದೇ ಸಿದ್ದರಾಮಯ್ಯ ಶಾಸಕರಿಗೆ ಏನ ಕೊಟ್ಟಿದಾರೆ. 224 ಶಾಸಕರಿಗೆ ಕೇವಲ 50 ಲಕ್ಷ ಕೊಟ್ಟಿದಾರೆ. ನಾವ ಯಾರೂ ಸರ್ಕಾರ ತಗೆಯಲ್ಲ ಎಂದ ಅವರು, ಅವರ ಭಾರದಿಂದಲೇ ಅದು ಕುಸಿಯಬೇಕು. ಕುಮಾರಸ್ವಾಮಿ ಸರ್ಕಾರ ಯಾರ ತಗೆದರೋ,ಹಾಗೆ ಆಗಬಹುದು. ಸರ್ಕಾರ ಬೀಳತ್ತೆ ಅಂತಾ ಹೇಳೋಕೆ ಆಗಲ್ಲ,ಐದು ವರ್ಷ ಉಳಿಯತ್ತೆ ಅಂತಾನೂ ಹೇಳೋಕೆ ಆಗಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೆಗೌಡ ಹೇಳಿದರು.
ನಾರಾಯಣಗೌಡ ಇದೀಗ ಸಿದ್ದರಾಮಯ್ಯ ಮನೇಲಿ ಕೂತಿದ್ದಾರೆ. ಹಾಗಾಗಿ ಸುಮಲತಾ ಕಾಂಗ್ರೆಸ್ ಗೆ ಹೋಗಬಹುದು. ಅಕಸ್ಮಾತ್ ಸುಮಲತಾ ಬಿಜೆಪಿ ಅಭ್ಯರ್ಥಿ ಆದ್ರೆ ಸ್ವಾಗತ. ಕುಮಾರಸ್ವಾಮಿ,ಪ್ರಜ್ವಲ್ ಇಬ್ಬರು ಅಭ್ಯರ್ಥಿಗಳ ಆಗಬಹುದು ಎಂದು ಮಾಜಿ ಸಚಿವರಾದ ಜಿ ಟಿ ದೇವೇಗೌಡ ಅವರು ತಿಳಿಸಿದರು.












Click it and Unblock the Notifications