ಗ್ಯಾರಂಟಿ ಯೋಜನೆಗಳಿಂದ 2024 ರಲ್ಲಿ ಜನ ಸಾಮಾನ್ಯರ ಬದುಕಿನಲ್ಲಿ ಬದಲಾವಣೆ : ಡಿ ಕೆ ಶಿವಕುಮಾರ್
ಬೆಂಗಳೂರು, ಜನವರಿ 01:ರಾಜ್ಯ ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಸಾಧಿಸಲಿ. ರಾಜ್ಯವನ್ನು ಅಭಿವೃದ್ಧಿ ಹಾದಿಯಲ್ಲಿ ಮುನ್ನಡೆಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಗ್ಯಾರಂಟಿ ಯೋಜನೆಗಳಿಂದ 2024 ರಲ್ಲಿ ಜನ ಸಾಮಾನ್ಯರ ಬದುಕಿನಲ್ಲಿ ಅಸಾಮಾನ್ಯ ಬದಲಾವಣೆ ಉಂಟಾಗಿದೆ. ಇದರ ಜತೆಗೆ ರಾಜ್ಯದ ಸಮಗ್ರ ಕಲ್ಯಾಣಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, ಅವುಗಳನ್ನು ಸಮರ್ಪಕವಾಗಿ ಜಾರಿಗೊಳಿಸಿದೆ. ಎಲ್ಲಾ ವರ್ಗಗಳ ಕಲ್ಯಾಣಕ್ಕೆ ಶ್ರಮಿಸಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದ ಸಮಸ್ತ ಜನರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು. 2025ರ ವರ್ಷ ಎಲ್ಲರಿಗೂ ಹರ್ಷ ತರಲಿ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಭ ಹಾರೈಸಿದ್ದಾರೆ. ಗ್ಯಾರಂಟಿಯಿಂದ ಹೆಚ್ಚಾಗಲಿ ಜನರ ಬಲ, ಕರ್ನಾಟಕವಾಗಲಿ ಇನ್ನಷ್ಟು ಸಬಲ."ಹೊಸ ವರ್ಷದ ಈ ಶುಭ ಘಳಿಗೆಯನ್ನು ಹೊಸ ಉತ್ಸಾಹದೊಂದಿಗೆ ಆರಂಭಿಸಿ. ನಿಮ್ಮ ಕನಸುಗಳನ್ನು ಈಡೇರಿಸುವತ್ತ ನಿಮ್ಮ ಪಯಣ ಯಶಸ್ವಿಯಾಗಿ ಸಾಗಲಿ. ರಾಜ್ಯದಲ್ಲಿ ಈ ವರ್ಷವೂ ಮಳೆ, ಬೆಳೆ ಉತ್ತಮವಾಗಲಿ. ಎಲ್ಲರಿಗೂ ಆರೋಗ್ಯ, ಐಶ್ವರ್ಯ, ಯಶಸ್ಸು ಸಿಗಲಿ ಎಂದು ಶಿವಕುಮಾರ್ ಅವರು ತಮ್ಮ ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.

ಯುವ ಜನತೆ ನಮ್ಮ ಆಸ್ತಿ: ಸಿದ್ದರಾಮಯ್ಯ
ಯುವ ಜನತೆ ನಮ್ಮ ಸಮಾಜದ ಆಸ್ತಿ. ಇವರ ಭವಿಷ್ಯ ಹಾಳಾಗದಂತೆ ಎಚ್ಚರ ವಹಿಸುವ ಸವಾಲನ್ನು IPS ಅಧಿಕಾರಿಗಳು ಸ್ವೀಕರಿಸಬೇಕು. ಡ್ರಗ್ಸ್ ಹಾವಳಿ, ಅಪರಾಧಿಕ ಜಗತ್ತಿನ ಕಡೆಗೆ ಯುವ ಜನತೆ ಆಕರ್ಷಿತರಾಗದಂತೆ ಎಚ್ಚರ ವಹಿಸಿ. ತಂತ್ರಜ್ಞಾನ ಮತ್ತು ವಿಜ್ಞಾನದ ಪ್ರಗತಿ ಆಗುತ್ತಿದೆ. ಈ ಪ್ರಗತಿ ಅಪರಾಧಗಳಿಗೆ ಬಳಕೆ ಆಗದೆ ಯುವ ಜನರ ಭವಿಷ್ಯ ರೂಪಿಸಲು ಸಹಕಾರಿ ಆಗುವಂತೆ ಕರ್ತವ್ಯ ನಿರ್ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಸಲಹೆ ನೀಡಿದರು.
ನೀವು ಅಧಿಕಾರಿ ವರ್ಗ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ರಾಜ್ಯದಲ್ಲಿ ಅದ್ಭುತ ಬದಲಾವಣೆ, ಸುಧಾರಣೆಗಳನ್ನು ತರಲು ಸಾಧ್ಯವಿದೆ. ಇದಕ್ಕಾಗಿ ನಿಮ್ಮ ಕಾರ್ಯಕ್ಷಮತೆ ಬಳಕೆಯಾಗಲಿ. ಅಧಿಕಾರಿ ವರ್ಗಕ್ಕೆ ನಮ್ಮ ಸಲಹೆಯ ಅಗತ್ಯ ಇಲ್ಲ. ನೀವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಂಡರೆ ಸಾಕು. ಭ್ರಷ್ಟಾಚಾರ ವ್ಯವಸ್ಥೆ ಕಡಿಮೆ ಆಗುವ ಬದಲಿಗೆ ಹೆಚ್ಚಾಗುತ್ತಿರುವುದು ದುರಂತ. ಆದ್ದರಿಂದ ನಾವೆಲ್ಲರೂ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ಪ್ರಾಮಾಣಿಕವಾಗಿ ನಡೆದುಕೊಳ್ಳೋಣ ಎಂದು ಕರೆ ನೀಡಿದರು.
ನಮ್ಮ-ನಿಮ್ಮ ಉದ್ದೇಶ ಒಂದೇ. ಸಮಾಜದ ಪ್ರಗತಿ ಮತ್ತು ಆರೋಗ್ಯಕರ ಬದಲಾವಣೆ. ಇದಕ್ಕಾಗಿ ನಮ್ಮ ನಮ್ಮ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳೋಣ ಎಂದು ಕರೆ ನೀಡಿದರು. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಸುಳ್ಳನ್ನು ಪದೇ ಪದೇ ಹರಡಿಸುತ್ತಿದ್ದಾರೆ. ಇದು ಸುಳ್ಳು ಎನ್ನುವುದು ನಿಮಗೇ ಗೊತ್ತಿದೆ. ಹಿಂದಿನ ಸರ್ಕಾರ ಬಜೆಟ್ ಒಪ್ಪಿಗೆ ಪಡೆಯದೆ ಯದ್ವಾ ತದ್ವಾ ಟೆಂಡರ್ ಕರೆದು ಹಾನಿ ಮಾಡಿತ್ತು.
ಸುಮಾರು 39 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿ ಹೋಗಿದ್ದರು. ಜೊತೆಗೆ ಕೇಂದ್ರ ಸರ್ಕಾರದಿಂದ ನಮಗೆ ಅನ್ಯಾಯ ಮುಂದುವರೆದಿದೆ. ಇದೆಲ್ಲವನ್ನೂ ಸರಿದೂಗಿಸಿಕೊಂಡು ಅಭಿವೃದ್ಧಿಗೂ ಹಣ ಒದಗಿಸುತ್ತಿದ್ದೇವೆ. ಆದ್ದರಿಂದ ಇಲಾಖೆಗಳಲ್ಲಿರುವ ಹಣ ಹೆಚ್ಚು ಸೋರಿಕೆ ಆಗದಂತೆ ತಡೆಯುವ ಜವಾಬ್ದಾರಿ ಮತ್ತು ಕರ್ತವ್ಯ ನಿಮ್ಮ ಮೇಲಿದೆ ಎಂದರು. ಹಣ ಸಂಗ್ರಹಿಸುವ ಇಲಾಖೆಗಳು ಮತ್ತು ಹಣ ಖರ್ಚು ಮಾಡುವ ಇಲಾಖೆಗಳೆರಡೂ ಸಮತೂಕದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕರೆ ನೀಡಿದರು.
-
ಕೇರಳಂನಲ್ಲಿ ಕಾಂಗ್ರೆಸ್ - ಯುಡಿಎಫ್ ಮೈತ್ರಿಕೂಟಕ್ಕೆ ಮೂರನೇ ಎರಡರಷ್ಟು ಬಹುಮತ: ಡಿಸಿಎಂ ಡಿ.ಕೆ. ಶಿವಕುಮಾರ್ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು











Click it and Unblock the Notifications