ಬೀದರ್‌ನಲ್ಲಿ ಬುಧವಾರ ಗುರುಪಾದಪ್ಪ ನಾಗಮಾರಪಲ್ಲಿ ಅಂತ್ಯಕ್ರಿಯೆ
ಬೀದರ್, ನವೆಂಬರ್ 17 : ಬೀದರ್ ಕ್ಷೇತ್ರದ ಕೆಜೆಪಿ ಶಾಸಕ ಮತ್ತು ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ಅವರ ಅಂತ್ಯಕ್ರಿಯೆ ಬೀದರ್‌ನಲ್ಲಿ ಬುಧವಾರ ಬೆಳಗ್ಗೆ ನಡೆಯಲಿದೆ. ಹೃದಯಾಘಾತದಿಂದಾಗಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ಗುರುಪಾದಪ್ಪ ನಾಗಮಾರಪಲ್ಲಿ ಮೃತಪಟ್ಟಿದ್ದಾರೆ.
ಬೀದರ್‌ನಲ್ಲಿ ಮಾತನಾಡಿದ ಗುರುಪಾದಪ್ಪ ನಾಗಮಾರಪಲ್ಲಿ ಅವರ ಪುತ್ರ ಉಮಾಕಾಂತ್ ನಾಗಮಾರಪಲ್ಲಿ ಅವರು ಅಂತ್ಯ ಸಂಸ್ಕಾರದ ಕುರಿತು ಮಾಹಿತಿ ನೀಡಿದ್ದಾರೆ. 'ಬುಧವಾರ ಬೆಳಗ್ಗೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ' ಎಂದು ತಿಳಿಸಿದ್ದಾರೆ. [ನಾಗಮಾರಪಲ್ಲಿ ಸಾವಿಗೆ ಕಂಬನಿ ಮಿಡಿದ ಗಣ್ಯರು]

'ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಗುರುಪಾದಪ್ಪ ನಾಗಮಾರಪಲ್ಲಿ ಅವರ ಮೃತದೇಹವನ್ನು ಬೀದರ್‌ಗೆ ತರಲಾಗುತ್ತದೆ. ಡಿಸಿಸಿ ಬ್ಯಾಂಕ್ ಆವರಣದಲ್ಲಿ ರಾತ್ರಿಯ ತನಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಂಜೆ ಮೃತದೇಹವನ್ನು ಔರಾದ್‌ಗೆ ತೆಗೆದುಕೊಂಡು ಹೋಗಲಾಗುತ್ತದೆ' ಎಂದು ಹೇಳಿದ್ದಾರೆ. [ನಾಗಮಾರಪಲ್ಲಿ ಪರಿಚಯ ಓದಿ]
ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿ ಗುರುಪಾದಪ್ಪ ನಾಗಮಾರಪಲ್ಲಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದರು.
ನವೆಂಬರ್ 11 ರಂದು ಬೀದರ್‍ನಲ್ಲಿ ತಮ್ಮ ಅಭಿಮಾನಿಗಳ ಸಮ್ಮುಖದಲ್ಲಿ ತಮ್ಮ 74 ನೇ ಹುಟ್ಟು ಹಬ್ಬವನ್ನು ಅತ್ಯಂತ ಅದ್ದೂರಿಯಿಂದ ಆಚರಿಸಿಕೊಂಡ ಗುರುಪಾದಪ್ಪ ನಾಗಮಾರಪಲ್ಲಿ ಅವರು ಐದು ದಿನಗಳ ನಂತರ ನಮ್ಮೊಂದಿಗಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಅಗಲಿಕೆಯಿಂದ ಉಂಟಾದ ದುಃಖವನ್ನು ಭರಿಸಲು ಶಕ್ತಿಯನ್ನು ದೇವರು ನೀಡಲಿ ಎಂದು ಸಿದ್ದರಾಮಯ್ಯ ಪ್ರಾರ್ಥಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications