Guarantee Schemes: ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಅಗ್ರಸ್ಥಾನ: ಸಿಎಂ ಸಿದ್ದರಾಮಯ್ಯ
Congress Guarantee Schemes: ಕಾಂಗ್ರೆಸ್ ಸರ್ಕಾರವು 5 ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇನ್ನು ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಅಗ್ರಸ್ಥಾನ ತಲುಪಿದ್ದು, ಈ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತಿರುವು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆಯೊಂದು ಬಿಡುಗಡೆ ಮಾಡಿರುವ ಅಂಕಿ-ಅಂಶಗಳನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ದೇಶದ ಜಿಡಿಪಿಯಲ್ಲಿ ಕರ್ನಾಟಕದ ಪಾಲು ಅಗ್ರಸ್ಥಾನಕ್ಕೆ ತಲುಪಿದೆ. ಜಿಎಸ್‌ಟಿ ಸಂಗ್ರಹದಲ್ಲೂ ಕರ್ನಾಟಕದ ಪಾಲು ದೊಡ್ಡದಿದೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತಿರುವುದು ಇದರಿಂದ ಸ್ಪಷ್ಟವಾಗುತ್ತದೆ. ಜನಸಾಮಾನ್ಯರ ಖರೀದಿ ಸಾಮರ್ಥ್ಯವನ್ನು ಹೆಚ್ಚಿಸಿದ ಗ್ಯಾರಂಟಿ ಯೋಜನೆಗಳು ಯಶಸ್ವಿ ಯೋಜನೆಗಳಾಗಿ ಹೊರಹೊಮ್ಮಿವೆ ಎಂದು ಸಿಎಂ ಸಿದ್ದೆರಾಮಯ್ಯ ಅವರು ಹೇಳಿದರು.
ದೇಶದ ಜಿಡಿಪಿಯಲ್ಲಿ ಕರ್ನಾಟಕದ ಕೊಡುಗೆ ಶೇಕಡ 2.8ರಷ್ಟು ಏರಿಕೆ ಕಂಡಿದ್ದು, ಎರಡನೇ ಸ್ಥಾನದಲ್ಲಿ ಶೇಕಡ 2.3ರಷ್ಟು ಕೊಡುಗೆ ಕೊಡುತ್ತಿರುವ ಗುಜರಾತ್ ಇದೆ. ಜಿಡಿಪಿಗೆ ಶೇಕಡ 2ರಷ್ಟು ಕೊಡುಗೆ ನೀಡುತ್ತಿರುವ ನವದೆಹಲಿ ಮೂರನೇ ಸ್ಥಾನದಲ್ಲಿದ್ದರೆ, ಶೇಕಡ 2ರಷ್ಟು ಕೊಡುಗೆ ಕೊಡುತ್ತಿರುವ ಆಂಧ್ರಪ್ರದೇಶ, ಶೇಕಡ 1.7ರಷ್ಟು ಕೊಡುಗೆ ನೀಡುತ್ತಿರುವ ಹರಿಯಾಣ ಕ್ರಮವಾಗಿ 4 ಹಾಗೂ 5ನೇ ಸ್ಥಾನದಲ್ಲಿವೆ. ಪಶ್ಚಿಮ ಬಂಗಾಳ ಹಾಗೂ ಉತ್ತರ ಪ್ರದೇಶದ ಕೊಡುಗೆ ಶೇಕಡ -4.9ಕ್ಕೆ ಇಳಿದಿದೆ.
ಕಾಂಗ್ರೆಸ್‌ನ 5 ಯೋಜನೆಗಳ ವಿವರ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಈಗಾಗಲೇ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ.
ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಯಜಮಾನಿಯರಿಗೆ 2,000 ರೂಪಾಯಿ ಹಣ, ಶಕ್ತಿ ಯೋಜನೆಯಡಿ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಅನ್ನಭಾಗ್ಯ ಯೋಜನೆಯಡಿ ಉಚಿತ ಪಡಿತರ, ಗೃಹಜ್ಯೋತಿ ಯೋಜನೆಯಡಿ ಉಚಿಯ ವಿದ್ಯುತ್ ಪೂರೈಕೆ, ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗಿ ಪದವೀಧರ ಯುವಜನತೆಗೆ ಪ್ರತಿ ತಿಂಗಳು 3,000 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ, ಪ್ಲೊಮಾ ಹೊಂದಿರುವ ಯುವಕರಿಗೆ ಪ್ರತಿ ತಿಂಗಳು 1,500 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ.
ಇನ್ನು ದಸರಾ ಹಬ್ಬದ ಸಂಭ್ರಮದಲ್ಲಿರುವ ನಾಡಿನ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ.
ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಗುರುವಾರದಂದು ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, "ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದ್ದ ಜಯಲೂ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಅಕ್ಟೋಬರ್ 7 ಮತ್ತು 9ರಂದು ರಾಜ್ಯದ ಯಜಮಾನಿಯರ ಖಾತೆಗೆ ಹಾಕಲಾಗುವುದು ಎಂದು ಭರವಸೆ ನೀಡಿದ್ದರು.












Click it and Unblock the Notifications