ಕಾಲೇಜು ಶಿಕ್ಷಣ ಇಲಾಖೆ, ಅತಿಥಿ ಉಪನ್ಯಾಸಕರ ಆಯ್ಕೆ; ಸುತ್ತೋಲೆ
ಬೆಂಗಳೂರು, ಸೆಪ್ಟೆಂಬರ್ 25; ಕಾಲೇಜು ಶಿಕ್ಷಣ ಇಲಾಖೆ 2023-24ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ. ಅಭ್ಯರ್ಥಿಗಳಿಗೆ ಕೆಲವು ಎಚ್ಚರಿಕೆಗಳನ್ನು ಸಹ ಸೊತ್ತೋಲೆಯಲ್ಲಿ ನೀಡಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ ಪತ್ರ ದಿನಾಂಕ 26/8/2023, ಕಛೇರಿಯ ಪ್ರಕಟಣೆ ದಿನಾಂಕ 24/8/2023, 13/9/2023, ಸರ್ಕಾರದ ಪತ್ರ ದಿನಾಂಕ 13/9/2023 ಉಲ್ಲೇಖ ಮಾಡಿದ್ದಾರೆ.
ಸುತ್ತೋಲೆಯಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ನಿಯಮಾನುಸಾರ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರ (ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ಸೇರಿದಂತೆ) ಸೇವೆಯನ್ನು ಬಳಸಿಕೊಳ್ಳುವ ಸಂಬಂಧ ಸರ್ಕಾರದ ನಿರ್ದೇಶನದ ಮೇರಗೆ ಆಯ್ಕೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದೆ.

ವೆಬ್‌ಸೈಟ್‌ನಲ್ಲಿ ಅಪ್‌ಲೋಡ್; ಅದರಂತೆ ಕಛೇರಿಯ ಪ್ರಕಟಣೆಗಳಂತೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಪಡೆಯಲಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನೀಡಿರುವ ಸೇವಾ ಅವಧಿ, ವಿದ್ಯಾರ್ಹತ ಇನ್ನಿತರ ವಿವರಗಳ ಆಧಾರದ ಮೇಲೆ ವಿಷಯವಾರು ರಾಜ್ಯವ್ಯಾಪಿ ಮೆರಿಟ್ ಪಟ್ಟಿಯನ್ನು (ಉಳಿಕ ಮೂಲ ವೃಂದ ಹಾಗೂ ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದ ಪ್ರತ್ಯೇಕವಾಗಿ) ದಿನಾಂಕ 19/9/2023ರಂದು ಇಲಾಖೆಯ ಅಂತರ್ಜಾಲ ತಾಣ https://dce.karnataka.gov.in ರಲ್ಲಿ ಪ್ರಕಟಿಸಲಾಗಿದೆ.
ಮೆರಿಟ್ ಪಟ್ಟಿಯನ್ವಯ ದಿನಾಂಕ 22/09/2023ರಿಂದ ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದ್ದು, ವಿಷಯವಾರು ಅಗತ್ಯವಿರುವ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಸಂಖ್ಯಾ ಮಾಹಿತಿ ಹಾಗೂ ವೇಳಾಪಟ್ಟಿಯನ್ನು ಇಲಾಖೆಯ ಅಂತರ್ಜಾಲ ತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ಸಂಖ್ಯಾ ಮಾಹಿತಿ ಹಾಗೂ ವೇಳಾಪಟ್ಟಿಯನ್ವಯ ಅಭ್ಯರ್ಥಿಗಳು ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಲು ಈ ಮೂಲಕ ಸೂಚಿಸಲಾಗಿದೆ.
2023-24ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಾಗುವ ಹೆಚ್ಚುವರಿ ಕಾರ್ಯಭಾರಕ್ಕನುಗುಣವಾಗಿ ವಿಷಯವಾರು ಅವಶ್ಯವಿರುವ ಅತಿಥಿ ಉಪನ್ಯಾಸಕರ ಸಂಖ್ಯೆಗೆ ಸಮನಾಗಿ ಮೆರಿಟ್ ಲಿಸ್ಟ್ ಅನ್ನು ಪ್ರಕಟಿಸಲಾಗಿದ್ದು, ಮೆರಿಟ್ ಪ್ರಕಾರ ಕೌನ್ಸಿಲಿಂಗ್ ಮಾಡಲಾಗುವುದು ಹಾಗೂ ಅವಶ್ಯವಿರುವ ಸಂಖ್ಯೆಯಷ್ಟು ಅಭ್ಯರ್ಥಿಗಳಿಗೆ ಮಾತ್ರ ಕೌನ್ಸಿಲಿಂಗ್ ನಡೆಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.
ಸರ್ಕಾರದ ಪತ್ರದಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013ರ ಕಂಡಿಕೆ 3 ಮತ್ತು 13 ರಂತೆ ಅನ್ವಯವಾಗುವ ಮೀಸಲಾತಿ ನಿಗದಿಪಡಿಸಿ, ಮೀಸಲಾತಿಗೊಳಪಡುವ ಹುದ್ದೆಗಳನ್ನು ಸ್ಥಳೀಯ ವ್ಯಕ್ತಿಗಳಿಂದಲೇ ಭರ್ತಿ ಮಾಡಿಕೊಳ್ಳುವಂತೆ ಸೂಚಿಸಲಾಗಿರುತ್ತದೆ.
ಅದರಂತೆ, ಕಲ್ಯಾಣ ಕರ್ನಾಟಕ (ಹೈದ್ರಾಬಾದ್-ಕರ್ನಾಟಕ) ಪ್ರದೇಶಕ್ಕೆ ಒಳಪಡುವ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ & ಯಾದಗಿರಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯವಾಗುವ ಹೆಚ್ಚುವರಿ ಕಾರ್ಯಭಾರಕ್ಕೆ ಅವಶ್ಯವಿರುವ ಅತಿಥಿ ಉಪನ್ಯಾಸಕರ ಶೇ.75 ರಷ್ಟು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಲಭ್ಯವಾಗುವ ಹೆಚ್ಚುವರಿ ಕಾರ್ಯಭಾರಕ್ಕೆ ಅವಶ್ಯವಿರುವ ಅತಿಥಿ ಉಪನ್ಯಾಸಕರ ಶೇ.8ರಷ್ಟು ಕಲ್ಯಾಣ ಕರ್ನಾಟಕ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಿರಿಸಿ, ಸದರಿ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದೆ.
ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ತಪ್ಪು ಮಾಹಿತಿ ನೀಡಿದಲ್ಲಿ, ಅಂತಹ ತಪ್ಪು ಮಾಹಿತಿ ಹಾಗೂ ನ್ಯೂನ್ಯತೆಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ಜವಾಬ್ದಾರರಾಗಿರುತ್ತಾರ. ಅಲ್ಲದೆ, ಅಭ್ಯರ್ಥಿಗಳು ಅತಿಥಿ ಉಪನ್ಯಾಸಕರ ಆಯ್ಕೆಗೆ ಅವಶ್ಯವಿರುವ ವಿದ್ಯಾರ್ಹತೆಯ ಅಂಕಪಟ್ಟಿ/ ಪ್ರಮಾಣ ಪತ್ರಗಳು, ಸೇವಾ ಪ್ರಮಾಣ ಪತ್ರಗಳು, ಅಂಗವಿಕಲತೆಯ ಪ್ರಮಾಣ ಪತ್ರ, ಕಲ್ಯಾಣ ಕರ್ನಾಟಕ ಮೀಸಲಾತಿ ಪ್ರಮಾಣ ಪತ್ರವೂ ಒಳಗೊಂಡಂತ ಇನ್ನಿತರ ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಇದ್ದಲ್ಲಿ ಅಥವಾ ಸಲ್ಲಿಸುವ ದಾಖಲೆಗಳು ನಕಲಿ ಎಂದು ಕಂಡುಬಂದಲ್ಲಿ ಅಂತಹ ಅಭ್ಯರ್ಥಿಗಳ ವಿರುದ್ಧ, ಕಾನೂನು ಕ್ರಮ ಜರುಗಿಸಿ, ಅವರನ್ನು ಅತಿಥಿ ಉಪನ್ಯಾಸಕರ ಆಯ್ಕೆಯಿಂದ ಶಾಶ್ವತವಾಗಿ ಅನರ್ಹಗೊಳಿಸಲಾಗುವುದು ಎಂಬುದಾಗಿ ಮತ್ತೊಮ್ಮೆ ತಿಳಿಸಲಾಗಿದೆ ಎಂದು ಹೇಳಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications