ರಾಜ್ಯವ್ಯಾಪಿ ಪಾದಯಾತ್ರೆ ಮಾಡ್ತಾರಂತೆ ಕುಮಾರಣ್ಣ
ಬೆಂಗಳೂರು, ಜ. 25 : ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಕುರಿತು ಜನಜಾಗೃತಿ ಮೂಡಿಸಲು ಬೆಳಗಾವಿಯಿಂದ ಪಾದಯಾತ್ರೆ ನಡೆಸುತ್ತೇನೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿ, ಸಿದ್ದರಾಮಯ್ಯ ಗಣಿ ಅಕ್ರಮದ ವಿರುದ್ಧ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದರು. ಇದೀಗ ಇವರ ಭ್ರಷ್ಟಾಚಾರದ ವಿರುದ್ಧ ನಾನು ರಾಜ್ಯದಲ್ಲಿ ಪಾದಯಾತ್ರೆ ಮಾಡುವ ಕಾಲ ಬಂದಿದೆ ಎಂದು ಹೇಳಿದ್ದಾರೆ.[ಬಿಜೆಪಿ, ಕಾಂಗ್ರೆಸ್ ಭ್ರಷ್ಟಾಚಾರದಿಂದ ಜೆಡಿಎಸ್‌ಗೆ ಮತ್ತೆ ಅವಕಾಶ]

ಸಿದ್ದರಾಮಯ್ಯ ಭ್ರಷ್ಟರ ನಾಯಕರಾಗಿದ್ದಾರೆ. ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ನನಗೆ ಸಂಬಂಧವಿಲ್ಲ ಎಂದು ಹೇಳುವ ಅವರ ಮಾತಿನಲ್ಲಿ ಅರ್ಥವಿಲ್ಲ. ಜನರು ಇಂಥ ಸುಳ್ಳುಗಳಿಗೆ ಬಲಿಯಾಗಲ್ಲ ಎಂದು ಹೇಳಿದರು.
ರೈತರ ಬಗ್ಗೆ ಕಾಳಜಿ ತೋರದ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು? ಜೆಡಿಎಸ್ ನಲ್ಲಿದ್ದಾಗ ಹುಲಿಯಂಥಿದ್ದ ಸಿದ್ದರಾಮಯ್ಯ ಈಗ ಇಲಿಯಾಗಿದ್ದಾರೆ ಎಂದು ವಾಗದಾಳಿ ನಡೆಸಿದರು.
ರೇವಣ್ಣ ಪುತ್ರ ಹಾಜರ್: ಜೆಡಿಎಸ್ ಸಮಾವೇಶಕ್ಕೆ ರೇವಣ್ಣ ಪುತ್ರ ಪ್ರಜ್ವಲ್ ಹಾಜರಾಗಿದ್ದರು. ಇಲ್ಲಿಯವೆರಗೆ ರಾಜಕೀಯವಾಗಿ ಕಾಣಿಸಿಕೊಳ್ಳದ ಪ್ರಜ್ವಲ್ ಸಭೆಯಲ್ಲಿ ಉಪಸ್ಥಿತರಿದ್ದು ತಾತ ಎಚ್,ಡಿ, ದೇವೇಗೌಡ ಆಶೀರ್ವಾದ ಪಡೆದಿದ್ದು ಕುತೂಹಲಕ್ಕೆ ಕಾರಣವಾಯಿತು.[ಜೆಡಿಎಸ್ ಸಮಾವೇಶ, ಜಮೀರ್ ಫೋಟೋ ನಾಪತ್ತೆ!]
ಹಾಳೆಯಲ್ಲಿ ಆಹ್ವಾನ?: ಜೆಡಿಎಸ್ ಸಮಾವೇಶಕ್ಕೆ ನನಗೆ ಜೆರಾಕ್ಸ್ ಹಾಳೆಯಲ್ಲಿ ಆಹ್ವಾನ ಬಂದಿತ್ತು. ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ನಿಜವಾಗಿ ಪಕ್ಷಕ್ಕಾಗಿ ದುಡಿದವರನ್ನು ತಂದೆ ಮಕ್ಕಳು ಮರೆತಿದ್ದಾರೆ. ಸಿದ್ದರಾಮಯ್ಯ ಅವರೇ ಧೀಮಂತ ನಾಯಕ ಎಂದು ಗಂಗಾವತಿಯ ಜೆಡಿಎಸ್ ಇಕ್ಬಾಲ್ ಅನ್ಸಾರಿ ಹೇಳಿದ್ದು ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಟಿಕೆಟ್ ವಿಚಾರವಾಗಿ ನಾನು ಮುನಿಸಿಕೊಂಡಿರಲಿಲ್ಲ: ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
Karnataka Rain: ಚಂಡಮಾರುತ ಪ್ರಸರಣ: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ 6 ದಿನ ಮಳೆ: ಐಎಂಡಿ ವರದಿ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ












Click it and Unblock the Notifications