ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೂ ಪರಿಣಾಮ ಬೀರಲಿದೆ: ಮುರುಗೇಶ್ ನಿರಾಣಿ
ಬೆಂಗಳೂರು, ಡಿಸೆಂಬರ್ 8: ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಸತತ 7ನೇ ಬಾರಿಗೆ ಗುಜರಾತ್‍ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ್ದು,ಗುಜರಾತ್ ಚುನಾವಣಾ ಫಲಿತಾಂಶ ಕರ್ನಾಟಕ ಚುನಾವಣೆ ಮೇಲೂ ಪರಿಣಾಮ ಬೀರಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆಯನ್ನ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಾಡ್ಡ ಅವರ ಸಂಘಟನಾ ಚಾತುರ್ಯ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ತಂತ್ರಗಾರಿಕೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸರಳತೆ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವಿಗೆ ಕಾರಣವಾಗಿದೆ.
Recommended Video
ವಿಶ್ವ ನಾಯಕ ನರೇಂದ್ರಮೋದಿ ಅವರ ಜನಪ್ರಿಯತೆಗೆ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶವೇ ಸಾಕ್ಷಿ. ಸ್ವಚ್ಛ, ಪಾರದರ್ಶಕ ಹಾಗೂ ಸರ್ವರ ವಿಕಾಸವೇ ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂದಿದ್ದಾರೆ. ಒಂದು ರಾಜ್ಯದಲ್ಲಿ ಸತತವಾಗಿ 7ನೇ ಬಾರಿ ಅಧಿಕಾರಕ್ಕೆ ಬರುವುದೆಂದರೆ ಸಾಮಾನ್ಯ ಮಾತಲ್ಲ. ಅಲ್ಲಿನ ಜನತೆ ಪಕ್ಷ ಮತ್ತು ನಾಯಕತ್ವದ ಮೇಲೆ ನಂಬಿಕೆ ಇಟ್ಟು ಹಿಂದಿನ ದಾಖಲೆಗಳನ್ನು ಮುರಿದು ಇಷ್ಟು ದೊಡ್ಡ ಮಟ್ಟದಲ್ಲಿ ಜನಾದೇಶ ನೀಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಯಾರು ಏನೇ ಹೇಳಲಿ ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಖಂಡಿತವಾಗಿ ಪರಿಣಾಮ ಬೀರಲಿದೆ. ಇಲ್ಲಿನ ಮತದಾರರು ಕೂಡ ಪ್ರಬುದ್ದರಾಗಿದ್ದು, ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಕೈ ಹಿಡಿಯಲಿದ್ದಾರೆ ಎಂದು ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಅಭಿವೃದ್ಧಿ ವೇಗ ಮತ್ತು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಾಯವಾಗಲಿದೆ. ಹೀಗಾಗಿ 2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ 100ಕ್ಕೆ ನೂರರಷ್ಟು ಫಲಿತಾಂಶ ಬರಲಿದೆ ಎಂದು ನಿರಾಣಿ ಅವರು ಭವಿಷ್ಯ ನುಡಿದಿದ್ದಾರೆ.
ಪ್ರಧಾನಿ ನರೇಂದ್ರಮೋದಿ ಅವರ ಜನಪ್ರಿಯತೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸರಳತೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ದಕ್ಷ ನಾಯಕತ್ವ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರ ಸಂಘಟನೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನಿರ್ದೇಶನ, ಕೇಂದ್ರ ಮತ್ತು ರಾಜ್ಯ ನಾಯಕರ ಮಾರ್ಗದರ್ಶನ ಮತ್ತು ಸಂಘ ಪರಿವಾರದ ನಾಯಕರ ಸಲಹೆಯಂತೆ ಪಕ್ಷವನ್ನು ಮುನ್ನಡೆಸಲಿದ್ದೇವೆ ಎಂದು ನಿರಾಣಿ ತಿಳಿಸಿದ್ದಾರೆ.

ಹಿಮಾಚಲಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಅಲ್ಲಿ ಒಂದು ಬಾರಿ ಆಡಳಿತ ನಡೆಸಿದ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ. ನಾವು ಅಲ್ಲಿಯೂ ಕೂಡ ಅಧಿಕಾರಕ್ಕೆ ಬರಬಹುದೆಂಬ ವಿಶ್ವಾಸ ಇಟ್ಟುಕೊಂಡಿದ್ದೆವು. ನಮಗೆ ಏಕೆ ಹಿನ್ನಡೆಯಾಗಿದೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವುದಾಗಿ ಸಚಿವ ನಿರಾಣಿ ಅವರು ತಿಳಿಸಿದ್ದಾರೆ.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications