ದಿವಂಗತ ಗುರುಪಾದಪ್ಪ ನಾಗಮಾರಪಲ್ಲಿ ಸಂಕ್ಷಿಪ್ತ ಪರಿಚಯ
ಬೆಂಗಳೂರು, ನವೆಂಬರ್ 17 : ಬೀದರ್ ಕ್ಷೇತ್ರದ ಕೆಜೆಪಿ ಶಾಸಕ ಮತ್ತು ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಮಂಗಳವಾರ ಮುಂಜಾನೆ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.
ಬುಧವಾರ ಬೆಳಗ್ಗೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಂತಾಕಿ ಗ್ರಾಮದಲ್ಲಿ ಗುರುಪಾದಪ್ಪ ನಾಗಮಾರಪಲ್ಲಿ ಅವರ ಅಂತ್ಯಸಂಸ್ಕಾರ ನಡೆಯಲಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಗುರುಪಾದಪ್ಪ ನಾಗಮಾರಪಲ್ಲಿ ಅವರ ಮೃತದೇಹವನ್ನು ಬೀದರ್ಗೆ ತೆಗೆದುಕೊಂಡು ಹೋಗಲಾಗುತ್ತದೆ. [ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶ]

7 ಬಾರಿ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಅಪಾರವಾದದ್ದು. ಮೊದಲು ಔರಾದ್ ಕ್ಷೇತ್ರದ ಶಾಸಕರಾಗಿದ್ದ ಅವರು ಕ್ಷೇತ್ರ ಪುನರ್ವಿಂಗಡನೆ ನಂತರ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದರು. ಗುರುಪಾದಪ್ಪ ನಾಗಮಾರಪಲ್ಲಿ ಅವರ ಸಂಕ್ಷಿಪ್ತ ಪರಿಚಯ ಇಲ್ಲಿದೆ.......
* ಗುರುಪಾದಪ್ಪ ನಾಗಮಾರಪಲ್ಲಿ ಬೀದರ್ ಕ್ಷೇತ್ರದ ಹಾಲಿ ಶಾಸಕ (ಕೆಜೆಪಿ)
* ತಂದೆ ಸಂಗನಬಸಪ್ಪ ನಾಗಮಾರಪಲ್ಲಿ
* 1984 ರಿಂದ 2007ರ ತನಕ ಔರಾದ್ ಶಾಸಕರಾಗಿ ಕಾರ್ಯ ನಿರ್ವಹಣೆ
* 2008ರಲ್ಲಿ ಬೀದರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ
* 2013ರ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಗೆಲುವು
* 1989ರಲ್ಲಿ ಗೃಹ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಣೆ
* 1996-1998ರ ಅವಧಿಯಲ್ಲಿ ಸಂಪುಟ ದರ್ಜೆಯ ಅರಣ್ಯ ಸಚಿವರಾಗಿ ಕಾರ್ಯ ನಿರ್ವಹಣೆ
* 2005-2006ರ ಅವಧಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾಗಿ ಕಾರ್ಯನಿರ್ವಹಣೆ
* ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಬಿಜೆಪಿ ತೊರೆದು ಕೆಜೆಪಿ ಸೇರಿದ್ದರು
* 2013ರ ವಿಧಾನಸಭೆ ಚುನಾವಣೆಯಲ್ಲಿ 50,718 ಮತಗಳನ್ನು ಪಡೆದು ಜಯಗಳಿಸಿದ್ದರು
* ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ನ ರಹೀಮ್ ಖಾನ್ ಅವರನ್ನು ಸೋಲಿಸಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications