ಪ್ರೌಢಶಾಲೆಗೆ 9,499 ಅತಿಥಿ ಶಿಕ್ಷಕರ ನೇಮಕ: ಷರತ್ತು, ವೇತನ ವಿವರ
ಬೆಂಗಳೂರು, ಮೇ 28: ಕರ್ನಾಟಕ ಸರ್ಕಾರ 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೂಳ್ಳುವ ಕುರಿತು ಈಗಾಗಲೇ ಆದೇಶವನ್ನು ಹೊರಡಿಸಿದೆ. ಸದರಿ ಅತಿಥಿ ಶಿಕ್ಷಕರನ್ನು ದಿನಾಂಕ 01.06.2025 ರಿಂದ ನೇಮಕಾತಿ ಮಾಡಿಕೊಳ್ಳಲು ತಿಳಿಸಲಾಗಿದೆ.
2025-26ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಪ್ತಿಯಿಂದ ನೇರ ನೇಮಕಾತಿ/ ಬಡ್ತಿ/ ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಒಪ್ಪಿಗೆ ನೀಡಲಾಗಿದೆ.

ಅದರಂತೆ ಮೊದಲ ಹಂತದಲ್ಲಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9,499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ಒಟ್ಟು 9,499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಪರತ್ತುಗಳಿಗೊಳಪಟ್ಟು ಅನುಮತಿ ನೀಡಿದೆ.
ಪರತ್ತುಗಳು
* ಸರ್ಕಾರಿ ಪ್ರೌಢ ಶಾಲೆಗಳಿಗೆ ಶಾಲಾವಾರು/ ತಾಲ್ಲೂಕುವಾರು ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ತಾಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿರುತ್ತದೆ.
* ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ನೇಮಕ ಮಾಡುವುದು.
* ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳು/ ಬೆಂಗಳೂರು ಪಬ್ಲಿಕ್ ಶಾಲೆಗಳು ಹಾಗೂ ಆದರ್ಶ ವಿದ್ಯಾಲಯಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ ಹುದ್ದೆಗಳ ಶೇಕಡ 100 ರಷ್ಟು ಅತಿಥಿ ಶಿಕ್ಷಕರನ್ನು ಮೊದಲ ಆದ್ಯತೆ ನೀಡಿ ನೇಮಕ ಮಾಡಿಕೊಳ್ಳಲು ಕ್ರಮವಹಿಸುವುದು.
* ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕಠಿಣ ವಿಷಯಗಳಾದ ಗಣಿತ, ವಿಜ್ಞಾನ, ಆಂಗ್ಲ ವಿಷಯದ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಆದ್ಯತೆ ನೀಡಲು ತಿಳಿಸಿದೆ. ನಂತರ ಇತರ ವಿಷಯಗಳಿಗೆ ಆದ್ಯತೆ ನೀಡುವುದು.
* ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡ ಹುದ್ದೆಗೆ ವರ್ಗಾವಣೆ/ ನೇಮಕಾತಿ ಮುಖಾಂತರ ಖಾಯಂ ಶಿಕ್ಷಕರು ಸ್ಥಳನಿಯುಕ್ತಿಗೊಂಡಲ್ಲಿ, ಸದರಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡಗೊಳಿಸಿ, ಅದೇ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅತಿಥಿ ಶಿಕ್ಷಕರನ್ನ ಹಂಚಿಕೆ ಮಾಡುವುದು.
* ಅತಿಥಿ ಶಿಕ್ಷಕರನ್ನು ಅತಿ ಹೆಚ್ಚು ಮಕ್ಕಳಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಶಿಕ್ಷಕರ ಹುದ್ದೆಗಳು ಖಾಲಿ ಇರುವ ಪ್ರೌಢ ಶಾಲೆಗಳಿಗೆ ಆದ್ಯತೆ ಮೇರೆಗೆ ಒದಗಿಸುವುದು.
* ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸುವುದು ಹಾಗೂ ಅತಿಥಿ ಶಿಕ್ಷಕರ ನೇಮಕಾತಿಗೆ ಸ್ವೀಕೃತವಾದ ಅರ್ಜಿಗಳಲ್ಲಿ ಹೆಚ್ಚು ಮರಿಟ್ ಹೊಂದಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡತಕ್ಕದ್ದು.
* ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಸರ್ಕಾರಿ ಆದೇಶದಲ್ಲಿ ನಿಗದಿಪಡಿಸಿರುವಂತೆ ಮಾಸಿಕ 12,500 ರೂ. ಆಗಿರುತ್ತದೆ. ಈ ಗೌರವ ಧನ ಪಾವತಿಯನ್ನು ಅತಿಥಿ ಶಿಕ್ಷಕರು ಕರ್ತವ್ಯಕ್ಕೆ ಹಾಜರಾದ ದಿನಾಂಕದಿಂದ ಪಾವತಿಸುವುದು.
* ಒಟ್ಟು 9,499 ಖಾಲಿ ಹುದ್ದೆಗಳ ಅನುಸಾರ ತಾಲ್ಲೂಕುವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಲಾಗಿದ್ದು, ಸದರಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ತಾಲ್ಲೂಕು ಪಂಚಾಯಿತಿವಾರು ಮರುಹಂಚಿಕೆ ಮಾಡಿ ಅನುದಾನದ ವಿವರಗಳನ್ನು ಕಛೇರಿಗೆ ಸಲ್ಲಿಸಿದ ನಂತರ ತಾಲೂಕಿನಿಂದ ತಾಲೂಕಿಗೆ ಮರುಹಂಚಿಕೆ ಮಾಡುವಂತಿಲ್ಲ.
* ನಿಯೋಜನೆ ಮೇಲೆ ತೆರವಾದ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಮಂಜೂರು ಮಾಡುವಂತಿಲ್ಲ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications