5 ಸಾವಿರ ಪರಿಹಾರ ಪಡೆಯಲು ಆಟೋ, ಟ್ಯಾಕ್ಸಿ ಚಾಲಕರಿಗೆ ಅರ್ಹತೆಗಳು
ಬೆಂಗಳೂರು, ಮೇ 10 : ಕರ್ನಾಟಕ ಸರ್ಕಾರ ಆಟೋ, ಟ್ಯಾಕ್ಸಿ ಚಾಲಕರಿಗೆ ನೆರವವಾಗಲು 5 ಸಾವಿರ ರೂ. ಪರಿಹಾರ ಧನ ಘೋಷಣೆ ಮಾಡಿದೆ. ಘೋಷಣೆ ಮಾಡಿರುವ ಪರಿಹಾರವನ್ನು ಪಡೆಯಲು ಹಲವು ನಿಯಮಗಳನ್ನು ರಚನೆ ಮಾಡಲಾಗಿದೆ.
ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಆಟೋ ಮತ್ತು ಟ್ಯಾಕ್ಸಿ ಸೇವೆ ಸಂಪೂರ್ಣ ಬಂದ್ ಆಗಿದೆ. ಈ ಸಂದರ್ಭದಲ್ಲಿ ಅವರಿಗೆ ಆದ ನಷ್ಟವನ್ನು ಗಮನಿಸಿ ಸರ್ಕಾರ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು.
ಸರ್ಕಾರದಿಂದ ಘೋಷಣೆ ಮಾಡಿರುವ 5000 ರೂ.ಗಳನ್ನು ಪಡೆಯಲು ಆಟೋ/ಟ್ಯಾಕ್ಸಿ ಚಾಲಕರಿಗೆ ಹಲವು ನಿಯಮಗಳನ್ನು ಸರ್ಕಾರ ರೂಪಿಸಿದೆ. ಪರಿಹಾರಕ್ಕಾಗಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಇವುಗಳನ್ನು ಸರಿಯಾಗಿ ಓದಿಕೊಳ್ಳಬೇಕು ಎಂದು ಸರ್ಕಾರ ಹೇಳಿದೆ.
ಆಟೋ ಮತ್ತು ಟ್ಯಾಕ್ಸಿ ಚಾಲಕರು ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಪರಿಹಾರದ ಹಣ ನೇರವಾಗಿ ಜಮಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಪರಿಹಾರ ಪಡೆಯಲು ಅರ್ಹತೆಗಳು
* ಆಟೋ/ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅರ್ಹರು.
* ಫಲಾನುಭವಿಗಳು ಆಟೋ/ಟ್ಯಾಕ್ಸಿ ಚಾಲಕರಾಗಿದ್ದು, ದಿನಾಂಕ 1/3/2020ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸೇವಾ ಸಿಂಧು ವೆಬ್ ಸೈಟ್‌ನಲ್ಲಿ ನಮೂದಿಸಬೇಕು.

ಆಧಾರ್ ಕಾರ್ಡ್ ವಿವರ ಕಡ್ಡಾಯ
* ಆಟೋ/ಟ್ಯಾಕ್ಸಿ ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ನಮೂದಿಸಬೇಕು.
* ಚಾಲಕರ ಬ್ಯಾಂಕ್ ಖಾತೆ ವಿವರ, ಐಎಫ್‌ಎಸ್‌ಸಿ ಕೋಡ್, ಎಂಇಸಿಆರ್ ಕೋಡ್ ಅನ್ನು ಸಹ ತಪ್ಪದೇ ನಮೂದಿಸಬೇಕು.

ವಾಹನದ ಸಂಖ್ಯೆ ನಮೂದಿಸಬೇಕು
* ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಸೇವಾ ಸಿಂಧು ಪೋರ್ಟ್‌ಲ್‌ನಲ್ಲಿ ಕಡ್ಡಾಯವಾಗಿ ದಾಖಲು ಮಾಡಬೇಕು.
* ಚಾಲಕರು ತಮ್ಮ ದೈನಂದಿನ ಉದ್ಯೋಗ ನಡೆಸಲಾಗದೇ ಆದಾಯಗಳಿಸಲಾಗದೇ ಆದಾಯ ಕಳೆದುಕೊಂಡ ಬಗ್ಗೆ ಪೋರ್ಟಲ್‌ನಲ್ಲಿ ಸ್ವಯಂ ಘೋಷಣಾ ಪತ್ರವನ್ನು ನಮೂದಿಸಬೇಕು.

ಯಾರಿಗೆ ಮಾತ್ರ ಇದು ಸೀಮಿತ
* ಆಟೋ ರಿಕ್ಷಾ/ ಟ್ಯಾಕ್ಸಿ ಚಾಲಕರು ಹಾಗೂ ಸ್ವಂತ ವಾಹನ ಚಲಾಯಿಸುವ ಮ್ಯಾಕ್ಸಿ ಕ್ಯಾಬ್ ಚಾಲಕರುಗಳು ಮಾತ್ರ ಈ ಯೋಜನೆಯಡಿ ಪರಿಹಾರ ಪಡೆಯಬಹುದು.
* ಈ ಎಲ್ಲಾ ಅರ್ಹತೆಗಳು ಇದ್ದು ಸೇವಾ ಸಿಂಧು ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಿದರೆ ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಗೆ ಲಿಂಕ್ ಆದ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ಜಮಾವಣೆಯಾಗುತ್ತದೆ.












Click it and Unblock the Notifications