14 ಸಾವಿರ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರದ ಶಾಕ್

Subscribe to Oneindia Kannada

ಬೆಂಗಳೂರು, ಫೆಬ್ರವರಿ, 13: ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಶಾಕ್ ನೀಡಿದೆ. ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಾವಿರಾರು ಅತಿಥಿ ಉಪನ್ಯಾಸಕರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬಾರದು ಎಂದು ರಾಜ್ಯ ಸರ್ಕಾರ ಶುಕ್ರವಾರ ಆದೇಶ ಮಾಡಿದೆ.

ಹೋರಾಟವನ್ನು ತೀವ್ರಗೊಳಿಸಿದ್ದ ಅತಿಥಿ ಉಪನ್ಯಾಸಕರು ಫೆ.17ರಂದು ರಾಜ್ಯಾದ್ಯಂತ ಶಾಲಾ-ಕಾಲೇಜು ಮತ್ತು ವಿಶ್ವ ವಿದ್ಯಾಲಯಗಳ ಬಂದ್‌ಗೆ ಕರೆ ನೀಡಿದ್ದರು. ಕಳೆದ ಒಂದು ತಿಂಗಳಿನಿಂದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕಾರ ಮಾಡಿ ರಾಜ್ಯಾದ್ಯಂತನ ಪ್ರತಿಭಟನೆ ನಡೆಸುತ್ತಿದ್ದರು.[ಶೂ ಪಾಲಿಶ್ ಮಾಡಿದ್ದ ಅತಿಥಿ ಉಪನ್ಯಾಸಕರು]

protest

ಪ್ರತಿಭಟನೆ ಪರಿಣಾಮ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧನಾ ಪ್ರಕ್ರಿಯೆ ಸ್ಥಗಿತವಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಸೆಮಿಸ್ಟರ್ ಪರೀಕ್ಷೆಗಳು ಎದುರಾಗಿರುವ ಹೊತ್ತಿನಲ್ಲಿ ಸರ್ಕಾರ ಇಂಥ ಕಠಿಣ ನಿಲುವು ತಾಳಿದೆ.[ಅರೇಕಾ ಟೀ ಮಾರುಕಟ್ಟೆಗೆ, ನೀವು ಸ್ವಾದ ನೀಡಿದ್ರಾ!]

ಪರಿಹಾರ ಏನು?
ಸರ್ಕಾರ ಹೇಳುವಂತೆ 14000 ಕ್ಕೂ ಅಧಿಕ ಹೊಸ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಈ ಬಗ್ಗೆ ಸಕಲ ಕ್ರಮ ತೆಗೆದುಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಚಕ್ರವರ್ತಿ ಮೋಹನ್‌ಗೆ ಉನ್ನತ ಶಿಕ್ಷಣ ಇಲಾಖೆ ಉಪ ಕಾರ್ಯದರ್ಶಿ ಆರ್. ಸೋಮಶೇಖರ್ ನಿರ್ದೇಶನ ನೀಡಿದ್ದಾರೆ.

ಒಟ್ಟಿನಲ್ಲಿ ಇದೀಗ ಸರ್ಕಾರದ ನಿಲುವು ಅತಿಥಿ ಉಪನ್ಯಾಸಕರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಆದೇಶದ ನಂತರ ಅತಿಥಿ ಉಪನ್ಯಾಸಕರು ಯಾವ ಹೆಜ್ಜೆ ಇಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Karnataka State Government issued a notification about guest lecturers protest.
Please Wait while comments are loading...