ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್ ಚುನಾವಣಾ ಫಲಿತಾಂಶ,ಸುಶಾಸನದ ಫಲ: ಸಿಎಂ ಬಸವರಾಜ ಬೊಮ್ಮಾಯಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 08: ಗುಜರಾತ್ ಚುನಾವಣಾ ಫಲಿತಾಂಶ ಸುಶಾಸನದ ಫಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಮುನ್ನಡೆಯಲ್ಲಿದ್ದು, ಈ ಬಾರಿಯೂ ಗುಜರಾತ್ ನಲ್ಲಿ ಅಭೂತಪೂರ್ವ ಗೆಲುವು ಸಾಧಿಸುತ್ತಿದೆ. ಕಳೆದ ಎಲ್ಲ ಚುನಾವಣೆ ಗಳಿಗಿಂತ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುತ್ತಿದ್ದೇವೆ. ಇದು ಚುನಾವಣೋತ್ತರ ಸಮೀಕ್ಷೆ ಯಲ್ಲಿಯೂ ತಿಳಿದು ಬಂದಿತ್ತು. ಒಂದು ರಾಜ್ಯದಲ್ಲಿ ಸುಶಾಸನ ತಂದರೆ ಜನ ಬೆಂಬಲ ಕೊಡುತ್ತಾರೆ. ಇದುವರೆಗೂ ದೇಶದಲ್ಲಿ ಆಡಳಿತ ವಿರೋಧ ಟ್ರೆಂಡ್ ಇತ್ತು. ಗುಜರಾತ್ ಆಡಳಿತದ ಪರವಾಗಿದೆ ಎಂದು ನಿರೂಪಿಸಿದೆ. 7 ನೇ ಬಾರಿ ಗೆಲ್ಲುತ್ತಿರುವುದು ಸುಲಭದ ಮಾತಲ್ಲ. ಆಡಳಿತದ ಪರವಾಗಿ ಜನ ನಿಲ್ಲಲು ಸರ್ಕಾರಗಳು ಕೆಲಸ ಮಾಡಬೇಕಾಗುತ್ತದೆ. ಆ ಕೆಲಸವನ್ನು ಗುಜರಾತ್ ಸರ್ಕಾರ ಮಾಡಿದೆ ಎಂದರು.

Recommended Video

ಗುಜರಾತ್ ಭರ್ಜರಿ ಮುನ್ನಡೆಗೆ ಸಿ.ಎಂ ಬೊಮ್ಮಾಯಿ ಫಸ್ಟ್ ರಿಯಾಕ್ಷನ್ | Oneindia Kannada

ಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳುಗುಜರಾತ್, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ 2022 - ಲೈವ್ ಫಲಿತಾಂಶಗಳು

ಎಲ್ಲಕ್ಕೂ ಮಿಗಿಲಾಗಿ ಇದಕ್ಕೆ ಅಡಿಪಾಯ ಹಾಕಿ ಬೆಳಸಿ, ಮಾರ್ಗದರ್ಶನ ಮಾಡುತ್ತಿರುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ. ಅವರ ಸಕಾರಾತ್ಮಕ ನಾಯಕತ್ವ ಸುಮಾರು ಒಂದು ತಲೆಮಾರು ದಾಟಿದರೂ ಹಳೆ ಮತ್ತು ಹೊಸ ಪೀಳಿಗೆ ಅವರ ಆಡಳಿತ, ದಕ್ಷತೆಯನ್ನು ಒಪ್ಪಿದ್ದಾರೆ. ದೇಶ ಮುನ್ನಡೆಸುವ ಶಕ್ತಿಯ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಕಳೆದ ಬಾರಿ 3 ರಾಜ್ಯಗಳಲ್ಲಿ ಸಹ ಗೆದ್ದಿದ್ದೇವೆ. ಹಿಮಾಚಲ ಪ್ರದೇಶದಲ್ಲಿ ಸಮಬಲದ ಹೋರಾಟವಿದೆ. ಅಂತಿಮವಾಗಿ ಬಿಜೆಪಿ ಗೆದ್ದು ಸರ್ಕಾರ ರಚಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

gujarat election results is the result of good governance says basavaraj bommai

ನವದೆಹಲಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ 15 ವರ್ಷ ಆಡಳಿತ ಮಾಡುವುದೇ ದೊಡ್ಡ ಸಾಧನೆ. ಸ್ಥಳೀಯ ಸಮಸ್ಯೆಗಳು ಬಹಳ ಇರುತ್ತವೆ. ಮತದಾರರ ಸಣ್ಣ ಸಂಖ್ಯೆ, ಬಹು ಆಯಾಮದ ಸ್ಪರ್ಧೆ ಇರುತ್ತದೆ ಮುನಿಸಿಪಲ್ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಗೆ ಹೋಲಿಕೆ ಮಾಡಲಾಗುವುದಿಲ್ಲ ಎಂದರು.

ಬಿಜೆಪಿ ಗೆಲುವಿನ ಪರಿಣಾಮ ಸಕಾರಾತ್ಮಕವಾಗಿ ಕರ್ನಾಟಕದ ಚುನಾವಣೆಯ ಮೇಲೆ ಆಗಿಯೇ ಆಗುತ್ತದೆ. ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ದೊಡ್ಡ ನೈತಿಕ ಬಲ ಸಿಗಲಿದೆ. ಇನ್ನಷ್ಟು ಹುರುಪು, ಹುಮ್ಮಸ್ಸಿನಲ್ಲಿ ಕೆಲಸ ಮಾಡಿದರೆ ಜಯ ನಿಶ್ಚಿತ ಎಂದರು.

ಚುನಾವಣಾ ಫಲಿತಾಂಶ ಪರಿಣಾಮ ಬೀರುವುದಿಲ್ಲ ಎಂದಿರುವ ವಿಪಕ್ಷ ನಾಯಕರ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿಗಳು ಅವರು ಹಾಗೆಯೇ ಹೇಳಬೇಕು. ಅವರು ಹೇಳಿದ್ದು ಯಾವುದೂ ನಿಜವಾಗಿಲ್ಲ ಎಂದರು.

English summary
gujarat election results is the result of good governance says basavaraj bommai,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X