ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ; ಸರ್ಕಾರದ ಘೋಷಣೆ
ಬೆಂಗಳೂರು, ಡಿಸೆಂಬರ್ 29; ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಕರ್ನಾಟಕ ಸರ್ಕಾರ ಸಿಹಿಸುದ್ದಿ ನೀಡಿದೆ. ವೇತನ ಹೆಚ್ಚಳ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.
ಶುಕ್ರವಾರ ವಿಕಾಸಸೌಧದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಸಚಿವರು, "ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂ. ಹೆಚ್ಚಳ ಮಾಡಲಾಗುತ್ತದೆ" ಎಂದರು.

"ಅತಿಥಿ ಉಪನ್ಯಾಸಕರ ಜೊತೆ ನಡೆಸಿದ ಸಭೆಯಲ್ಲಿ ಹಲವು ಬೇಡಿಕೆಗಳನ್ನು ಇಟ್ಟರು. ತಿಂಗಳಿಗೆ ಒಂದು ವೇತನ ಸಹಿತ ರಜೆ ನೀಡಲಾಗುತ್ತದೆ. ಅವರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ" ಎಂದು ಸಚಿವರು ಹೇಳಿದರು.
ಸಚಿವರು ಹೇಳಿದ್ದೇನು?
* ನಾವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಸೇವೆ ಖಾಯಂಗೊಳಿಸುವುದು ಅವರ ಬೇಡಿಕೆಯಾಗಿದೆ. ಅವರ ವರ್ಕ್ ಲೋಡ್ ಬಗ್ಗೆಯೂ ಮಾತುಕತೆಯನ್ನು ನಡೆಸಲಾಗಿದೆ.
* ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುತ್ತೇವೆ. ಹೊಸ ನೇಮಕಾತಿ ಸಂದರ್ಭದಲ್ಲಿ ಕೃಪಾಂಕ ನೀಡಲು ನಿರ್ಧರಿಸಲಾಗಿದೆ.
* ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂ. ಹೆಚ್ಚಳ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಮುಷ್ಕರವನ್ನು ಅತಿಥಿ ಉಪನ್ಯಾಸಕರು ವಾಪಸ್ ಪಡೆಯಬೇಕು ಎಂದು ಮನವಿ ಮಾಡುತ್ತೇನೆ.
ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 23ರಿಂದ ತರಗತಿಗಳನ್ನು ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸುತ್ತಿದ್ದರು. ಇದರಿಂದಾಗಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೇ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರು. ಸೇವಾ ಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಟ್ಟಿದ್ದರು.
ಮುಷ್ಕರ ಆರಂಭಗೊಂಡು ತಿಂಗಳುಗಳು ಕಳೆದರೂ ಸಹ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಹೆಚ್ಚಿದ್ದು, ಪ್ರತಿಭಟನೆಯ ಕಾರಣ ತರಗತಿಗಳು ನಡೆಯುತ್ತಿರಲಿಲ್ಲ.
ವಾರ್ಷಿಕ ಪರೀಕ್ಷೆಗಳು ಹತ್ತಿರವಾಗುತ್ತಿರುವಾಗ ಉಪನ್ಯಾಸಕರ ಮುಷ್ಕರದಿಂದ ಪಾಠಗಳು ಪೂರ್ಣಗೊಳ್ಳದೇ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಿದ್ದರು. ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 10 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಆದರೆ ಅವರ ಬೇಡಿಕೆಗಳನ್ನು ಬಹಳ ಕಾಲದಿಂದ ಸರ್ಕಾರ ಆಲಿಸಿಲ್ಲ ಎಂಬುದು ಆರೋಪವಾಗಿದೆ.
ಉದ್ಯೋಗ ಖಾಯಂ ಆಗುತ್ತದೆ ಎಂಬ ನಿರೀಕ್ಷೆಯಲ್ಲಿಯೇ 15-20 ವರ್ಷಗಳ ಕಾಲ ಸೇವೆ ಸಲ್ಲಿಸಿದ ಉಪನ್ಯಾಸಕರು ಸೇವಾ ಭದ್ರತೆ ನೀಡಿ ಎಂದು ಸರ್ಕಾರವನ್ನು ಹಲವು ಬಾರಿ ಒತ್ತಾಯಿಸಿದ್ದರು. ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡುತ್ತೇವೆ ಎಂದು ಕಾಂಗ್ರೆಸ್ ಭರವಸೆಯನ್ನು ನೀಡಿತ್ತು.
ಸರ್ಕಾರ ಈಗ ಉಪನ್ಯಾಸಕರ ನೇಮಕಾತಿ ಮಾಡುವಾಗ ಅತಿಥಿ ಉಪನ್ಯಾಸಕರು ಅರ್ಜಿ ಸಲ್ಲಿಕೆ ಮಾಡುವಂತಿಲ್ಲ. ಹಲವರ ವಯೋಮಿತಿ ಮೀರಿದೆ. ಪಿಎಚ್‌ಡಿ ಪೂರ್ಣಗೊಳಿಸಿದ ಹಲವು ಉಪನ್ಯಾಸಕರು ಸಹ ಈಗ ಸೇವಾ ಭದ್ರತೆ ಇಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications