Nikhil Kumaraswamy: ನಿಖಿಲ್‌ ಕುಮಾರಸ್ವಾಮಿ ಸೋಲಿನ ಬಗ್ಗೆ ಎಚ್‌ಡಿ ಕುಮಾರಸ್ವಾಮಿ ಮೊದಲ ರಿಯಾಕ್ಷನ್

Channapatna By Election Results 2024: ನವೆಂಬರ್ 23ರಂದು ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮೂರರಲ್ಲೂ ಬಿಜೆಪಿ ಗೆಲುವಿನ ನಗೆ ಬೀರಿದೆ. ಅದರಲ್ಲೂ ಹೈ ವೋಲ್ಟೇಜ್‌ ಕ್ಷೇತ್ರವಾಗಿದ್ದ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್‌ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಈ ಬಗ್ಗೆ ಅವರ ತಂದೆ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮೊದಲ ರಿಯಾಕ್ಷನ್‌ ನೀಡಿದ್ದಾರೆ.

ಕರ್ನಾಟಕದ ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಮೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಉಪಚುನಾವಣೆ ನಡೆದಿತ್ತು. ನಿನ್ನೆ ಅಂದರೆ ನವೆಂಬರ್ 23ರಂದು ಫಲಿತಾಂಶ ಹೊರಬಿದ್ದಿದ್ದು, ಮೂರರಲ್ಲೂ ಬಿಜೆಪಿ ಜಯಭೇರಿ ಬಾರಿಸಿಸಿದೆ. ಇನ್ನು ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

H D Kumaraswamy First Reaction to Nikhil Kumaraswamy s Defeat

ಇಂದು (ನವೆಂಬರ್ 24) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಚರ್ಚೆ ಮಾಡಿ ಏನೂ ಪ್ರಯೋಜನ ಇಲ್ಲ. ಜನರು ನೀಡಿರುವ ತೀರ್ಪಿಗೆ ತಲೆ ಬಾಗಲೇಬೇಕು. ಏನೇ ಇದ್ದರೂ ಆಮೇಲೆ ಮಾತನಾಡುತ್ತೇನೆ ಎಂದು ಮಗನ ಸೋಲಿನ ಬಗ್ಗೆ ಮೊಲದ ಪ್ರತಿಕ್ರಿಯೆ ನೀಡಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು 25,413 ಮತಗಳಿಂದ ಸೋಲಿಸಿ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಸಿ.ಪಿ.ಯೋಗೇಶ್ವರ್ 1,12,642 ಮತ ಪಡೆದು ಗಲುವು ಸಾಧಿಸಿದರೆ, ನಿಖಿಲ್ ಕುಮಾರಸ್ವಾಮಿ 87,229 ಮತಗಳನ್ನು ಪಡೆಯುವ ಮೂಲಕ ಸೋಲನುಭವವಿಸಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದರೂ, ಚನ್ನಪಟ್ಟಣದಲ್ಲಿ ಈ ಬಾರಿ ಜಿದ್ದಾಜಿದ್ದಿ ಜೋರಾಗಿಯೇ ನಡೆದಿತ್ತು. 2018ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ, 2023ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ಎರಡು ಸೋಲು ಕಂಡಿದ್ದದ್ದರು. ಆದರೂ ನಿಖಿಲ್ ಕುಮಾರಸ್ವಾಮಿ ಈ ಬಾರಿಯೂ ಕೂಡ ಚನ್ನಪಟ್ಟಣದಲ್ಲಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದು ಮುಗ್ಗರಿಸಿದ್ದಾರೆ.

ಜಾರ್ಖಂಡ್‌ & ಮಹಾರಾಷ್ಟ್ರ ಫಲಿತಾಂಶ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಪಕ್ಷ 288 ಸ್ಥಾನಗಳ ಪೈಕಿ 234 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಪಡೆದಿದ್ದರೆ, ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ 50 ಸ್ಥಾನಗಳನ್ನಷ್ಟೇ ಗೆದ್ದಿದೆ. ಇನ್ನು ಜಾರ್ಖಂಡ್‌ನಲ್ಲಿ 81 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಎಂಎಂ ನೇತೃತ್ವದ ಇಂಡಿಯಾ ಮೈತ್ರಿಕೂಟ 56 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರ ಹಿಡಿದಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟ 24 ಸ್ಥಾನಗಳನ್ನು ಗೆದ್ದಿದೆ.

ಜಾರ್ಖಂಡ್‌ನ 81 ವಿಧಾನಸಭೆ ಸ್ಥಾನಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿತ್ತು. ನವೆಂಬರ್ 13ರಂದು ಮೊದಲ ಹಂತದಲ್ಲಿ 43 ಸ್ಥಾನಗಳಿಗೆ, ನವೆಂಬರ್ 20ರಂದು ಎರಡನೇ ಹಂತದಲ್ಲಿ 38 ಸ್ಥಾನಗಳಿಗೆ ಮತದಾನಡ ನಡೆದಿತ್ತು. ಇನ್ನು ಮಹಾರಾಷ್ಟ್ರದ 288 ಸ್ಥಾನಗಳಿಗೂ ನವೆಂಬರ್ 20ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ನವೆಂಬರ್ 23ರಂದು ಈ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+