Government Employees: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿಗೆ ಮಾರ್ಗಸೂಚಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಏಪ್ರಿಲ್ 22: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ಬಗ್ಗೆ ಹಾಗೂ ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ ಮತ್ತು ಆಯ್ಕೆ ಕುರಿತು ಸೂಚನೆಗಳನ್ನ ಪ್ರಕಟಿಸಲಾಗಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯು ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 16 ಎಸ್ ಎಂಆರ್ 2020 ರ ದಿನಾಂಕ:17.08.2021, 05.09.2022, 09.03.2023 ಹಾಗೂ ದಿನಾಂಕ: 02.04.2025 ಗಳಲ್ಲಿ ನೀಡಲಾಗಿದೆ. KASS ಯೋಜನೆಯು ರಾಜ್ಯ ಸರ್ಕಾರದ ನೌಕರರಿಗೆ ಐಚ್ಛಿಕವಾಗಿದ್ದು, ಯೋಜನೆಯಡಿ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯ ಪಡೆಯಲು ಹೊರಗುಳಿಯಲು (Opt in / Opt out) ಆಯ್ಕೆ / ಇಚ್ಛೆ ವ್ಯಕ್ತಪಡಿಸುವ ಕುರಿತಂತೆ ಈ ಕೆಳಕಂಡ ಸೂಚನೆಗಳನ್ನು ಹೊರಡಿಸಲಾಗಿದೆ ಹಾಗೂ ಅನುಬಂಧಗಳನ್ನು ಲಗತ್ತಿಸಲಾಗಿದೆ.
1. ಯೋಜನೆಯಡಿ ಸರ್ಕಾರಿ ನೌಕರರು ಒಳಪಡುವ ಕಾರ್ಯವಿಧಾನದ ಬಗ್ಗೆ: ಈ ಯೋಜನೆಯು ಎಲ್ಲಾ ಅರ್ಹ ಸರ್ಕಾರಿ ನೌಕರರಿಗೆ ಅನ್ವಯವಾಗಲಿದ್ದು ಯೋಜನೆಯ ಸೌಲಭ್ಯ ಪಡೆಯುವುದು ಐಚ್ಛಿಕವಾಗಿದ್ದು (Optional), ಕಡ್ಡಾಯ(Mandatory) ಆಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರಿ ನೌಕರರು ಯೋಜನೆಯ ಸದುಪಯೋಗ ಪಡೆಯಲು ಇಚ್ಚಿಸಿದಲ್ಲಿ ಮಾತ್ರ ತನ್ನ ಆಯ್ಕೆಯನ್ನು ಸೂಚಿಸಬಹುದಾಗಿದೆ. ಇಚ್ಛೆ ಇಲ್ಲದ ಪಕ್ಷದಲ್ಲಿಯೂ ಸಹ ನಿಗದಿತ ನಮೂನೆಯಲ್ಲಿ ತಿಳಿಸಬಹುದಾಗಿದೆ.
2. ನೋಂದಾವಣೆಗೆ ಸಂಬಂಧಿಸಿದಂತೆ ಉಲ್ಲೇಖಿತ ದಿನಾಂಕ:09.03.2023 ಆದೇಶದ ಅನುಬಂಧಗಳಲ್ಲಿ ನೋಂದಾವಣೆ ಅರ್ಜಿ ನಮೂನೆಗಳನ್ನು, ವಿವಿಧ ಘೋಷಣಾ ಪತ್ರಗಳನ್ನು ಹಾಗೂ ನೋಂದಾವಣೆ ಕಾರ್ಯವಿಧಾನಗಳನ್ನು ನಿರ್ಧಿಷ್ಟಪಡಿಸಲಾಗಿದೆ. ಇವುಗಳನ್ನು ಎಲ್ಲಾ ಸರ್ಕಾರಿ ನೌಕರರು ಹಾಗೂ ಡಿಡಿಓಗಳು (DDOs) ತಪ್ಪದೇ ಅನುಸರಿಸತಕ್ಕದ್ದು. HRMS ತಂತ್ರಜ್ಞಾನದಲ್ಲಿ ಡಿಡಿಓಗಳು ಅರ್ಜಿಗಳನ್ನು ಅಪ್ ಲೋಡ್ ಮಾಡಲು ಕ್ರಮವಹಿಸುವುದು. 3. ಯೋಜನೆಯಲ್ಲಿ ಸರ್ಕಾರಿ ನೌಕರರನ್ನು ನೋಂದಾಯಿಸುವ ಬಗ್ಗೆ HRMS ನಿರ್ದೇಶನಾಲಯವು ಸಹ ದಿನಾಂಕ: 30.05.2023 ಹಾಗೂ 05.06.2023 ರಂದು ವಿವರವಾದ ಮಾರ್ಗಸೂಚಿಗಳನ್ನು ಹಾಗೂ KASS-ಡಿಡಿಓ ಬಳಕೆದಾರರ ಕೈಪಿಡಿ, WEB APPLICATION ಮುಂತಾದ ವಿವರಗಳನ್ನು ನೀಡಿರುತ್ತದೆ. ಈ ಸೂಚನೆಗಳನ್ನು ಎಲ್ಲಾ ಇಲಾಖೆಗಳ ಡಿಡಿಓಗಳು ತಪ್ಪದೇ ಅನುಸರಿಸುವುದು ಹಾಗೂ ನೌಕರರ ನೋಂದಾವಣೆಯನ್ನು ಚುರುಕುಗೊಳಿಸುವುದು.
4. ಸರ್ಕಾರಿ ನೌಕರ ಯೋಜನೆಗೆ ಒಳಪಡಲು ಆಯ್ಕೆಯನ್ನು ವ್ಯಕ್ತಪಡಿಸಲು ಉದ್ದೇಶಿಸಿದಲ್ಲಿ ದಿನಾಂಕ: 20.05.2025 ರ ಒಳಗಾಗಿ ಈ ಸಂಬಂಧ ಅನುಬಂಧ-2 ರ ನಮೂನೆ-1 ರಲ್ಲಿ ಘೋಷಣೆಯನ್ನು ತನ್ನ ಮೇಲಾಧಿಕಾರಿ ಮೂಲಕ ಡಿಡಿಓ ಗಳಿಗೆ ಸಲ್ಲಿಸತಕ್ಕದ್ದು. ಇಂತಹ ಘೋಷಣೆಯನ್ನು ಸಲ್ಲಿಸುವ ನೌಕರರಿಂದ ಯೋಜನೆಯ ವಂತಿಕೆಯನ್ನು ಮೇ 2025ರ ಮಾಹೆಯಿಂದ ಸ್ವಯಂಚಾಲಿತವಾಗಿ HRMS ನಲ್ಲಿ ಕಟಾಯಿಸಲಾಗುವುದು.
5. ನೌಕರರು ಈ ಯೋಜನೆಗೆ ಒಳಪಡದೇ ಇರಲು ಇಚ್ಚಿಸಿದಲ್ಲಿ ದಿನಾಂಕ: 20.05.2025 ರ ಒಳಗಾಗಿ ಈ ಸಂಬಂಧ ಅನುಬಂಧ-2 ರ ನಮೂನೆ-2 ರಲ್ಲಿ ಘೋಷಣೆಯನ್ನು ತನ್ನ ಮೇಲಾಧಿಕಾರಿ ಮೂಲಕ ಡಿಡಿಓ ಗಳಿಗೆ ಸಲ್ಲಿಸತಕ್ಕದ್ದು, ತಪ್ಪಿದಲ್ಲಿ ಇಂತಹ ನೌಕರರು ಯೋಜನೆಗೆ ಒಳಪಡಲು ಇಚ್ಚಿಸಿದ್ದಾರೆಂದು ಪರಿಗಣಿಸಿ ಅವರ ಮೇ 2025ರ ವೇತನದಿಂದ HRMS ಮುಖಾಂತರ ವಂತಿಕೆ ಕಟಾವಣೆ ಮಾಡಲಾಗುತ್ತದೆ.
6. ಯೋಜನೆಗೆ ನೌಕರರ ವಂತಿಕೆ: ಯೋಜನೆಗೆ ಒಳಪಡುವ ಸರ್ಕಾರಿ ನೌಕರ ಈ ಕೆಳಂಡಂತೆ ಮಾಸಿಕ ವಂತಿಕೆಯನ್ನು ನೀಡಬೇಕಾಗುತ್ತದೆ.
ಗ್ರೂಪ್ ಎ - ರೂ.1000
ಗ್ರೂಪ್ ಬಿ - ರೂ. 500
ಗ್ರೂಪ್ ಸಿ - ರೂ. 350
ಗ್ರೂಪ್ ಡಿ - ರೂ.250
ಮಾಸಿಕ ವಂತಿಕೆಯನ್ನು HRMS ಮೂಲಕ ನೌಕರರ ಮೇ 2025 ರಿಂದ ಮಾಸಿಕ ವೇತನದಲ್ಲಿ ಕಡಿತಗೊಳಿಸಲು ಸಂಬಂಧ ಪಟ್ಟ ಡಿಡಿಓಗಳು ಕ್ರಮವಹಿಸತಕ್ಕದ್ದು, ಯಾವ ಲೆಕ್ಕ ಶೀರ್ಷಿಕೆಯಡಿ ಈ ಮೊತ್ತವನ್ನು ಜಮಾ ಮಾಡಬೇಕು ಹಾಗು ಇತರ ವಿಧಿ-ವಿಧಾನಗಳ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿ ಮಾರ್ಗಸೂಚನೆಗಳನ್ನು (SOP) ಆರ್ಥಿಕ ಇಲಾಖೆಯಿಂದ ಹೊರಡಿಸಲಾಗುತ್ತದೆ.
7. ಮೇಲಿನ ಸೂಚನೆಗಳನ್ನು ಎಲ್ಲಾ ಸರ್ಕಾರಿ ನೌಕರರ ಹಾಗೂ ಗಮನಕ್ಕೆ ತರುವಂತೆ ಎಲ್ಲಾ ಇಲಾಖಾ ಮುಖ್ಯಸ್ಮರಿಗೆ ಡಿಡಿಓಗಳ ತಿಳಿಸಲಾಗಿದೆ ಎಂದಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications