ರಾಜ್ಯ ಸರ್ಕಾರದಿಂದ ಬಿಗ್‌ ಶಾಕ್;‌ ಜುಲೈನಿಂದಲೇ ಅನರ್ಹರಿಗೆ ಗ್ಯಾರಂಟಿ ಬಂದ್‌: ಹೊಸ ರೂಲ್ಸ್ ಜಾರಿ?‌

ಬೆಂಗಳೂರು, ಮೇ 29: 2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷ ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದು ನಿಮಗೆಲ್ಲಾ ಗೊತ್ತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬರೋಬ್ಬರಿ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿದ್ದು, ಸದ್ಯ ಅಧಿಕಾರದ ಗದ್ದುಗೆಯಲ್ಲಿ ಕೈ ಆರಾಮಗಿ ಕುಳಿತಿದೆ ಅಂದ್ರೆ ಅದಕ್ಕೆ ಪ್ರಮುಖ ಕಾರಣವೇ ಈ ಪಂಚ ಗ್ಯಾರಂಟಿ ಯೋಜನೆಗಳು. ಪಂಚ ಗ್ಯಾರಂಟಿಗಳನ್ನ ನೀಡುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಕಾಂಗ್ರೆಸ್‌ನಲ್ಲಿ ಗ್ಯಾರಂಟಿ ಯೋಜನೆಗಳು ಬಂದ್‌ ಬಗ್ಗೆ ಚರ್ಚೆಯಾಗುತ್ತಿದೆ.

ಹೌದು, ಕಾಂಗ್ರೆಸ್‌ ಪಂಚ ಗ್ಯಾರಂಟಿಗಳಾದ ಶಕ್ತಿ ಯೋಜನೆಯ ಬಸ್‌ ಫ್ರೀ, ಕರೆಂಟ್‌ ಉಚಿತ, ಯುವ ನಿಧಿ, ಅನ್ನಭಾಗ್ಯ ಹಾಗೂ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ಹಣವನ್ನ ಸರ್ಕಾರ ನೀಡುತ್ತಿದ್ದು, ವರ್ಷಕ್ಕೆ 56 ಸಾವಿರ ಕೋಟಿ ಹಣವನು ಗ್ಯಾರಂಟಿಗೆ ಕಾಂಗ್ರೆಸ್‌ ಸರ್ಕಾರ ಮೀಸಲಿಟ್ಟಿದೆ. ಆದರೆ, ಈ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್‌ನಲ್ಲಿಯೇ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದೆ. ಗ್ಯಾರಂಟಿಗಳೇ ಬೇಡ, ಹಣ ಪೂರ್ತೀ ಯೋಜನೆಗೆ ಹೋಗುತ್ತಿದೆ, ನಮಗೆ ಅನುದಾನ ಸಿಗುತ್ತಿಲ್ಲ ದಯವಿಟ್ಟು ಗ್ಯಾರಂಟಿ ಯೋಜನೆಗಳನ್ನ ಪರಿಷ್ಕರಣೆ ಮಾಡಿ ಎಂದು ಕಾಂಗ್ರೆಸಗ ಶಾಸಕರೇ ಸರ್ಕಾರದ ಮುಂದೆ ಅಳಲು ತೋಡಿಕೊಂಡಿದ್ದರು. ಆದರೆ, ಈಗ ಅನರ್ಹರಿಗೆ ಗ್ಯಾರಂಟಿ ಬಂದ್‌ ಮಾಡುತ್ತೇವೆ ಅನ್ನುವ ಮೂಲಕ ಕಾಂಗ್ರೆಸ್‌ ಸರ್ಕಾರ ಜನರಿಗೆ ಬಿಗ್‌ ಶಾಕ್‌ ಕೊಟ್ಟಿದೆ.

Guarantee Schemes For The Ineligible Will Be Closed In The State From July Basavaraj Rayareddy

ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಸಂಕಷ್ಟವನ್ನ ಸರ್ಕಾರ ಎದುರಿಸುತ್ತಿದೆ. ಅಲ್ಲದೇ ಅಧಿಕಾರಕ್ಕಾಗಿ ಜನರಿಗೆ ಗ್ಯಾರಂಟಿ ಯೋಜನೆಗಳನ್ನ ನೀಡಿದೆ ಎಂದು ಬಿಜೆಪಿ ನಾಯಕರು ಪದೇ ಪದೇ ಟೀಕೆಗಳನ್ನ ಮಾಡಿದ್ರು ಸಹ ಕಾಂಗ್ರೆಸ್‌ ಹಂತ ಹಂತವಾಗಿ ಈ ಐದು ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಸರ್ಕಾರವನ್ನ ನಡೆಸಿಕೊಂಡು ಹೋಗುತ್ತಿತ್ತು. ಇನ್ನೂ ಸ್ವಪಕ್ಷದ ನಾಯಕರೇ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ರು, ಆದರೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಸೇರಿದಂತೆ ಹಲವು ನಾಯಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವು ಬಾರೀ ಸ್ಪಷ್ಟನೆಯನ್ನ ನೀಡಿದ್ರು. ಆದರೆ, ಇದೀಗ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅನರ್ಹರಿಗೆ ಗ್ಯಾರಂಟಿ ಕೊಡುವುದು ಬೇಡ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಗ್ಯಾರಂಟಿಗಳಲ್ಲಿ ಅನರ್ಹ ಫಲಾನುಭವಿಗಳಿಗೂ ಯೋಜನೆಯ ಲಾಭ ಹೋಗುತ್ತಿದೆ. ಈ ಕುರಿತು ರಾಜ್ಯಾದ್ಯಂತ ತನಿಖೆ ಮಾಡಿಸಿ ಜುಲೈನಿಂದ ಅನರ್ಹರಿಗೆ ಗ್ಯಾರಂಟಿ ಲಾಭ ತಲುಪದಂತೆ ಕಡಿವಾಣ ಹಾಕಲಾಗುವುದು ಎಂದು ಹೇಳಿದ್ದಾರೆ. ಒಂದು ವಿಧಾನಸಭಾ ಕ್ಷೇತ್ರಕ್ಕೆ ವರ್ಷಕ್ಕೆ ಗ್ಯಾರಂಟಿ ಯೋಜನೆಯಡಿ ಅಂದಾಜು ₹250 ಕೋಟಿ ಹಣ ನೀಡುತ್ತಿದ್ದು, ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆ. ಆದರೆ, ಅರ್ಹ ಅಲ್ಲದವರಿಗೂ ಸಹ ಯೋಜನೆ ಲಾಭ ಸಿಗುತ್ತಿದೆ. ಈ ಬಗ್ಗೆ ರಾಜ್ಯಮಟ್ಟದಲ್ಲಿ ಅಧಿಕಾರಿಗಳ ತಂಡ ರಚಿಸಿ ತನಿಖೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಲಾಗುವುದು ಎಂದರು.

ಮನೆ ಬಾಡಿಗೆ ನೀಡಿದ್ದರೂ ಅವರಿಗೆ ಉಚಿತ ಗೃಹಜ್ಯೋತಿ ಯೋಜನೆ ದೊರೆಯುತ್ತಿದೆ. ಟ್ಯಾಕ್ಸ್, ಜಿಎಸ್‌ಟಿ ಹೊಂದಿದ ಕುಟುಂಬದ ಸದಸ್ಯರಿಗೂ ಗೃಹಲಕ್ಷ್ಮಿ ಹಣ ನೀಡುತ್ತಿದ್ದು, ಅನ್ನಭಾಗ್ಯದಲ್ಲಿ ಪಡಿತರ ಕಾರ್ಡ್‌ಗಳ ವ್ಯತ್ಯಾಸ ಗೋಚರಿಸಿದೆ. ಈ ಕುರಿತು ತನಿಖೆ ಮಾಡಿಸಲಾಗುವುದು ಎಂದು ಹೇಳುವ ಮೂಲಕ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಶಾಕ್‌ ಕೊಟ್ಟಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಕೊಡುವ 150 ರೂ. ಬದಲು ಆಹಾರ ಕಿಟ್ ನೀಡುವ ಚಿಂತನೆ ನಡೆಸಲಾಗಿದೆ. ಈ ಹಿಂದೆ 5 ಕೆ.ಜಿ ಅಕ್ಕಿ ಜತೆಗೆ 5 ಕೆ.ಜಿ ಪಡಿತರದ 150 ರೂ. ನಗದನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿತ್ತು. ಆದರೆ, ಹಣದ ಮೌಲ್ಯದಲ್ಲಿ ತೊಗರಿ ಬೆಳೆ, ಕೊಬ್ಬರಿ ಎಣ್ಣೆ ಸಕ್ಕರೆ, ಜೋಳ ಹೊಂದಿರುವ ಆಹಾರ ಧಾನ್ಯದ ಕಿಟ್ ವಿತರಿಸುವ ಚಿಂತನೆಯಿದೆ. ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+