ಗೌರಿ-ಗಣೇಶ ಹಬ್ಬ: ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಆಗಸ್ಟ್ 31: ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭಂವಿಸಬಾರದು ಎಂದು ಪೊಲೀಸ್ ಇಲಾಖೆ ಮಾರ್ಗಸೂಚಿಯನ್ನ ಪ್ರಕಟಿಸಿದೆ. ಗೌರಿ-ಗಣೇಶ ಹಬ್ಬವನ್ನು ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಾರ್ಗಸೂಚಿ ಪ್ರಕಟಿಸಲಾಗಿದೆ.
ಗಣೇಶ ಪ್ರತಿಷ್ಠಾಪನೆ ಮತ್ತು ನಿಮಜ್ಜನ ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಮತ್ತು ಆಗಬಹುದಾದ ಅನಾಹುತಗಳನ್ನು ತಪ್ಪಿಸುವ ಉದ್ದೇಶದಿಂದಾಗಿ ಬೆಂಗಳೂರು ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಕೆಲವು ಕಟ್ಟುನಿಟ್ಟಿನ ಸೂಚನೆ ಹೊರಡಿಸಿದೆ.

ಏನಿದೆ ಮಾರ್ಗಸೂಚಿಯಲ್ಲಿ..?
1) ಗಣೇಶ ಪ್ರತಿಷ್ಠಾಪನೆಗೆ ಶಾಮಿಯಾನ ಹಾಕಲು ಬಿಬಿಎಂಪಿ ಅನುಮತಿ ಪಡೆಯುವುದು ಕಡ್ಡಾಯ.
2) ಪಿಒಪಿ ಗಣೇಶ ಸಂಬಂಧಿಸಿದಂತೆ ನಿಯಮಗಳನ್ನು ಪಾಲಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ಕ್ರಮ ತೆಗೆದುಕೊಳ್ಳುತ್ತಾರೆ.
3) ಇಬ್ಬರು ಆಯೋಜಕರು ಗಣೇಶ ಕೂರಿಸುವ ಸ್ಥಳದಲ್ಲಿ ಇರಬೇಕು.
4) ವಿವಾದಿತ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವಂತಿಲ್ಲ.
5) ಪ್ಲೆಕ್ಸ್ ಮತ್ತು ಬ್ಯಾನರ್ ಸಂಬಂಧಿಸಿದಂತೆ ಹೈಕೋರ್ಟ್ ಮತ್ತು ಬಿಬಿಎಂಪಿ ನಿಯಮ ಪಾಲನೆ ಕಡ್ಡಾಯ
6) ಮನರಂಜನಾ ಕಾರ್ಯಕ್ರಮಕ್ಕೆ ರಾತ್ರಿ 10ರ ವರೆಗೆ ಮಾತ್ರ ಅವಕಾಶ
7) ಡಿಜೆ ಸಿಸ್ಟಮ್ ನಿಷೇಧ
8) ವಾಹನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ಗಣೇಶ ಕೂರಿಸುವಂತಿಲ್ಲ
9) ಬಲವಂತವಾಗಿ ಛಂದ ಎತ್ತುವಂತಿಲ್ಲ, ಛಂದ ಎತ್ತುವುದು ಗಮನಕ್ಕೆ ಬಂದರೆ ಸೂಕ್ತ ಕ್ರಮ
10) ಸಿಸಿಟಿವಿ ಅಳವಡಿಕೆ ಕಡ್ಡಾಯ
11) ಸ್ಕಾಂ, ಅಗ್ನಿಶಾಮಕ ದಳ ಹಾಗೂ ಸಂಚಾರ ಪೊಲೀಸರಿಂದ ನಿರಪೇಕ್ಷಣಾ ಪತ್ರ (ಎನ್.ಓ.ಸಿ) ಪಡೆಯಬೇಕು.
12) ಹಿರಿಯ ನಾಗಕರಿಕರು, ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಬಳಸಬೇಕು. ಈ ನಿಯಮ ಉಲ್ಲಂಘನೆ ಮಾಡಿದರೆ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
13) ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಯಾವುದೇ ಕಾರಣಕ್ಕೂ ಮೆರವಣಿಗೆ ಮಾರ್ಗಗಳನ್ನು ಬದಲಾಯಿಸಬಾರದು. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚತುರ್ಥಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಿದೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐಪಿಸಿ ಸೆಕ್ಷನ್ 1860 ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು.
ಪ್ರತಿಷ್ಠಾಪನೆ ನಿಬಂಧನೆಗಳು:
* ಸಾರ್ವಜನಿಕ ಸ್ಥಳದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಮೊದಲಿಗೆ ಪೊಲೀಸ್ ಠಾಣೆಯಿಂದ ಅನುಮತಿ ಪಡೆಯುವುದು ಅವಶ್ಯವಾಗಿದೆ. ಮೂರ್ತಿ ಪ್ರತಿಷ್ಠಾಪನೆಯಿಂದ ಸಾರ್ವಜನಿಕರು, ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಸಾರ್ವಜನಿಕರು ಹಾಗೂ ವಾಹನ ಸಂಚಾರ ದಟ್ಟಣೆಯಿರುವ ರಸ್ತೆಗಳಲ್ಲಿ ಪ್ರತಿಷ್ಠಾಪನೆಗೆ ಅವಕಾಶವಿರುವುದಿಲ್ಲ.
* ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗಾಗಿ ಬಲವಂತವಾಗಿ ಹಾಗೂ ಕಾನೂನು ಬಾಹಿರವಾಗಿ ವಂತಿಗೆಯನ್ನು ಸಂಗ್ರಹಿಸುವವರ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು.
* ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಸಾರ್ವಜನಿಕ ಸ್ಥಳದಲ್ಲಿ ಚಪ್ಪರ, ಶಾಮಿಯಾನಗಳನ್ನು ಬಂದೋಬಸ್ತಾಗಿ ನಿರ್ಮಿಸಬೇಕು. ಈ ಬಗ್ಗೆ ಬಿಬಿಎಂಪಿಯಿಂದ ಪರವಾನಗಿ ಪಡೆಯುವುದು ಅವಶ್ಯವಾಗಿದೆ.
ಯಾವುದೇ ಕಾರಣಕ್ಕೂ ವಿವಾದಿತ ಸ್ಥಳದಲ್ಲಿ ಗಣೇಶ ಮೂರ್ತಿಗಳನ್ನ ಪ್ರತಿಷ್ಠಾಪಿಸಬಾರದು. ಪ್ರತಿಷ್ಠಾಪನೆ ಮಾಡುವ ಸ್ಥಳದ ಮಾಲೀಕರ ಅನುಮತಿ ಪಡೆದು, ಈ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ನೀಡಬೇಕು.
* ನ್ಯಾಯಾಲಯದ ನಿರ್ದೇಶನದ ಅನ್ವಯ ಪ್ಲೆಕ್ಸ್ ಮತ್ತು ಬೋರ್ಡ್ಗಳನ್ನು ಅಳವಡಿಸಲು ಅವಕಾಶವಿರುವುದಿಲ್ಲ. ಆದ್ದರಿಂದ ಫ್ಲೆಕ್ಸ್, ಬೋರ್ಡ್ ಹಾಗೂ ಬ್ಯಾನರ್‌ಗಳ ಸಂಬಂಧ ಬಿಬಿಎಂಪಿಯಿಂದ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
* ಗಣೇಶ ವಿಗ್ರಹಗಳ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಗಣೇಶ ಪ್ರತಿಷ್ಠಾಪನೆ ಮಾಡಿದ ಸ್ಥಳದಲ್ಲಿ ಯಾವುದೇ ಆಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ದಿನದ 24 ಗಂಟೆಗಳ ಕಾಲ ಇಬ್ಬರು ಜವಾಬ್ದಾರಿಯುತ ಕಾರ್ಯಕರ್ತರು ಇರುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು.
* ಆಯೋಜಕರು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿ ಕ್ಯಾಮೆರಾ ಆಳವಡಿಸಬೇಕು. ಗಣೇಶ ಮೂರ್ತಿಗಳ ಪ್ರತಿಷ್ಠಾಪನ ಸ್ಥಳಗಳಲ್ಲಿ ಸ್ಥಳೀಯ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ದಳದ ದೂರವಾಣಿ ಸಂಖ್ಯೆ, ಪದಾಧಿಕಾರಿಗಳ ಮೊಬೈಲ್ ಸಂಖ್ಯೆಗಳನ್ನು ನಮೂದಿಸಿರಬೇಕು. ಅಲ್ಲದೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಸ್ಥಳಗಳಲ್ಲಿ ಬೆಂಕಿ ನಂದಿಸುವ ಸಾಮಗ್ರಿಗಳನ್ನು ಅಳವಡಿಸಿಕೊಳ್ಳುವುದು ಅವಶ್ಯವಾಗಿದೆ.
* ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಹಾಗೂ ಸುತ್ತಮುತ್ತ ಅಡುಗೆ ಕಟ್ಟಿಗೆ, ಉರುವಲು, ಸೀಮೆ ಎಣ್ಣೆ ಸಾಧನಗಳನ್ನು ಇಡುವಂತಿಲ್ಲ. ಅಡುಗೆ ಮಾಡುವಂತಿಲ್ಲ.
* ವಿದ್ಯುತ್ ಮತ್ತು ಅಲಂಕಾರದ ವೈರಿಂಗ್ ಬಗ್ಗೆ ಬೆಸ್ಕಾಂ ಇಲಾಖೆಯಿಂದ ಅನುಮತಿ ಪಡೆಯುವುದು ಅವಶ್ಯವಾಗಿದ್ದು, ಅಗ್ನಿಶಾಮಕ ದಳ ಹಾಗೂ ಸಂಚಾರ ಪೊಲೀಸರಿಂದ ನಿರಪೇಕ್ಷಣಾ ಪತ್ರ ಪಡೆಯಬೇಕು.
ಗಣೇಶ ಮೂರ್ತಿಯ ಪ್ರತಿಷ್ಠಾಪನಾ ಸ್ಥಳದಲ್ಲಿ ದಿನದ 24 ಗಂಟೆ ಸಮರ್ಪಕ ಬೆಳಕು ಇರುವಂತೆ ನೋಡಿಕೊಳ್ಳಬೇಕು.
* ಗಣೇಶ ಪ್ರತಿಷ್ಠಾಪನ ಸ್ಥಳಕ್ಕೆ ಸಾರ್ವಜನಿಕರಿಗೋಸ್ಕರ ಸಮರ್ಪಕವಾದ ಆಗಮನ ಮತ್ತು ನಿರ್ಗಮನದ ವ್ಯವಸ್ಥೆಯನ್ನು ಮಾಡಬೇಕು. ಜೊತೆಗೆ ಜನಸಂದಣಿಯನ್ನು ನಿಯಂತ್ರಿಸುವ ಬಗ್ಗೆ ಬ್ಯಾರಿಕೇಡ್‌ಗಳನ್ನು ನಿರ್ಮಿಸಿ, ಸ್ವಯಂ ಸೇವಕರನ್ನು ನೇಮಿಸಿಕೊಂಡು ಯಾವುದೇ ಜನಜಂಗುಳಿಗೆ ಆಸ್ಪದ ನೀಡದಂತೆ ನೋಡಿಕೊಳ್ಳಬೇಕು. ಗಣೇಶ ವಿಗ್ರಹ ಪ್ರತಿಷ್ಠಾಪನೆಯ ಎಲ್ಲಾ ಪರಿಕರಗಳ ರಕ್ಷಣೆಗಾಗಿ ಸದರಿ ಕಾರ್ಯಕ್ರಮಗಳನ್ನು ಆಯೋಜಿಸುವವರೇ ಜವಬ್ದಾರಿರಾಗಿರುತ್ತಾರೆ.
* ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಯಾವುದೇ ರೀತಿಯ ಅಪರಾಧಗಳು ನಡೆಯದಂತೆ ಗಮನಹರಿಸಬೇಕು. ಮೆರವಣಿಗೆ ಸಮಯದಲ್ಲಿ ಯಾವುದೇ ಅಪರಾಧಗಳು ನಡೆದರೆ ಆಯೋಜಕರೆ ಜವಬ್ದಾರರಾಗಿರುತ್ತಾರೆ.
* ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮನರಂಜನಾ ಕಾರ್ಯಕ್ರಮ, ಮೆರವಣಿಗೆ ಮತ್ತು ವಿಸರ್ಜನಾ ಸ್ಥಳಗಳಲ್ಲಿ ಹೆಣ್ಣುಮಕ್ಕಳನ್ನು ಚುಡಾಯಿಸುವುದು ಹಾಗೂ ಕೀಟಲೆ ಮಾಡದಂತೆ ಆಯೋಜಕರೆ ಪೂರ್ಣ ಜವಬ್ದಾರಿಯನ್ನು ವಹಿಸಬೇಕು.
* ಹಿರಿಯ ನಾಗಕರಿಕರು, ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಲು ಸ್ಥಳೀಯ ಪೊಲೀಸರ ಅನುಮತಿ ಪಡೆದುಕೊಳ್ಳತಕ್ಕದ್ದು. ಧ್ವನಿವರ್ಧಕಗಳ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿದ್ದು, ಡಿಜೆ ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶವಿಲ್ಲ.
* ಗಣೇಶ ಮೂರ್ತಿ ಪ್ರತಿಷ್ಠಾಪನ ಮಂಡಳಿಯ ಸಂಘಟಕರು ತಮ್ಮ ಮಂಡಳಿಯ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಇತರ ಪದಾಧಿಕಾರಿಗಳ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನ ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಒದಗಿಸಬೇಕು.
ವಿಸರ್ಜನಾ ಕಾರ್ಯಕ್ರಮಕ್ಕೆ ನಿಬಂಧನೆಗಳು
* ಗಣೇಶ ನಿಮಜ್ಜನಾ ಮೆರವಣಿಗೆ ಸಮಯದಲ್ಲಿ ಸ್ವಯಂಸೇವಕರನ್ನು ಗುರುತಿಸಲು ಅವರಿಗೆ ಗುರುತಿನ ಚೀಟಿ, ಬ್ಯಾಡ್ಜ್, ಟೀ-ಶರ್ಟ್ ಅಥವಾ ಕ್ಯಾಪ್‌ಗಳನ್ನು ನೀಡಿರಬೇಕು. ಶಾಂತ ರೀತಿಯಲ್ಲಿ ವಿಸರ್ಜನಾ ಸ್ಥಳಕ್ಕೆ ಹೋಗಲು ಅನುವು ಮಾಡಿಕೊಡಬೇಕು.
* ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿದ್ದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮುಂಚಿತವಾಗಿ ಮಾಹಿತಿ ನೀಡಿ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಬೇಕು.
* ಮೆರವಣಿಗೆಯು ಸೂಕ್ಷ್ಮ, ಅತೀ ಸೂಕ್ಷ್ಮ ಸ್ಥಳ ಹಾಗೂ ಪ್ರಾರ್ಥನಾ ಸ್ಥಳಗಳ ಮುಂಭಾಗದಲ್ಲಿ ಸಾಗುವಾಗ ಸಿಡಿಮದ್ದು, ಪಟಾಕಿಗಳನ್ನು ಸಿಡಿಸಬಾರದು ಹಾಗೂ ಕರ್ಪೂರಗಳನ್ನು ಹಚ್ಚಬಾರದು.
ಗಣೇಶ ನಿಮಜ್ಜನಾ ಮೆರವಣಿಗೆ ಸಂಬಂಧ ಯಾವುದೇ ಕಾರಣಕ್ಕೂ ಮೆರವಣಿಗೆ ಮಾರ್ಗಗಳನ್ನು ಬದಲಾಯಿಸಬಾರದು. ಬದಲಾಯಿಸಿದ್ದಲ್ಲಿ ಆಯೋಜಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು.
* ಗಣೇಶ ನಿಮಜ್ಜನಾ ಸಂಬಂಧ ಮೆರವಣಿಗೆಯು ರಾತ್ರಿ 10 ಗಂಟೆಯೊಳಗೆ ಮುಗಿಯುವಂತೆ ಆಯೋಜಕರು ನೋಡಿಕೊಳ್ಳತಕ್ಕದ್ದು. ಮೆರವಣಿಗೆ ಸಮಯದಲ್ಲಿ ಎಲೆಕ್ಟಿಕಲ್ ವೈರ್, ಮರದ ಕೊಂಬೆಗಳ ಬಗ್ಗೆ ಗಮನಹರಿಸಿ, ವಿಸರ್ಜನಾ ಮೆರವಣಿಗೆ ಸುಸೂತ್ರವಾಗಿ ಹೋಗಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಸಂಬಂಧಪಟ್ಟ ಇಲಾಖೆಯಿಂದ ಪಡೆದಿರಬೇಕು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications