ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ಜೆಡಿಎಸ್ ಶಾಸಕ!
ಬೆಂಗಳೂರು, ಅಕ್ಟೋಬರ್ 09; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ತುಮಕೂರು ತಲುಪಿದೆ. ಸಿದ್ದರಾಮಯ್ಯ, ಡಾ. ಜಿ. ಪರಮೇಶ್ವರ, ಡಿ. ಕೆ. ಶಿವಕುಮಾರ್ ಸೇರಿದಂತೆ ವಿವಿಧ ನಾಯಕರು ಉತ್ಸಾಹದಿಂದ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಶನಿವಾರ ಯಾತ್ರೆ ತುಮಕೂರು ತಲುಪಿದಾಗ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ರಾಹುಲ್ ಗಾಂಧಿ ಸ್ವಾಗತಿಸಿದರು. ಬಳಿಕ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಈಗಾಗಲೇ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ಶಾಸಕರು ದೂರ ಉಳಿದಿದ್ದಾರೆ.
"ರಾಹುಲ್ ಗಾಂಧಿ ಬಂದಾಗ ಅವರನ್ನು ಸ್ವಾಗತಿಸುತ್ತೇನೆ. ಆದರೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಕುರಿತು ಅಂತಿಮ ತೀರ್ಮಾನ ಕೈಗೊಂಡಿಲ್ಲ" ಎಂದು ಕೆಲವು ದಿನಗಳ ಹಿಂದೆ ಎಸ್. ಆರ್. ಶ್ರೀನಿವಾಸ್ ಹೇಳಿದ್ದರು. ಶನಿವಾರ ರಾಹುಲ್ ಸ್ವಾಗತಿಸಿ ಯಾತ್ರೆಗೆ ಸೇರಿಕೊಂಡಿದ್ದಾರೆ.
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಕಾರಣಕ್ಕೆ ಎಸ್. ಆರ್. ಶ್ರೀನಿವಾಸ್‌ರನ್ನು ಶಾಸಕರ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜೆಡಿಎಸ್ ಪಕ್ಷ ವಿಧಾನಸಭೆ ಸ್ಪೀಕರ್‌ಗೆ ದೂರು ನೀಡಿದೆ. ಈ ಕುರಿತು ವಿಧಾನಸಭೆ ಕಾರ್ಯದರ್ಶಿ ವಿವರಣೆ ಕೇಳಿ ಗುಬ್ಬಿ ಶಾಸಕರಿಗೆ ನೋಟಿಸ್ ಜಾರಿಗೊಳಿಸಿದೆ.

ರಾಹುಲ್‌ಗೆ ಪರಿಚಯ ಮಾಡಿಸಿದ ಪರಮೇಶ್ವರ
ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ರಾಹುಲ್ ಗಾಂಧಿಯನ್ನು ಸ್ವಾಗತಿಸಿದರು ಮತ್ತು ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆಗಿದ್ದ ಡಾ. ಜಿ. ಪರಮೇಶ್ವರ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಎಸ್. ಆರ್. ಶ್ರೀನಿವಾಸ್‌ರನ್ನು ರಾಹುಲ್ ಗಾಂಧಿಗೆ ಪರಿಚಯ ಮಾಡಿಕೊಟ್ಟರು.
ಎಸ್. ಆರ್. ಶ್ರೀನಿವಾಸ್ ತಮ್ಮ ಫೇಸ್‌ಬುಕ್ ಪುಟದಲ್ಲಿ 'ಶ್ರೀ ರಾಹುಲ್ ಗಾಂಧಿಯವರ ನೇತ್ರತ್ವದಲ್ಲಿ ನಡೆಯುತ್ತಿರುವ ಐತಿಹಾಸಿಕ "ಭಾರತ ಐಕ್ಯತಾ ಯಾತ್ರೆ" ನಮ್ಮ ಕಲ್ಫತರು ನಾಡು ತುಮಕೂರು ಜಿಲ್ಲೆಗೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಅವರನ್ನು ಭೇಟಿಯಾಗಿ ಯಾತ್ರೆಯೊಂದಿಗೆ ಹೆಜ್ಜೆ ಹಾಕಿದೆ' ಎಂದು ಚಿತ್ರಗಳನ್ನು ಶೇರ್ ಮಾಡಿದ್ದಾರೆ.

ಪಕ್ಷದ ಚಟುವಟಿಕೆಗಳಿಂದ ದೂರ
ಗುಬ್ಬಿಯ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹಲವು ತಿಂಗಳುಗಳಿಂದ ಅವರು ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಇಂತಹ ಸುದ್ದಿಗಳ ನಡುವೆ ಎಸ್. ಆರ್. ಶ್ರೀನಿವಾಸ್ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಗುಬ್ಬಿಯಲ್ಲಿ ಜೆಡಿಎಸ್ ಪಕ್ಷ ಕೆಲವು ತಿಂಗಳ ಹಿಂದೆ ಬೃಹತ್ ಸಮಾವೇಶ ಆಯೋಜನೆ ಮಾಡಿತ್ತು. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಕ್ಷೇತ್ರದ ಪಕ್ಷದ ಶಾಸಕರೇ ಸಮಾವೇಶಕ್ಕೆ ಗೈರಾಗಿದ್ದರು.

ರಾಜ್ಯಸಭೆಯಲ್ಲಿ ಅಡ್ಡ ಮತದಾನ
ಜೂನ್‌ನಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್. ಆರ್. ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದಾರೆ ಎಂಬ ಆರೋಪವಿದೆ. ಈ ಹಿನ್ನಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಶಾಸಕರು ಬದುಕಿರುವಾಗಲೇ ತಿಥಿ ಕಾರ್ಡ್ ಡಿಸೈನ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಎಸ್. ಆರ್. ಶ್ರೀನಿವಾಸ್‌ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜೆಡಿಎಸ್ ಸ್ಪೀಕರ್‌ಗೆ ದೂರು ನೀಡಿದೆ.

ಹಿಂದಿನ ಚುನಾವಣೆ ಫಲಿತಾಂಶ
2018ರ ಚುನಾವಣೆಯಲ್ಲಿ ಎಸ್. ಆರ್. ಶ್ರೀನಿವಾಸ್ 55,572 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಎಚ್. ಡಿ. ಕುಮಾರಸ್ವಾಮಿ ಸಿಎಂ ಆದಾಗ ಎಸ್. ಆರ್. ಶ್ರೀನಿವಾಸ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.
ಒಂದು ವೇಳೆ ಎಸ್. ಆರ್. ಶ್ರೀನಿವಾಸ್ ಪಕ್ಷ ತೊರೆದರೆ ಮುಂದಿನ ಚುನಾವಣೆಯಲ್ಲಿ ಗುಬ್ಬಿಯಲ್ಲಿ ಬಿ. ಎಸ್. ಪುರ ನಾಗರಾಜು ಜೆಡಿಎಸ್ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಆದರೆ ಪಕ್ಷದ ವರಿಷ್ಠ ನಾಯಕರು ಈ ಕುರಿತು ಯಾವುದೇ ಹೇಳಿಕೆ ನೀಡಿಲ್ಲ.

ಫೆಬ್ರವರಿ ತನಕ ಕಾಯಿರಿ
ಎಸ್. ಆರ್. ಶ್ರೀನಿವಾಸ್ ಕಾಂಗ್ರೆಸ್ ಸೇರಲಿದ್ದಾರೆ, ಮುಂದಿನ ಚುನಾವಣೆಗೆ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಈ ಕುರಿತು ಶಾಸಕರು ಪ್ರತಿಕ್ರಿಯೆ ನೀಡಿದ್ದಾರೆ. "ಫೆಬ್ರವರಿ ತನಕ ಕಾದು ನೋಡಿ" ಎಂದು ಹೇಳಿದ್ದಾರೆ.
ನಿಟ್ಟೂರು ಹೋಬಳಿಯ ನೇರಳೆಕೆರೆ ಗ್ರಾಮದಲ್ಲಿ ಮಾತನಾಡಿದ ಶಾಸಕರು, "ಡಿಸೆಂಬರ್ ನಂತರ ನನ್ನ ಕಾರ್ಯಕರ್ತರ ಸಭೆಯನ್ನು ಕರೆದು ನಾನು ಯಾವ ಪಕ್ಷಕ್ಕೆ ಹೋಗಬೇಕು ಎಂಬುದನ್ನು ಚರ್ಚಿಸಿ ತಿಳಿಸುತ್ತೇನೆ" ಎಂದು ತಿಳಿಸಿದ್ದಾರೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್












Click it and Unblock the Notifications