ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಊರಿಗೆ ತಲುಪಿದ ಕಾರ್ಮಿಕರು; ಪ್ರಯಾಣಿಸುವವರಿಗೆ ಸೂಚನೆಗಳು

|
Google Oneindia Kannada News

ಧಾರವಾಡ, ಮೇ 04: ಬೆಂಗಳೂರಿನಿಂದ ಹೊರಟಿದ್ದ ವಿಶೇಷ ಬಸ್‌ಗಳ ಮೂಲಕ ಕಾರ್ಮಿಕರು ಧಾರವಾಡಕ್ಕೆ ಆಗಮಿಸಿದರು. ಬೆಂಗಳೂರಿನಿಂದ ಆಗಮಿಸಿದ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಬಸ್‌ಗಳು ರಾತ್ರಿ ಧಾರವಾಡಕ್ಕೆ ತಲುಪಿದವು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ.

ಲಾಕ್‌ಡೌನ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಲಾಕ್‌ಡೌನ್: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಶಾಸಕರಾದ ಅರವಿಂದ ಬೆಲ್ಲದ್ ಹುಬ್ಬಳ್ಳಿ ಬಸ್ ನಿಲ್ದಾಣಣಕ್ಕೆ ಆಗಮಿಸಿ ಪ್ರಯಾಣಿಕರ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಜಿಲ್ಲಾಡಳಿತ, ಪೊಲೀಸ್, ಆರೋಗ್ಯ, ಸಾರಿಗೆ ಅಧಿಕಾರಿಗಳು ಜಂಟಿಯಾಗಿ ಮಾಡುತ್ತಿರುವ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಸಂಚಾರ ನಡೆಸುವ ಕಾರ್ಮಿಕರಿಗೆ ಸೂಚನೆಗಳು ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಸಂಚಾರ ನಡೆಸುವ ಕಾರ್ಮಿಕರಿಗೆ ಸೂಚನೆಗಳು

ಬೆಂಗಳೂರಿನಿಂದ ಕಾರ್ಮಿಕರು, ವಿದ್ಯಾರ್ಥಿಗಳು, ಯತ್ರಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಲು ಅವಕಾಶ ನೀಡಲಾಗಿದೆ. ಕೆಎಸ್ಆರ್‌ಟಿಸಿ ಬಸ್ ಮೂಲಕ ಮೂರು ದಿನ ಉಚಿತವಾಗಿ ಸಂಚಾರ ನಡೆಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ವೇತನ ಕಡಿತ, ಕೆಲಸದಿಂದ ಕಿತ್ತು ಹಾಕಿದರೆ ಕಾರ್ಮಿಕರು ದೂರು ಕೊಡಿ ವೇತನ ಕಡಿತ, ಕೆಲಸದಿಂದ ಕಿತ್ತು ಹಾಕಿದರೆ ಕಾರ್ಮಿಕರು ದೂರು ಕೊಡಿ

ಎಲ್ಲಾ ಕಾರ್ಮಿಕರ ತಪಾಸಣೆ

ಎಲ್ಲಾ ಕಾರ್ಮಿಕರ ತಪಾಸಣೆ

ಬೆಂಗಳೂರಿನಿಂದ ಆಗಮಿಸುವ ಪ್ರಯಾಣಿಕರು ದೂರದ ಊರುಗಳಿಗೆ ತೆರಳ ಬೇಕಿದ್ದರೆ ಅವರಿಗೆ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್‌ಗಳಲ್ಲಿ ತಂಗಲು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ಆಗಮಿಸುವ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

ಸಾರಿಗೆ ಸಚಿವರ ಭೇಟಿ

ಸಾರಿಗೆ ಸಚಿವರ ಭೇಟಿ

ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಬಸ್ ನಿಲ್ದಾಣದಲ್ಲಿರುವ ಕಾರ್ಮಿಕರನ್ನು ಮಾತನಾಡಿಸಿ, ಮಾಹಿತಿ ಪಡೆದುಕೊಂಡರು. ಅಧಿಕಾರಿಗಳಿಗೆ ಹಲವು ಸಲಹೆ, ಸೂಚನೆಗಳನ್ನು ನೀಡಿದರು.

ಬಸ್ ಸಂಚಾರದ ವಿವರಗಳು

ಬಸ್ ಸಂಚಾರದ ವಿವರಗಳು

ಸೋಮವಾರ ಬಿಎಂಟಿಸಿ ಬಸ್ ನಿಲ್ದಾಣದಿಂದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಯಾದಗಿರಿಗೆ ಕೆಎಸ್ಆರ್‌ಟಿಸಿ ಬಸ್ ಸಂಚಾರ ನಡೆಸಲಿದೆ.

ಕೆಎಸ್ಆರ್‌ಟಿ‌ಸಿ‌ ಬಸ್ ನಿಲ್ದಾಣದ ಟರ್ಮಿನಲ್ -1ರಿಂದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಮಂಗಳೂರು, ಮಡಿಕೇರಿ, ‌ಉಡುಪಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆಗೆ ಬಸ್ ಸಂಚರಿಸಲಿದೆ.

ಬಸ್ ನಿಲ್ದಾಣದ ವಿವರ ತಿಳಿಯಿರಿ

ಕೆಎಸ್ಆರ್‌ಟಿಸಿ ಸೋಮವಾರ ಸಂಚಾರ ನಡೆಸುವ ಬಸ್‌ಗಳ ವಿವರ ನೀಡಿದೆ.

English summary
Workers and poor wage labourers who allowed to travel in KSRTC buses from Bengaluru reached the villages. KSRTC bus will run for three days free of cost. Here are the guidelines for the workers to travel in bus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X