ಗ್ಯಾರಂಟಿ ಯೋಜನೆಗಳು ಬಂದ್ ಆಗುತ್ತೆ ಎಂದ ಬಿಜೆಪಿ: ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದು ಹೀಗೆ

ದಾವಣಗೆರೆ, ಫೆಬ್ರವರಿ 09: ತಳಮಟ್ಟದ ಜನರಿಗೆ ಉಪಯೋಗವಾಗುವ ಗ್ಯಾರಂಟಿ ಯೋಜನೆಗಳನ್ನು ಕೆಲವರು ಟೀಕಿಸಿದರು. ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ, ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದ 150 ಕೋಟಿ ಮಹಿಳೆಯರು ಜೂನ್ 11 ರಿಂದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಜನಪರ ಯೋಜನೆಗಳ ಬಗ್ಗೆ ಇಚ್ಛಾಶಕ್ತಿ ತೋರದ ಪಕ್ಷಗಳು, ಮೊದಲಿಗೆ ಯೋಜನೆಗಳನ್ನು ಜಾರಿ ಮಾಡಿ ನಂತರ ಸ್ಥಗಿತಗೊಳಿಸುತ್ತಾರೆ ಎಂದು ಟೀಕಿಸುತ್ತಾರೆ.ಆದರೆ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು.

Guarantees Do Not Terminate For Any Reason Said CM Siddaramaiah

ಉಪ್ಪಾರರು ಆರ್ಥಿಕವಾಗಿ , ಸಮಾಜಿಕವಾಗಿ ಹಿಂದುಳಿದಿರುವ ಸಮಾಜ. ಉಪ್ಪು ತಯಾರಿಸಿ ಮಾರಾಟ ಮಾಡುವ ವೃತ್ತಿಯಾಗಿದ್ದು, ಕೈಗಾರೀಕರಣವಾದ ನಂತರ ಅವರ ವೃತ್ತಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಇವರ ಕಸುಬಿಗೆ ಧಕ್ಕೆಯುಂಟಾದ ಮೇಲೆ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿದೆ. ಶಿಕ್ಷಣ, ಆರ್ಥಿಕ ಶಕ್ತಿಯಿಂದ ವಂಚಿತರಾಗಿ ಉದ್ಯೋಗವಿಲ್ಲದೇ ಕೂಲಿ ಮಾಡುವ ಸ್ಥಿತಿ ಉಂಟಾಯಿತು. ಆದರೆ ಉಪ್ಪಾರ ಸಮಾಜ ಮಹಾತ್ಮಾ ಗಾಂಧಿಜಿಯವರು ಬ್ರಿಟಿಷರ ವಿರುದ್ಧ ಹೋರಾಡುವಾಗ ಉಪ್ಪಿನ ಸತ್ಯಾಗ್ರಹ ಮಾಡಿದರು ಅದರಲ್ಲಿ ಉಪ್ಪಾರರ ಕೊಡುಗೆಯೂ ಅಪಾರವಾಗಿತ್ತು ಎಂದರು.

ಜಾತಿ ವ್ಯವಸ್ಥೆಯ ಕಾರಣದಿಂದ ಅಕ್ಷರ ಸಂಸ್ಕೃತಿಯಿಂದ ಎಲ್ಲಾ ಶೂದ್ರರೂ ವಂಚಿತರಾಗಿದ್ದಾರೆ. ಆರ್ಥಿಕ, ಸಮಾಜಿಕ ಅಸಮಾನತೆ ಇದ್ದರೆ ಅದಕ್ಕೆ ನಮ್ಮ ದೇಶದ ಜಾತಿ ವ್ಯವಸ್ಥೆ ಕಾರಣ. ಸಂವಿಧಾನದಲ್ಲಿ ಸಮ ಸಮಾಜ ನಿರ್ಮಾಣವಾಗಬೇಕೆಂದು ಹೇಳಿದೆ. ಶೋಷಣೆಗೊಳಗಾದ ಜನರಿಗೆ ಆರ್ಥಿಕ, ಸಮಾಜಿಕ ಶಕ್ತಿ ತುಂಬಿದಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದರು.

Guarantees Do Not Terminate For Any Reason Said CM Siddaramaiah

ಬಸವಾದಿ ಶರಣರು ಕರ್ಮಸಿದ್ಧಾಂತವನ್ನು ವಿರೋಧಿಸಿದರು. ನನಗೆ ಕಾನೂನು ಶಿಕ್ಷಣ ಪಡೆದು, ವಕೀಲನಾಗಿ, ಈಗ ಮುಖ್ಯಮಂತ್ರಿಯಾಗುವ ಅವಕಾಶವನ್ನು ಅಂಬೇಡ್ಕರ್ ರವರ ಸಂವಿಧಾನ ನೀಡಿತು. ಶ್ರೀಮಠವು ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಇಂಬು ನೀಡುತ್ತಿರುವುದು ಶ್ಲಾಘನೀಯ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ನಾರಾಯಣಗುರುಗಳು ಬೋಧಿಸಿದರು. ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು ಎಂದು ಬಸವಣ್ಣನವರು ಪ್ರತಿಪಾದಿಸಿದರು ಎಂದರು.

ಸಮುದಾಯಗಳು ಸೂಕ್ತರೀತಿಯಲ್ಲಿ ಅಭಿವೃದ್ದಿಹೊಂದಬಾರದೆಂಬ ಉದ್ದೇಶದಿಂದ ದಾರಿ ತಪ್ಪುಸುವವರು ಬಹಳಷ್ಟಿದ್ದಾರೆ. ಚರಿತ್ರೆ ತಿಳಿದಿರುವವರು ಮಾತ್ರ ಭವಿಷ್ಯ ನಿರ್ಮಿಸಲು ಸಾಧ್ಯ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಶಕ್ತಿ ತುಂಬಿದಾಗ ಮಾತ್ರ ದೇಶಕ್ಕೆ ಬಂದ ಸ್ವಾತಂತ್ರ್ಯ ಸಾರ್ಥಕವಾಗುತ್ತದೆ. ಶ್ರೇಷ್ಠತೆ ಎಂಬುದು ಜಾತಿಯಿಂದ ಬರುವುದಲ್ಲ. ಅದು ನಮ್ಮ ಶಿಕ್ಷಣ,ಪರಿಶ್ರಮದಿಂದ ಬರುತ್ತದೆ ಎಂದರು.

ಚಲನರಹಿತವಾದ ಜಾತಿ ವ್ಯವಸ್ಥೆ ಬಲವಾಗಿ ಬೇರು ಬಿಟ್ಟಿರುವುದರಿಂದ ಬದಲಾವಣೆ ತರಲು ಇಂದಿಗೂ ಸಾಧ್ಯವಾಗಿಲ್ಲ. ದಾರ್ಶನಿಕರ ಪ್ರಯತ್ನದಿಂದಾಗಿ ಸ್ವಲ್ಪ ಸರಿಹೋಗುವ ಜಾತಿ ವ್ಯವಸ್ಥೆ ಮತ್ತೆ ಯಥಾಸ್ಥಿತಿಗೆ ಮರಳುತ್ತದೆ. ಬಸವಾದಿ ಶರಣರು' ಇವನಾರವ, ಎನ್ನದೇ ಇವ ನಮ್ಮವ ಎಂದು ಭಾವಿಸುವಂತೆ ಹೇಳಿದ್ದರು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+